ODIನಲ್ಲಿ ಇತಿಹಾಸ ಸೃಷ್ಟಿಸಲು ಇನ್ನೊಂದೇ ಹೆಜ್ಜೆ ಬಾಕಿ! ವಿಶ್ವದಲ್ಲಿ ನಾಲ್ವರು ಬರೆದ ಆ ದಾಖಲೆ ಮುಟ್ಟುತ್ತಾರಾ ವಿರಾಟ್?

IND vs WI 1st ODI: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 102 ರನ್ ಗಳಿಸಿದರೆ, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ 13,000 ರನ್ ಪೂರೈಸಿದ ದಾಖಲೆ ಅವರ ಹೆಸರಿಗೆ ಬರಲಿದೆ.

Written by - Bhavishya Shetty | Last Updated : Jul 27, 2023, 12:45 PM IST
    • ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ
    • ಕೊಹ್ಲಿ ಈ ಪಂದ್ಯದಲ್ಲಿ 102 ರನ್ ಗಳಿಸಿದರೆ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ ಇತಿಹಾಸ ನಿರ್ಮಿಸಲಿದ್ದಾರೆ
    • ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ ಇತಿಹಾಸ ಸೃಷ್ಟಿಸಲು ಕೇವಲ 102 ರನ್‌ ಗಳ ಅಂತರದಲ್ಲಿದ್ದಾರೆ.
ODIನಲ್ಲಿ ಇತಿಹಾಸ ಸೃಷ್ಟಿಸಲು ಇನ್ನೊಂದೇ ಹೆಜ್ಜೆ ಬಾಕಿ! ವಿಶ್ವದಲ್ಲಿ ನಾಲ್ವರು ಬರೆದ ಆ ದಾಖಲೆ ಮುಟ್ಟುತ್ತಾರಾ ವಿರಾಟ್? title=
Virat Kohli

IND vs WI 1st ODI: ಟೀಂ ಇಂಡಿಯಾದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ ಇತಿಹಾಸ ಸೃಷ್ಟಿಸಲು ಕೇವಲ 102 ರನ್‌ ಗಳ ಅಂತರದಲ್ಲಿದ್ದಾರೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಇಂದು ಸಂಜೆ 7 ರಿಂದ ಬ್ರಿಡ್ಜ್‌ ಟೌನ್ (ಬಾರ್ಬಡೋಸ್) ನಲ್ಲಿರುವ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿದೆ. ಒಂದು ವೇಳೆ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 102 ರನ್ ಗಳಿಸಿದರೆ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ ಇತಿಹಾಸ ನಿರ್ಮಿಸಲಿದ್ದಾರೆ.

ಇದನ್ನೂ ಓದಿ: Dharwad News: ಇಂದು ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 102 ರನ್ ಗಳಿಸಿದರೆ, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ 13,000 ರನ್ ಪೂರೈಸಿದ ದಾಖಲೆ ಅವರ ಹೆಸರಿಗೆ ಬರಲಿದೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸಚಿನ್ ತೆಂಡೂಲ್ಕರ್ ನಂತರ ಈ ದೊಡ್ಡ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಇದುವರೆಗೆ ವಿಶ್ವದ 4 ಬ್ಯಾಟ್ಸ್‌ಮನ್‌ ಗಳು ಮಾತ್ರ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ 13,000 ರನ್ ಪೂರೈಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 102 ರನ್ ಗಳಿಸಿದರೆ, ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ 13,000 ರನ್ ಪೂರೈಸಿದ ವಿಶ್ವದ ಐದನೇ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಸದ್ಯ ವಿರಾಟ್ ಕೊಹ್ಲಿ 274 ಏಕದಿನ ಪಂದ್ಯಗಳಲ್ಲಿ 12,898 ರನ್ ಗಳಿಸಿರುವ ದಾಖಲೆ ಹೊಂದಿದ್ದಾರೆ.

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸಚಿನ್ ತೆಂಡೂಲ್ಕರ್ ನಂತರ ಈ ದೊಡ್ಡ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಆಗುವ ಎಲ್ಲಾ ಸಾಧ್ಯತೆ ಇದೆ. ಪ್ರಸ್ತುತ ಆಡುತ್ತಿರುವ ಕ್ರಿಕೆಟಿಗರ ಪೈಕಿ ವಿರಾಟ್ ಕೊಹ್ಲಿ ಈ ದಾಖಲೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಕೊಹ್ಲಿ ಇದುವರೆಗೆ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ 12,898 ರನ್ ಗಳಿಸಿದರೆ, ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ 18,426 ರನ್ ಗಳಿಸಿದ್ದಾರೆ.

ಏಕದಿನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರು:

1. ಸಚಿನ್ ತೆಂಡೂಲ್ಕರ್ (ಭಾರತ) - 18,426 ರನ್

2. ಕುಮಾರ್ ಸಂಗಕ್ಕಾರ (ಶ್ರೀಲಂಕಾ) - 14,234 ರನ್

3. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 13,704 ರನ್

4. ಸನತ್ ಜಯಸೂರ್ಯ (ಶ್ರೀಲಂಕಾ) - 13,430 ರನ್

5. ವಿರಾಟ್ ಕೊಹ್ಲಿ (ಭಾರತ) - 12,898

 

ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ

1. ಸಚಿನ್ ತೆಂಡೂಲ್ಕರ್ (ಭಾರತ) - 34357 ರನ್

2. ಕುಮಾರ್ ಸಂಗಕ್ಕಾರ (ಶ್ರೀಲಂಕಾ) - 28016 ರನ್

3. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 27483 ರನ್

4. ಮಹೇಲಾ ಜಯವರ್ಧನೆ (ಶ್ರೀಲಂಕಾ) - 25957 ರನ್

5. ವಿರಾಟ್ ಕೊಹ್ಲಿ (ಭಾರತ) - 25582 ರನ್

6. ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) - 25534 ರನ್

7. ರಾಹುಲ್ ದ್ರಾವಿಡ್ (ಭಾರತ) - 24208 ರನ್

 

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳು

1. ಸಚಿನ್ ತೆಂಡೂಲ್ಕರ್ (ಭಾರತ) - 100 ಶತಕಗಳು

2. ವಿರಾಟ್ ಕೊಹ್ಲಿ (ಭಾರತ) - 76 ಶತಕಗಳು

3. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 71 ಶತಕಗಳು

4. ಕುಮಾರ್ ಸಂಗಕ್ಕಾರ (ಶ್ರೀಲಂಕಾ) - 63 ಶತಕಗಳು

5. ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) - 62 ಶತಕಗಳು

6. ಹಾಶಿಮ್ ಆಮ್ಲಾ (ದಕ್ಷಿಣ ಆಫ್ರಿಕಾ) - 55 ಶತಕಗಳು

ಇದನ್ನೂ ಓದಿ: ODI Asia Cup ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಗೆಲುವು ಕಂಡ Team India ನಾಯಕ ಯಾರು ಗೊತ್ತಾ?

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News