T20 World Cup 2024: ಚುಟುಕು ಮಾದರಿಯ ಕ್ರಿಕೆಟ್ ನಲ್ಲಿ ಕೊಹ್ಲಿ ಹೆಸರಿನಲ್ಲಿವೆ ಈ ವಿಶ್ವದಾಖಲೆಗಳು...!

T20 World Cup records: ಟಿ ೨೦ ವಿಶ್ವಕಪ್ ನಲ್ಲಿನ ಬ್ಯಾಟಿಂಗ್ ದಾಖಲೆಗಳನ್ನು ನೋಡುತ್ತಾ ಹೋದಾಗ ವಿರಾಟ್ ಕೊಹ್ಲಿ 2022 ರ ಹಿಂದಿನ ಆವೃತ್ತಿಯ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಮುರಿದರು. ಕೊಹ್ಲಿ ಕೇವಲ 25 ಇನ್ನಿಂಗ್ಸ್‌ಗಳಲ್ಲಿ 1141 ರನ್‌ಗಳೊಂದಿಗೆ ಅತಿ ಹೆಚ್ಚು ರನ್‌ಗಳ ಪಟ್ಟಿಯಲ್ಲಿ ಅಗ್ರಸ್ತಾನದಲ್ಲಿದ್ದಾರೆ

Written by - Manjunath N | Last Updated : May 30, 2024, 05:55 PM IST
  • ಅಚ್ಚರಿ ಎಂದರೆ ವಿರಾಟ್ ಕೊಹ್ಲಿ ಟಿ ೨೦ ವಿಶ್ವಕಪ್ ನಲ್ಲಿ ಇದುವರೆಗೂ ಶತಕವನ್ನು ದಾಖಲಿಸಿಲ್ಲ ಆದರೆ ಐವತ್ತು ಅಧಿಕ ರನ್ ಗಳನ್ನು ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ.
  • ಕೊಹ್ಲಿ 25 ಇನ್ನಿಂಗ್ಸ್‌ಗಳಲ್ಲಿ 14 ಫಿಫ್ಟಿ ಪ್ಲಸ್ ಸ್ಕೋರ್‌ಗಳನ್ನು ದಾಖಲಿಸಿದ್ದಾರೆ, ಇದು ರೋಹಿತ್ ಶರ್ಮಾ ಮತ್ತು ಕ್ರಿಸ್ ಗೇಲ್‌ಗಿಂತ ಅಧಿಕ ಎನ್ನಲಾಗಿದೆ.
  • 2014 ರ ಆವೃತ್ತಿಯಲ್ಲಿ ಭಾರತ ರನ್ನರ್ ಅಪ್ ಆಗಿ ಮುಕ್ತಾಯಗೊಂಡ ಕೇವಲ ಆರು ಇನ್ನಿಂಗ್ಸ್‌ಗಳಲ್ಲಿ 319 ರನ್ ಗಳಿಸಿದ ಏಕೈಕ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೊಹ್ಲಿ ಹೊಂದಿದ್ದಾರೆ.
 T20 World Cup 2024: ಚುಟುಕು ಮಾದರಿಯ ಕ್ರಿಕೆಟ್ ನಲ್ಲಿ ಕೊಹ್ಲಿ ಹೆಸರಿನಲ್ಲಿವೆ ಈ ವಿಶ್ವದಾಖಲೆಗಳು...! title=

T20 World Cup records: ನವದೆಹಲಿ: ಟಿ ೨೦ ವಿಶ್ವಕಪ್ ಗೆ ಕ್ಷಣಗಣನೆ ಶುರುವಾಗಿದ್ದು, ಈಗಾಗಲೇ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಆಡಲು ಪ್ರವಾಸ ಬೆಳೆಸಿದೆ.ಟಿ ೨೦ ವಿಶ್ವಕಪ್ ನ ಒಂಬತ್ತನೇ ಆವೃತ್ತಿಗೆ ಎಲ್ಲ ತಂಡಗಳು ಅಣಿಯಾಗುತ್ತಿರುವ ಬೆನ್ನಲ್ಲೇ ಟಿ ೨೦ ವಿಶ್ವಕಪ್ ನಲ್ಲಿ ಭಾರತೀಯ ಆಟಗಾರರ ಹೆಸರಿನಲ್ಲಿರುವ ದಾಖಲೆಗಳ ಬಗ್ಗೆ ತಿಳಿಯೋಣ ಬನ್ನಿ.

ಟಿ ೨೦ ವಿಶ್ವಕಪ್ ನಲ್ಲಿನ ಬ್ಯಾಟಿಂಗ್ ದಾಖಲೆಗಳನ್ನು ನೋಡುತ್ತಾ ಹೋದಾಗ ವಿರಾಟ್ ಕೊಹ್ಲಿ 2022 ರ ಹಿಂದಿನ ಆವೃತ್ತಿಯ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಮುರಿದರು. ಕೊಹ್ಲಿ ಕೇವಲ 25 ಇನ್ನಿಂಗ್ಸ್‌ಗಳಲ್ಲಿ 1141 ರನ್‌ಗಳೊಂದಿಗೆ ಅತಿ ಹೆಚ್ಚು ರನ್‌ಗಳ ಪಟ್ಟಿಯಲ್ಲಿ ಅಗ್ರಸ್ತಾನದಲ್ಲಿದ್ದಾರೆ.ಅವರು ಶ್ರೀಲಂಕಾದ ದಂತಕಥೆ ಮಹೇಲಾ ಜಯವರ್ಧನೆಗಿಂತ 125 ರನ್‌ ಮುಂದಿದ್ದಾರೆ. ಸಕ್ರಿಯ ಕ್ರಿಕೆಟಿಗರಲ್ಲಿ ರೋಹಿತ್ ಶರ್ಮಾ 36 ಇನ್ನಿಂಗ್ಸ್‌ಗಳಲ್ಲಿ ಎರಡನೇ ಅತಿ ಹೆಚ್ಚು 963 ರನ್ ಗಳಿಸಿದ್ದಾರೆ ಮತ್ತು ಇನ್ನೂ ಡೇವಿಡ್ ವಾರ್ನರ್ 34 ಇನ್ನಿಂಗ್ಸ್‌ಗಳಲ್ಲಿ 806 ರನ್ ಗಳಿಸಿದ್ದಾರೆ.

ಇದನ್ನೂ ಓದಿ: ತನಗಿಂತ 10 ವರ್ಷ ಕಿರಿಯ ಆಟಗಾರನ ಜೊತೆ ಕಾವ್ಯಾ ಮಾರನ್ ಡೇಟಿಂಗ್! ಆ ಕ್ರಿಕೆಟಿಗ ಬೇರಾರು ಅಲ್ಲ

ಅಚ್ಚರಿ ಎಂದರೆ ವಿರಾಟ್ ಕೊಹ್ಲಿ ಟಿ ೨೦ ವಿಶ್ವಕಪ್ ನಲ್ಲಿ ಇದುವರೆಗೂ ಶತಕವನ್ನು ದಾಖಲಿಸಿಲ್ಲ ಆದರೆ ಐವತ್ತು ಅಧಿಕ ರನ್ ಗಳನ್ನು ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ.ಕೊಹ್ಲಿ 25 ಇನ್ನಿಂಗ್ಸ್‌ಗಳಲ್ಲಿ 14 ಫಿಫ್ಟಿ ಪ್ಲಸ್ ಸ್ಕೋರ್‌ಗಳನ್ನು ದಾಖಲಿಸಿದ್ದಾರೆ, ಇದು ರೋಹಿತ್ ಶರ್ಮಾ ಮತ್ತು ಕ್ರಿಸ್ ಗೇಲ್‌ಗಿಂತ ಅಧಿಕ ಎನ್ನಲಾಗಿದೆ.2014 ರ ಆವೃತ್ತಿಯಲ್ಲಿ ಭಾರತ ರನ್ನರ್ ಅಪ್ ಆಗಿ ಮುಕ್ತಾಯಗೊಂಡ ಕೇವಲ ಆರು ಇನ್ನಿಂಗ್ಸ್‌ಗಳಲ್ಲಿ 319 ರನ್ ಗಳಿಸಿದ ಏಕೈಕ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೊಹ್ಲಿ ಹೊಂದಿದ್ದಾರೆ.
ನ್ಯೂಜಿಲೆಂಡ್‌ನ ಮಾಜಿ ನಾಯಕ ಬ್ರೆಂಡನ್ ಮೆಕಲಮ್ ಟೂರ್ನಿಯಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ದಾಖಲೆ ಹೊಂದಿದ್ದಾರೆ.2012ರ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ನ್ಯೂಜಿಲೆಂಡ್ ನ ಆಟಗಾರ 58 ಎಸೆತಗಳಲ್ಲಿ 123 ರನ್ ಸಿಡಿಸಿದ್ದು ಇಂದಿಗೂ ದಾಖಲೆಯಾಗಿ ಉಳಿದಿದೆ.ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಇದುವರೆಗೆ 144.48 ರ ಅದ್ಭುತ ಸ್ಟ್ರೈಕ್ ರೇಟ್‌ನಲ್ಲಿ 799 ರನ್ ಗಳಿಸಿ ಅತ್ಯಧಿಕ ಸ್ಟ್ರೈಕ್ ರೇಟ್ ದಾಖಲೆಯನ್ನು ಹೊಂದಿದ್ದಾರೆ.

ಇದನ್ನೂ ಓದಿ: ದಕ್ಷಿಣ ಭಾರತದ ಈ ನಟನೆಂದರೆ ವಿರಾಟ್’ಗೆ ಪಂಚಪ್ರಾಣ: ಆತ ಪ್ರಶಸ್ತಿ ಗೆದ್ದಾಗ ಕುಣಿದು ಕುಪ್ಪಳಿಸಿದ್ರಂತೆ ಕಿಂಗ್ ಕೊಹ್ಲಿ

ಇನ್ನೂ ಹೆಚ್ಚಿನ ಸಿಕ್ಸರ್‌ಗಳ ದಾಖಲೆಯಲ್ಲಿ, ಕೆರಿಬಿಯನ್ ದಂತಕಥೆ ಕ್ರಿಸ್ ಗೇಲ್ 31 ಇನ್ನಿಂಗ್ಸ್‌ಗಳಲ್ಲಿ 63 ಸಿಕ್ಸರ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ ಮತ್ತು ರೋಹಿತ್ ಶರ್ಮಾ (35) ಮತ್ತು ಜೋಸ್ ಬಟ್ಲರ್ (33) ನಂತರದ ಸ್ಥಾನದಲ್ಲಿದ್ದಾರೆ. 2024ರ ಆವೃತ್ತಿಯಲ್ಲಿ ಅಗ್ರಸ್ಥಾನಕ್ಕೇರಲು ಕೇವಲ ಒಂಬತ್ತು ಬೌಂಡರಿಗಳ ಅಗತ್ಯವಿದ್ದು, ಮಹೇಲಾ ಜಯವರ್ಧನೆ ಅವರ ಅತಿ ಹೆಚ್ಚು ಬೌಂಡರಿಗಳ ದಾಖಲೆಯನ್ನು ಮುರಿಯುವ ಹಾದಿಯಲ್ಲಿ ಕೊಹ್ಲಿ ಇದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News