ಅನಂತ್ ಅಂಬಾನಿ ಮದುವೆಯಲ್ಲಿ ಬಾಲಿವುಡ್ ನಟಿಯೊಂದಿಗೆ ಹಾರ್ದಿಕ್ ಪಾಂಡ್ಯ ಮಸ್ತ್‌ ಡ್ಯಾನ್ಸ್! ವಿಡಿಯೋ ವೈರಲ್

Hardik Pandya Dance: ಮುಂಬೈನಲ್ಲಿ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆದಿದೆ. ಈ ಮದುವೆ ಸಮಾರಂಭದಲ್ಲಿ ಹಾರ್ದಿಕ್ ಪಾಂಡ್ಯ ಬಾಲಿವುಡ್ ನಟಿಯೊಂದಿಗೆ ಡ್ಯಾನ್ಸ್‌ ಮಾಡಿರುವ ವಿಡಿಯೋವೊಂದು ಸೋಷಿಯಲ್‌ ಮಿಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.. 

Written by - Savita M B | Last Updated : Jul 13, 2024, 10:31 AM IST
  • ಮುಂಬೈನಲ್ಲಿ ಕಳೆದ ಮೂರು ದಿನಗಳಿಂದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆಯುತ್ತಿದೆ
  • ಹಾರ್ದಿಕ್ ಪಾಂಡ್ಯ ಕೂಡ ಅನಂತ್ ಅಂಬಾನಿ ಮತ್ತು ರಾಧಿಕಾ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.
ಅನಂತ್ ಅಂಬಾನಿ ಮದುವೆಯಲ್ಲಿ ಬಾಲಿವುಡ್ ನಟಿಯೊಂದಿಗೆ ಹಾರ್ದಿಕ್ ಪಾಂಡ್ಯ ಮಸ್ತ್‌ ಡ್ಯಾನ್ಸ್! ವಿಡಿಯೋ ವೈರಲ್ title=

Hardik Pandya Dance with Bollywood Actress Ananya Pandey: ಮುಂಬೈನಲ್ಲಿ ಕಳೆದ ಮೂರು ದಿನಗಳಿಂದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆಯುತ್ತಿದೆ. ಇವರ ಮದುವೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಾಜಕಾರಣಿಗಳು, ಉದ್ಯಮಿಗಳು ಮತ್ತು ಕ್ರಿಕೆಟಿಗರು ಪಾಲ್ಗೊಂಡಿದ್ದರು. ಮಹೇಂದ್ರ ಸಿಂಗ್ ಧೋನಿ, ಜಸ್ರಿಪೇಟ್ ಬುಮ್ರಾ ಮತ್ತು ಅನೇಕ ಟೀಂ ಇಂಡಿಯಾ ಕ್ರಿಕೆಟಿಗರು ತಮ್ಮ ಪತ್ನಿಯರೊಂದಿಗೆ ಮದುವೆಯಲ್ಲಿ ಭಾಗವಹಿಸಿದ್ದರು. ಟೀಂ ಇಂಡಿಯಾ ಆಟಗಾರ ಮತ್ತು ಐಪಿಎಲ್‌ನಲ್ಲಿ ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಅನಂತ್ ಅಂಬಾನಿ ಮತ್ತು ರಾಧಿಕಾ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.

ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್ ಅವರೊಂದಿಗಿನ ವಿಚ್ಛೇದನದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಗಮನ ಸೆಳೆದಿದ್ದಾರೆ. ಈ ಹಿಂದೆ ಯಾವುದೇ ಸಮಾರಂಭದಲ್ಲಿ ಹಾರ್ದಿಕ್ ಪಕ್ಕದಲ್ಲಿ ನತಾಶಾ ಕಾಣಿಸಿಕೊಳ್ಳುತ್ತಿದ್ದರು. ಆದರೆ, ಇವರಿಬ್ಬರ ನಡುವೆ ವಿಚ್ಛೇದನ ಪ್ರಕರಣ ನಡೆಯುತ್ತಿರುವುದರಿಂದ ಹಾರ್ದಿಕ್ ಪಾಂಡ್ಯ ಏಕಾಂಗಿಯಾಗಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.

ಇದನ್ನೂ ಓದಿ-ಕೆತ್ತಿದ ಶಿಲ್ಪದಂತೆ ಕಂಡ ರಾಧಿಕಾ ಮರ್ಚೆಂಟ್‌..! ಲೆಹಂಗಾ ಧರಿಸಿ ರಾಣಿಯಂತೆ ಮೆರೆದ ಅಂಬಾನಿ ಸೊಸೆ

ಇತ್ತೀಚೆಗಷ್ಟೇ ಹಾರ್ದಿಕ್ ಬೇರೆ ಯುವತಿಯೊಂದಿಗೆ ಕಾಣಿಸಿಕೊಂಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಲ್ಲದೇ ಇತ್ತೀಚೆಗೆ ಬಾಲಿವುಡ್ ನ ಟಾಪ್ ಹೀರೋಯಿನ್ ಜೊತೆ ಹಾರ್ದಿಕ್ ಪಾಂಡ್ಯ ಡ್ಯಾನ್ಸ್ ಮಾಡಿರುವ ವಿಡಿಯೋವೊಂದು ಸೋಷಿಯಲ್‌ ಮಿಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಅನನ್ಯಾ ಪಾಂಡೆ ಹಾರ್ದಿಕ್ ಪಾಂಡ್ಯಗೆ ಡ್ಯಾನ್ಸ್ ಸ್ಟೆಪ್ಸ್ ಹೇಳಿಕೊಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋವನ್ನು ನೋಡಿದ ನೆಟ್ಟಿಗರು ಇಂಟ್ರೆಸ್ಟಿಂಗ್‌ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ-ನನ್ನ ಸಿನಿಮಾಗಳು ಸೋತರೆ ಅನೇಕರು ಸಂಭ್ರಮಿಸುತ್ತಾರೆ.. ಸ್ಟಾರ್ ನಟನ ಸೆನ್ಸೇಷನಲ್ ಕಾಮೆಂಟ್!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News