IND vs NZ ಸರಣಿ ಮಧ್ಯ ಟೀಂ ಇಂಡಿಯಾಗೆ ಬಿಗ್ ಶಾಕ್ ನೀಡಿದ ಐಸಿಸಿ!

IND vs NZ ODI Series : ಭಾರತ ಮತ್ತು ನ್ಯೂಜಿಲೆಂಡ್ (IND vs NZ) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 12 ರನ್‌ಗಳಿಂದ ಜಯ ಗಳಿಸಿದೆ. ಟೀಂ ಇಂಡಿಯಾ ಗೆಲುವಿನೊಂದಿಗೆ ಸರಣಿ ಆರಂಭಿಸಿದೆ, ಆದರೆ ಈ ನಡುವೆ ಐಸಿಸಿ ಭಾರತ ತಂಡಕ್ಕೆ ಭಾರಿ ಹೊಡೆತ ನೀಡಿದೆ.

Written by - Channabasava A Kashinakunti | Last Updated : Jan 20, 2023, 02:48 PM IST
  • ಐಸಿಸಿ ಕೈಗೊಂಡಿದೆ ಈ ಮಹತ್ವದ ಕ್ರಮ
  • ತಮ್ಮ ತಪ್ಪನ್ನು ಒಪ್ಪಿಕೊಂಡ ನಾಯಕ ರೋಹಿತ್
  • ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ
IND vs NZ ಸರಣಿ ಮಧ್ಯ ಟೀಂ ಇಂಡಿಯಾಗೆ ಬಿಗ್ ಶಾಕ್ ನೀಡಿದ ಐಸಿಸಿ! title=

IND vs NZ ODI Series : ಭಾರತ ಮತ್ತು ನ್ಯೂಜಿಲೆಂಡ್ (IND vs NZ) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 12 ರನ್‌ಗಳಿಂದ ಜಯ ಗಳಿಸಿದೆ. ಟೀಂ ಇಂಡಿಯಾ ಗೆಲುವಿನೊಂದಿಗೆ ಸರಣಿ ಆರಂಭಿಸಿದೆ, ಆದರೆ ಈ ನಡುವೆ ಐಸಿಸಿ ಭಾರತ ತಂಡಕ್ಕೆ ಭಾರಿ ಹೊಡೆತ ನೀಡಿದೆ. ನಿಧಾನಗತಿಯ ಓವರ್ ರೇಟ್‌ಗಾಗಿ ಟೀಂ ಇಂಡಿಯಾ ಪಂದ್ಯದ ಶುಲ್ಕದ ಶೇಕಡಾ 60 ರಷ್ಟು ದಂಡವನ್ನು ವಿಧಿಸಿದೆ.

ಐಸಿಸಿ ಕೈಗೊಂಡಿದೆ ಈ ಮಹತ್ವದ ಕ್ರಮ 

ಉಭಯ ತಂಡಗಳ ನಡುವಿನ ಸರಣಿಯ ಮೊದಲ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. ಎಮಿರೇಟ್ಸ್ ಐಸಿಸಿ ಎಲೈಟ್ ಪ್ಯಾನೆಲ್ ಆಫ್ ಮ್ಯಾಚ್ ರೆಫರಿಗಳ ಜಾವಗಲ್ ಶ್ರೀನಾಥ್ ಭಾರತಕ್ಕೆ ತಮ್ಮ ಗುರಿಗಿಂತ ಮೂರು ಓವರ್‌ಗಳ ಕೊರತೆಯಿದೆ ಎಂದು ಹೇಳಿದರು. ಆಟಗಾರರು ಬೆಂಬಲಿಗ ಸಿಬ್ಬಂದಿಗೆ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ಅನುಸಾರವಾಗಿ, ಆಟಗಾರರು ನಿಗದಿತ ಸಮಯದಲ್ಲಿ ಬೌಲಿಂಗ್ ಮಾಡಲು ವಿಫಲರಾದ ಪ್ರತಿ ತಂಡಕ್ಕೆ ಅವರ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡವನ್ನು ವಿಧಿಸಲಾಗುತ್ತದೆ.

ಇದನ್ನೂ ಓದಿ : IND vs NZ : ಭಾರತ - ನ್ಯೂಜಿಲೆಂಡ್ 3ನೇ ODI ಪಂದ್ಯದ ಸ್ಥಳ ಬದಲಾವಣೆ.!? ಹೈಕೋರ್ಟ್‌ನಿಂದ ಮಹತ್ವದ ತೀರ್ಪು

ತಮ್ಮ ತಪ್ಪನ್ನು ಒಪ್ಪಿಕೊಂಡ ನಾಯಕ ರೋಹಿತ್ 

ಭಾರತ ತಂಡದ ನಾಯಕ ರೋಹಿತ್ ಶರ್ಮಾ ತಪ್ಪಿತಸ್ಥರೆಂದು ಒಪ್ಪಿಕೊಂಡಿದ್ದಾರೆ. ಆದ್ದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿರಲಿಲ್ಲ. ಮೈದಾನದ ಅಂಪೈರ್‌ಗಳಾದ ಅನಿಲ್ ಚೌಧರಿ ಮತ್ತು ನಿತಿನ್ ಮೆನನ್, ಮೂರನೇ ಅಂಪೈರ್ ಕೆಎನ್ ಅನಂತಪದ್ಮನಾಭನ್ ಮತ್ತು ನಾಲ್ಕನೇ ಅಂಪೈರ್ ಜಯರಾಮನ್ ಮದನಗೋಪಾಲ್ ಅವರು ಈ ಆರೋಪ ಮಾಡಿದ್ದಾರೆ.

ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ

ಉಭಯ ತಂಡಗಳ ನಡುವಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿದೆ. ಶುಭಮನ್ ಗಿಲ್ ಅವರ 208 ರನ್‌ಗಳ ಇನಿಂಗ್ಸ್ ಆಧಾರದ ಮೇಲೆ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 349 ರನ್ ಗಳಿಸಿತು. ಈ ಗುರಿಗೆ ಉತ್ತರವಾಗಿ ನ್ಯೂಜಿಲೆಂಡ್ ತಂಡ ಕೂಡ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರೂ 49.2 ಓವರ್ ಗಳಲ್ಲಿ 337 ರನ್ ಗಳಿಸಿ ಆಲೌಟ್ ಆಯಿತು. ಮೈಕಲ್ ಬ್ರೇಸ್‌ವೆಲ್ ನ್ಯೂಜಿಲೆಂಡ್‌ನಿಂದ ಅತ್ಯಧಿಕ 140 ರನ್ ಗಳಿಸಿದರು.

ಇದನ್ನೂ ಓದಿ : ಭಾರತ - ಪಾಕ್‌ ಕ್ರಿಕೆಟ್ ಫ್ಯಾನ್ಸ್‌ಗೆ ಸಿಹಿ ಸುದ್ದಿ, ಈ ದೇಶದಲ್ಲಿ ನಡೆಯಲಿದೆ IND vs PAK T20 ಪಂದ್ಯ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News