T20 ವಿಶ್ವಕಪ್‌ಗೆ ರೋಹಿತ್ ಶರ್ಮಾ ಕ್ಯಾಪ್ಟನ್‌, ಈ ಸ್ಟಾರ್‌ ಆಲ್‌ರೌಂಡರ್‌ಗೆ ಉಪನಾಯಕನ ಜವಾಬ್ದಾರಿ ಕೊಟ್ಟ BCCI..!

Rohit Sharma Captain: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮೂರನೇ ಟೆಸ್ಟ್‌ಗೂ ಮುನ್ನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾದ ಪ್ರದರ್ಶನದ ಬಗ್ಗೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ.

Written by - Chetana Devarmani | Last Updated : Feb 15, 2024, 10:22 AM IST
  • ಟಿ20 ವಿಶ್ವಕಪ್‌ ಭಾರತ ತಂಡ
  • ಟಿ20 ವಿಶ್ವಕಪ್‌ ಭಾರತದ ನಾಯಕ
  • ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕ
T20 ವಿಶ್ವಕಪ್‌ಗೆ ರೋಹಿತ್ ಶರ್ಮಾ ಕ್ಯಾಪ್ಟನ್‌, ಈ ಸ್ಟಾರ್‌ ಆಲ್‌ರೌಂಡರ್‌ಗೆ ಉಪನಾಯಕನ ಜವಾಬ್ದಾರಿ ಕೊಟ್ಟ BCCI..!  title=

T20 World Cup 2024 Rohit Sharma Captain:ಟಿ20 ವಿಶ್ವಕಪ್‌ ನಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕತ್ವ ವಹಿಸಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಬುಧವಾರ ಪ್ರಕಟಿಸಿದ್ದಾರೆ. ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ಉಪನಾಯಕರನ್ನಾಗಿ ಮಾಡಲಾಗಿದೆ. ರಾಜ್‌ಕೋಟ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಸರಣಿಯ ಮೂರನೇ ಟೆಸ್ಟ್‌ಗೆ ಮೊದಲು ಆಯೋಜಿಸಲಾದ ಕಾರ್ಯಕ್ರಮವೊಂದರಲ್ಲಿ ಈ ಘೋಷಣೆ ಮಾಡಲಾಗಿದೆ. 

ಇದನ್ನೂ ಓದಿ: ಕೋರಮಂಗಲದಲ್ಲಿ ಫೆ.16 ರಿಂದ 18 ರವರೆಗೆ ಕರಾಟೆ ಕುರಿತ ಅಂತರರಾಷ್ಟ್ರೀಯ ವಿಚಾರ ಸಂಕಿರ್ಣ 

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬುಧವಾರ ಟೀಂ ಇಂಡಿಯಾದ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ. 2023ರ ಏಕದಿನ ವಿಶ್ವಕಪ್ ನ ಅಂತಿಮ ಪಂದ್ಯದಲ್ಲಿ ಭಾರತ ಸೋತರೂ ಸತತ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಅಭಿಮಾನಿಗಳ ಮನ ಗೆದ್ದಿದೆ ಎಂದರು. ರಾಜ್‌ಕೋಟ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೂರನೇ ಟೆಸ್ಟ್‌ಗೆ ಮುನ್ನ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾದ ಪ್ರದರ್ಶನದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಶಾ ಹೇಳಿದ್ದಾರೆ.  

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಆಡದಿರುವ ಬಗ್ಗೆ ಮಾತನಾಡಿರುವ ಶಾ, ವಿರಾಟ್ ಯಾವುದೇ ಪ್ರಮುಖ ಕಾರಣವಿಲ್ಲದೆ ಸರಣಿಯಲ್ಲಿ ಆಡದಂತಹ ಆಟಗಾರನಲ್ಲ ಎಂದು ಹೇಳಿದರು.

ಇದನ್ನೂ ಓದಿ: ಬಿಸಿಸಿಐ ಒತ್ತಡಕ್ಕೆ ಮಣಿದ್ರಾ ಇಶಾನ್ ಕಿಶನ್? ಮಹತ್ವದ ನಿರ್ಧಾರ! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News