ICC ODI World Cup 2023: ಎಲ್ಲಾ ತಂಡಗಳು ವಿಶ್ವಕಪ್ 2023 ಗಾಗಿ ತಯಾರಿಯನ್ನು ಪ್ರಾರಂಭಿಸಿವೆ. ಈ ನಡುವೆ ಭಾರತ-ಪಾಕಿಸ್ತಾನ ತಂಡಗಳು ಏಷ್ಯಾಕಪ್‌ನಂತಹ ಟೂರ್ನಿಯನ್ನು ಆಡುತ್ತಿವೆ. ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ 3 ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯ ಆಗಸ್ಟ್ 30 ಅಂದರೆ ನಿನ್ನೆ ಡರ್ಬನ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವಿನ ನಗೆ ಬೀರಿದೆ. ಭಾರತ ಮೂಲದ ಆಟಗಾರನೇ ಈ ಗೆಲುವಿನ ರೂವಾರಿ. ತನ್ನ ಚೊಚ್ಚಲ ಪಂದ್ಯದಲ್ಲೇ ಈ ಆಟಗಾರ ಎಲ್ಲರ ಗಮನ ಸೆಳೆದಿದ್ದಾರೆ.
ಆಸ್ಟ್ರೇಲಿಯಾ ಪರ ವಿಶ್ವಕಪ್ ಆಡಲಿದ್ದಾರೆ ಭಾರತದ ಈ ಬೌಲರ್ :
ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾವನ್ನು 111 ರನ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ, ಆತಿಥೇಯರಿಗೆ 227 ರನ್‌ಗಳ ಗುರಿ ನೀಡಿತ್ತು. ಆದರೆ ದಕ್ಷಿಣ ಆಫ್ರಿಕಾ ತಂಡ ಕೇವಲ 115 ರನ್‌ಗಳಿಗೆ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರ ಅತಿ ಹೆಚ್ಚು ವಿಕೆಟ್ ಕಬಳಿಸುವ ಮೂಲಕ ತನ್ವೀರ್ ಸಂಘ (Tanveer Sangha) ಈ ಗೆಲುವಿನ ರೂವಾರಿ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ : Photo Gallery: ವೇಗವಾಗಿ 19 ಶತಕಗಳನ್ನು ಗಳಿಸಿದ ಕ್ರಿಕೆಟ್ ಆಟಗಾರರು
ಯಾರು ಈ ತನ್ವೀರ್ ಸಂಘ ? :
21 ವರ್ಷದ ತನ್ವೀರ್ ಸಂಘ ಹುಟ್ಟಿದ್ದು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ. ಆದರೆ ತನ್ವೀರ್ ತಂದೆ ಜೋಗ ಸಂಘ ಭಾರತದ ನಿವಾಸಿ. ಇವರು ಪಂಜಾಬ್‌ನ ರಹೀಂಪುರ ಗ್ರಾಮದ ನಿವಾಸಿ. ಈ ಮೂಲಕ ತನ್ವೀರ್ ಭಾರತದೊಂದಿಗೆ ಸಂಬಂಧ ಹೊಂದಿದ್ದಾರೆ. ತನ್ವೀರ್ ಅವರ ತಂದೆ 1997ರಿಂದ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿದ್ದಾರೆ. ತನ್ವೀರ್ ಸಂಘ ಆಗಾಗ ಭಾರತಕ್ಕೆ ಭೇಟಿ ನೀಡುತ್ತಲೇ ಇರುತ್ತಾರೆ.
ಚೊಚ್ಚಲ ಪಂದ್ಯದಲ್ಲಿಯೇ ಸುಂಟರಗಾಳಿ :
ಸದ್ಯ ಆಸ್ಟ್ರೇಲಿಯಾ ತಂಡದ ಹಲವು ಆಟಗಾರರು ಗಾಯಗೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ತನ್ವೀರ್ ಸಂಘಗೆ ತಂಡಕ್ಕೆ ಪದಾರ್ಪಣೆ ಮಾಡುವ ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಅವರು ನಾಲ್ಕು ಓವರ್ ಗಳಲ್ಲಿ ಕೇವಲ 31 ರನ್ ನೀಡಿ 4 ವಿಕೆಟ್ ಪಡೆದರು. ಈ ಮೂಲಕ ಈಡನ್ ಮಾರ್ಕ್ರಾಮ್, ಡೆವಾಲ್ಡ್ ಬ್ರೂವಿಸ್, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಮಾರ್ಕೊ ಜಾನ್ಸನ್ ಅವರಂತಹ ಆಟಗಾರರನ್ನು ಪೆವಿಲಿಯನ್ ಗೆ ಕಳುಹಿಸುವಲ್ಲಿ ಯಶಸ್ವಿಯಾದರು. ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ತನ್ವೀರ್ ಸಂಘ ಆಡಲಿದ್ದಾರೆ. ವಿಶ್ವಕಪ್‌ಗಾಗಿ ಆಡಲಿರುವ ಆಸ್ಟ್ರೇಲಿಯಾದ 18 ಸದಸ್ಯರ ತಂಡದಲ್ಲಿ ತನ್ವೀರ್ ಸಂಘಗೆ ಸ್ಥಾನ ನೀಡಲಾಗಿದೆ.
ಇದನ್ನೂ ಓದಿ : Asia cup 2023 : ಭಾರತ-ಪಾಕಿಸ್ತಾನ ಪಂದ್ಯ ರದ್ದಾಗುವ ಸಾಧ್ಯತೆ..! ಏಕೆ ಗೊತ್ತೆ..?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.