Team India New Jersey: ಟೀಂ ಇಂಡಿಯಾದ ಹೊಸ ಜೆರ್ಸಿ ಅನಾವರಣಗೊಳಿಸಿದ ಅಡಿಡಾಸ್!

Team India New Jersey: ಇದೇ ಜೂನ್‌ 7ರಂದು ಇಂಗ್ಲೆಂಡ್‌ನ ಓವಲ್‌ ಮೈದಾನದಲ್ಲಿ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡದ ಆಟಗಾರರು ಹೊಸ ಬಿಳಿ ಜೆರ್ಸಿಯೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.

Written by - Puttaraj K Alur | Last Updated : Jun 1, 2023, 09:34 PM IST
  • ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೂ ಮುನ್ನವೇ ಟೀಂ ಇಂಡಿಯಾದ ಹೊಸ ಜೆರ್ಸಿಗಳ ಅನಾವರಣ
  • ಅಂತಾರಾಷ್ಟ್ರೀಯ ಬ್ರಾಂಡ್‍ ಅಡಿಡಾಸ್ ಕಂಪನಿಯಿಂದ ಟೆಸ್ಟ್, ಏಕದಿನ ಮತ್ತು ಟಿ-20ಗಳ ಹೊಸ ಜೆರ್ಸಿ ಅನಾವರಣ
  • ಭಾರತ ಕ್ರಿಕೆಟ್‌ ತಂಡದ ಅಧಿಕೃತ ಜೆರ್ಸಿ ಪ್ರಾಯೋಜಕತ್ವ ವಹಿಸಿಕೊಂಡಿರುವ ಅಡಿಡಾಸ್ ಕಂಪನಿ
Team India New Jersey: ಟೀಂ ಇಂಡಿಯಾದ ಹೊಸ ಜೆರ್ಸಿ ಅನಾವರಣಗೊಳಿಸಿದ ಅಡಿಡಾಸ್! title=
ಹೊಸ ಜೆರ್ಸಿಗಳ ಅನಾವರಣ!

ನವದೆಹಲಿ: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೂ ಮುನ್ನವೇ ಅಂತಾರಾಷ್ಟ್ರೀಯ ಬ್ರಾಂಡ್‍ ಆಗಿರುವ ಅಡಿಡಾಸ್ ಕಂಪನಿಯು ಟೀಂ ಇಂಡಿಯಾದ ಹೊಸ ಜೆರ್ಸಿಗಳನ್ನು ಅನಾವರಣಗೊಳಿಸಿದೆ.

ಭಾರತ ಕ್ರಿಕೆಟ್‌ ತಂಡದ ಅಧಿಕೃತ ಜೆರ್ಸಿ ಪ್ರಾಯೋಜಕತ್ವ ವಹಿಸಿಕೊಂಡಿರುವ ಅಡಿಡಾಸ್, ಟೀಂ ಇಂಡಿಯಾ ಆಟಗಾರರ ಹೊಸ ಜೆರ್ಸಿಗಳನ್ನು ರಿವೀಲ್‌ ಮಾಡಿದೆ. ಮುಂಬರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಹೊಸ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ.

ಇದನ್ನೂ ಓದಿ: ಶುಭ್ಮನ್ ಗಿಲ್ ಅಲ್ಲವೇ ಅಲ್ಲ… ಈ 5 ಆಟಗಾರರಿದ್ದರೆ ಸಾಕು ಟೀಂ ಇಂಡಿಯಾಗೆ WTC ಟ್ರೋಫಿ ಕನ್ಫರ್ಮ್!

ಈ ಬಗ್ಗೆ ಗುರುವಾರ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ adidasindia ವಿನೂತನ ಮಾದರಿಯ ಜೆರ್ಸಿಗಳ ವಿಡಿಯೋ ಹಂಚಿಕೊಂಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 3 ಬೃಹತ್ ಜೆರ್ಸಿಗಳನ್ನು ಅನಾವರಣಗೊಳಿಸುವ ಮಾದರಿಯಲ್ಲಿ ಬಿಡುಗಡೆಗೊಳಿಸಲಾಗಿದೆ. ‘An iconic moment. An iconic stadium. Introducing the new Team India Jerseys’ ಎಂದು ಕ್ಯಾಪ್ಶನ್ ನೀಡಲಾಗಿದೆ.

 
 
 
 

 
 
 
 
 
 
 
 
 
 
 

A post shared by adidas India (@adidasindia)

ಟೆಸ್ಟ್‌, ಏಕದಿನ ಹಾಗೂ ಟಿ-20 ತಂಡಕ್ಕೆ 3 ಪ್ರತ್ಯೇಕ ಜೆರ್ಸಿಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಇದೇ ಜೂನ್‌ 7ರಂದು ಇಂಗ್ಲೆಂಡ್‌ನ ಓವಲ್‌ ಮೈದಾನದಲ್ಲಿ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡದ ಆಟಗಾರರು ಹೊಸ ಬಿಳಿ ಜೆರ್ಸಿಯೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದ ಟೀಂ ಇಂಡಿಯಾ ಓವಲ್‌ನಲ್ಲಿ ನಡೆಯುವ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್‌ ನೇತೃತ್ವದ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

ಇದನ್ನೂ ಓದಿ: WTC ಫೈನಲ್’ನಲ್ಲಿ ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿಯೋದು ಈ ಆಟಗಾರ!

ಕಳೆದ ತಿಂಗಳಷ್ಟೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಪುರುಷರ ತಂಡದ ಹೊಸ ಕಿಟ್ ಪ್ರಾಯೋಜಕರಾಗಿ ಅಡಿಡಾಸ್‌ ಸಂಸ್ಥೆಯನ್ನು ಘೋಷಿಸಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News