IND vs AFG: ಹಾರ್ದಿಕ್ ಸ್ಥಾನಕ್ಕೆ ಕುತ್ತು ತಂದೇಬಿಟ್ಟ ಈ ಆಟಗಾರ! ಪಾಂಡ್ಯ ಪಾಲಿಗೆ ಬಂದ್ ಆಗುತ್ತಾ ಟೀಂ ಇಂಡಿಯಾದ ಬಾಗಿಲು?

IND vs AFG 2nd T20I: 2023ರ ವಿಶ್ವಕಪ್‌ ಟೂರ್ನಿಯ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಆ ಬಳಿಕ ತಂಡಕ್ಕೆ ಮರಳಲು ಸಾಧ್ಯವಾಗಲಿಲ್ಲ. ವಿಶ್ವಕಪ್ ನಂತರ ನಡೆದಿದ್ದ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ವಿರುದ್ಧದ ಮೂರು ದೊಡ್ಡ ಸರಣಿಗಳಿಂದಲೂ ಹೊರಗುಳಿದಿದ್ದರು.

Written by - Bhavishya Shetty | Last Updated : Jan 15, 2024, 12:20 PM IST
    • ಪ್ರಸ್ತುತ ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ T20 ಸರಣಿ
    • ಈ ಸರಣಿಯು ಆಲ್’ರೌಂಡರ್ ಶಿವಂ ದುಬೆಗೆ ಮಹತ್ವದ ತಿರುವು ನೀಡಲಿದೆ
    • ಹಾರ್ದಿಕ್ ಪಾಲಿಗೆ ಸಂಕಷ್ಟ ತಂದೊಡ್ಡುತ್ತಾ ಎಂಬ ಅನುಮಾನ
IND vs AFG: ಹಾರ್ದಿಕ್ ಸ್ಥಾನಕ್ಕೆ ಕುತ್ತು ತಂದೇಬಿಟ್ಟ ಈ ಆಟಗಾರ! ಪಾಂಡ್ಯ ಪಾಲಿಗೆ ಬಂದ್ ಆಗುತ್ತಾ ಟೀಂ ಇಂಡಿಯಾದ ಬಾಗಿಲು? title=
Hardik Pandya

IND vs AFG 2nd T20I: ಪ್ರಸ್ತುತ ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ T20 ಅಂತಾರಾಷ್ಟ್ರೀಯ ಸರಣಿಯು ಆಲ್’ರೌಂಡರ್ ಶಿವಂ ದುಬೆಗೆ ಮಹತ್ವದ ತಿರುವು ನೀಡಲಿದೆ. ಈ ಟಿ20 ಅಂತರಾಷ್ಟ್ರೀಯ ಸರಣಿಯಲ್ಲಿ ಶಿವಂ ದುಬೆ ಬ್ಯಾಟಿಂಗ್ ಮತ್ತು ಬೌಲಿಂಗ್’ನಲ್ಲೂ ಸಂಪೂರ್ಣ ಹಿಡಿತ ಸಾಧಿಸಿ, ಮಿಂಚುತ್ತಿದ್ದಾರೆ. ಆದರೆ ಈ ಬೆಳವಣಿಗೆ ಹಾರ್ದಿಕ್ ಪಾಲಿಗೆ ಸಂಕಷ್ಟ ತಂದೊಡ್ಡುತ್ತಾ ಎಂಬ ಅನುಮಾನ ಮೂಡುತ್ತಿದೆ.

ಇದನ್ನೂ ಓದಿ: “ನನ್ನ ಸ್ಥಾನ ತುಂಬಲು ಈತನಿಂದ ಮಾತ್ರ ಸಾಧ್ಯ, ಟೀಂ ಇಂಡಿಯಾದ ಭವಿಷ್ಯ ಬರೆಯುತ್ತಾನೆ” ಎಂದ ಯುವರಾಜ್

2023ರ ವಿಶ್ವಕಪ್‌ ಟೂರ್ನಿಯ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಆ ಬಳಿಕ ತಂಡಕ್ಕೆ ಮರಳಲು ಸಾಧ್ಯವಾಗಲಿಲ್ಲ. ವಿಶ್ವಕಪ್ ನಂತರ ನಡೆದಿದ್ದ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ವಿರುದ್ಧದ ಮೂರು ದೊಡ್ಡ ಸರಣಿಗಳಿಂದಲೂ ಹೊರಗುಳಿದಿದ್ದರು.

ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಶಿವಂ ದುಬೆ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯಲ್ಲಿ ಆಡುವ ಅವಕಾಶ ಪಡೆದಿದ್ದಾರೆ. ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಂಡ ಶಿವಂ ದುಬೆ, 2024ರ T20 ವಿಶ್ವಕಪ್‌’ನಲ್ಲಿ ತಮ್ಮನ್ನು ಏಕೆ ಆಯ್ಕೆ ಮಾಡಬೇಕು ಎಂಬ ಸಮಿತಿಯ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಿದ್ದಾರೆ.

ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಶಿವಂ ದುಬೆ 40 ಎಸೆತಗಳಲ್ಲಿ 60 ರನ್‌’ಗಳ ಅಜೇಯ ಇನ್ನಿಂಗ್ಸ್ ಆಡಿದ್ದರು, ಜೊತೆಗೆ ಒಂದು ವಿಕೆಟ್ ಕೂಡ ಪಡೆದಿದ್ದರು. ಎರಡನೇ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲೂ ಶಿವಂ ದುಬೆ 32 ಎಸೆತಗಳಲ್ಲಿ 63 ರನ್‌’ಗಳ ಅಜೇಯ ಇನ್ನಿಂಗ್ಸ್ ಆಡಿ ಎಲ್ಲರ ಗಮನ ಸೆಳೆದಿದ್ದಾರೆ. ಈ ಇನ್ನಿಂಗ್ಸ್‌’ನಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್‌’ಗಳು ಸೇರಿದ್ದವು.

ಇದೀಗ ಹಾರ್ದಿಕ್ ಪಾಂಡ್ಯ ಸ್ಥಾನಕ್ಕೆ ಶಿವಂ ದುಬೆ ಅಡ್ಡಿಯಾಗುತ್ತಿದ್ದಾರೆಯೇನೋ ಎಂಬ ಅನುಮಾನ ಕಾಡಲಾರಂಭಿಸಿದೆ. 2024ರ ಟಿ20 ವಿಶ್ವಕಪ್ ಜೂನ್ 1 ರಿಂದ ಜೂನ್ 29ರವರೆಗೆ ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ನೆಲದಲ್ಲಿ ನಡೆಯಲಿದೆ. ಟಿ20 ವಿಶ್ವಕಪ್‌’ಗೂ ಮುನ್ನ ಭಾರತ ಆಡುತ್ತಿರುವ ಕೊನೆಯ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿ ಇದಾಗಿದೆ.

ಇದನ್ನೂ ಓದಿ: Top Kannada YouTuber: ದಚ್ಚು, ಕಿಚ್ಚನಿಗಿಂತಲೂ ಅತಿ ಹೆಚ್ಚು ಫಾಲೋವರ್ಸ್ ಹೊಂದಿರೋದು ಕನ್ನಡದ ಈ ಯೂಟ್ಯೂಬರ್! ಯಾರು ಗೊತ್ತಾ ಆ ಅಪ್ಪಟ ಕನ್ನಡಿಗ?

ಶಿವಂ ದುಬೆಗೆ ರೋಹಿತ್ ಬೆಂಬಲ:

ಆಲ್’ರೌಂಡರ್ ಶಿವಂ ದುಬೆಗೆ ನಾಯಕ ರೋಹಿತ್ ಶರ್ಮಾ ಸಂಪೂರ್ಣ ಬೆಂಬಲ ನೀಡಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಭರ್ಜರಿಯಾಗಿ ಮಿಂಚುತ್ತಿರುವ ದುಬೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಸಹ ಆಡಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News