Team India : ಟೀಂ ಇಂಡಿಯಾದಲ್ಲಿ ಈ ಆಟಗಾರನ ವೃತ್ತಿಜೀವನ ಬಹುತೇಕ ಅಂತ್ಯ! 

Team India : ಈ ಆಟಗಾರನನ್ನು ಟೆಸ್ಟ್ ತಂಡಕ್ಕೆ ಸೇರಿಸದೆ ಆಯ್ಕೆಗಾರರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಆಟಗಾರ ಟೆಸ್ಟ್ ಕ್ರಿಕೆಟ್‌ನಲ್ಲೂ ಭಾರತವನ್ನು ಮುನ್ನಡೆಸಿದ್ದಾರೆ. ಹಾಗಿದ್ರೆ, ಈ ಆಟಗಾರ ಯಾರು? ಯಾಕೆ ಆಯ್ಕೆಯಾಗಿಲ್ಲ? ಇಲ್ಲಿದೆ ನೋಡಿ..

Written by - Channabasava A Kashinakunti | Last Updated : Dec 1, 2022, 10:57 PM IST
  • ಈ ಆಟಗಾರನನ್ನು ಕೈ ಬಿಟ್ಟ ಆಯ್ಕೆಗಾರರು
  • ಕೊನೆಯ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ
  • ಟೀಂ ಇಂಡಿಯಾದಲ್ಲಿ ರಹಾನೆ ಪ್ರದರ್ಶನ
Team India : ಟೀಂ ಇಂಡಿಯಾದಲ್ಲಿ ಈ ಆಟಗಾರನ ವೃತ್ತಿಜೀವನ ಬಹುತೇಕ ಅಂತ್ಯ!  title=

Team India : ಬಾಂಗ್ಲಾದೇಶ ಪ್ರವಾಸದಲ್ಲಿ ಟೀಂ ಇಂಡಿಯಾ 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಆಯ್ಕೆಗಾರರು ಹಿರಿಯರ ತಂಡವನ್ನು ಈ ಪ್ರವಾಸಕ್ಕೆ ಕಳುಹಿಸಿದೆ, ಆದರೆ ಒಬ್ಬ ಅನುಭವಿ ಆಟಗಾರ ಈ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಈ ಆಟಗಾರ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಬಹಳ ದಿನಗಳಿಂದ ಹರಸಾಹಸ ಪಡುತ್ತಿದ್ದಾರೆ. ಈ ಆಟಗಾರನನ್ನು ಟೆಸ್ಟ್ ತಂಡಕ್ಕೆ ಸೇರಿಸದೆ ಆಯ್ಕೆಗಾರರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಆಟಗಾರ ಟೆಸ್ಟ್ ಕ್ರಿಕೆಟ್‌ನಲ್ಲೂ ಭಾರತವನ್ನು ಮುನ್ನಡೆಸಿದ್ದಾರೆ. ಹಾಗಿದ್ರೆ, ಈ ಆಟಗಾರ ಯಾರು? ಯಾಕೆ ಆಯ್ಕೆಯಾಗಿಲ್ಲ? ಇಲ್ಲಿದೆ ನೋಡಿ..

ಈ ಆಟಗಾರನನ್ನು ಕೈ ಬಿಟ್ಟ ಆಯ್ಕೆಗಾರರು

ಬಾಂಗ್ಲಾದೇಶ ಪ್ರವಾಸದಲ್ಲಿ ಟೀಂ ಇಂಡಿಯಾ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗೆ ಟೀಂ ಇಂಡಿಯಾದ ಅನುಭವಿ ಆಟಗಾರ ಅಜಿಂಕ್ಯ ರಹಾನೆ ತಂಡಕ್ಕೆ ಸೇರ್ಪಡೆಗೊಂಡಿಲ್ಲ. ಬಾಂಗ್ಲಾದೇಶ ಪ್ರವಾಸದಲ್ಲಿ ತಂಡಕ್ಕೆ ಮರಳಲು ದೊಡ್ಡ ಅವಕಾಶವಿತ್ತು, ಆದರೆ ಅದರಲ್ಲಿಯೂ ವಿಫಲರಾಗಿದ್ದಾರೆ. ಅಜಿಂಕ್ಯ ರಹಾನೆ ಬಹಳ ದಿನಗಳಿಂದ ಟೀಂ ಇಂಡಿಯಾದಲ್ಲಿ ಆಡಿಲ್ಲ. ಈ ವರ್ಷದ ಜನವರಿಯಲ್ಲಿ ಟೀಂ ಇಂಡಿಯಾ ಪರ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದರು.

ಇದನ್ನೂ ಓದಿ : India vs Bangladesh : ಬಾಂಗ್ಲಾ ಟೀಂಗೆ ಬಿಗ್ ಶಾಕ್ : ಸರಣಿಯಿಂದ ವೇಗದ ಬೌಲರ್ ಔಟ್!

ಕೊನೆಯ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ

ಅಜಿಂಕ್ಯ ರಹಾನೆ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಪರ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು, ಅಂದಿನಿಂದ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಬಾಂಗ್ಲಾದೇಶ ಪ್ರವಾಸದ ಆಯ್ಕೆಯ ನಂತರ ಭಾರತ ತಂಡದ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ, ನಾವು ರಹಾನೆ ಮೇಲೆ ಕಣ್ಣಿಟ್ಟಿದ್ದೇವೆ ಎಂದು ಹೇಳಿದ್ದಾರೆ. ನಮ್ಮ ಯೋಜನೆಯಲ್ಲಿ ಅವನೂ ಇದ್ದಾನೆ. ರಹಾನೆ ದೇಶೀಯ ಪಂದ್ಯಾವಳಿಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಆದರೆ ನಾವು ಅವರ ಫಿಟ್ನೆಸ್ ಮೇಲೆ ಕಣ್ಣಿಟ್ಟಿದ್ದೇವೆ. ನಾವು ರಹಾನೆ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ.

ಟೀಂ ಇಂಡಿಯಾದಲ್ಲಿ ರಹಾನೆ ಪ್ರದರ್ಶನ

ಅಜಿಂಕ್ಯ ರಹಾನೆ ಭಾರತ ತಂಡದ ಪರ 82 ಟೆಸ್ಟ್ ಪಂದ್ಯಗಳಲ್ಲಿ 12 ಶತಕ ಸೇರಿದಂತೆ 4931 ರನ್ ಗಳಿಸಿದ್ದಾರೆ. ಅಜಿಂಕ್ಯ ರಹಾನೆ ಹಲವಾರು ಸಂದರ್ಭಗಳಲ್ಲಿ ಟೀಮ್ ಇಂಡಿಯಾದ ನಾಯಕತ್ವವನ್ನೂ ವಹಿಸಿದ್ದಾರೆ. 2020-21ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಲ್ಲಿ ಗೆದ್ದುಕೊಂಡಿತ್ತು. ಆಗ ತಂಡದ ನಾಯಕ ಅಜಿಂಕ್ಯ ರಹಾನೆ. ಆ ಪ್ರವಾಸದಲ್ಲಿ ಶತಕವನ್ನೂ ಗಳಿಸಿದ್ದರು.

ಬಾಂಗ್ಲಾದೇಶ ಪ್ರವಾಸಕ್ಕೆ ಭಾರತ ಟೆಸ್ಟ್ ತಂಡ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಸೌರಭ್ ಕುಮಾರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.

ಇದನ್ನೂ ಓದಿ : Kohli Highest Paid Cricketer : ವಿಶ್ವದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಆಟಗಾರರ ಪಟ್ಟಿಯಲ್ಲಿ 'ಟಾಪರ್' ಕಿಂಗ್ ಕೊಹ್ಲಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News