IND Vs ENG: ಟೀಂ ಇಂಡಿಯಾ ಗೆಲ್ಲುತ್ತಿದ್ದಂತೆ ಹೀಗೆ ಪ್ರತಿಕ್ರಿಯಿಸಿದ ವಿರಾಟ್… ಫ್ಯಾನ್ಸ್ ಹೃದಯ ಗೆಲ್ಲುತ್ತಿದೆ ಕೊಹ್ಲಿ ಸಂದೇಶ

IND Vs ENG: ಟೀಂ ಇಂಡಿಯಾ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸುತ್ತಿದ್ದಂತೆ, ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ. ಈ ಗೆಲುವನ್ನು ‘ಅದ್ಭುತ’ ಎಂದು ವಿರಾಟ್ ಕೊಹ್ಲಿ ಬಣ್ಣಿಸಿದ್ದಾರೆ.

Written by - Bhavishya Shetty | Last Updated : Feb 26, 2024, 06:05 PM IST
    • ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ
    • ವೈಯಕ್ತಿಕ ಕಾರಣಗಳಿಂದ ಸರಣಿಯಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ
    • ಅತ್ಯುತ್ತಮ ಪ್ರದರ್ಶನ ತೋರಿ ಟೀಂ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ ಎಂದು ಹೊಗಳಿಕೆ
IND Vs ENG: ಟೀಂ ಇಂಡಿಯಾ ಗೆಲ್ಲುತ್ತಿದ್ದಂತೆ ಹೀಗೆ ಪ್ರತಿಕ್ರಿಯಿಸಿದ ವಿರಾಟ್… ಫ್ಯಾನ್ಸ್ ಹೃದಯ ಗೆಲ್ಲುತ್ತಿದೆ ಕೊಹ್ಲಿ ಸಂದೇಶ title=
Virat Kohli

IND Vs ENG: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಗೆಲುವಿನ ಶ್ರೇಯವನ್ನು ಯುವ ಆಟಗಾರರಿಗೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳಿಂದ ಸರಣಿಯಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ, “ಯುವ ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿ ಟೀಂ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ” ಎಂದು ಹೊಗಳಿದ್ದಾರೆ.

ಇದನ್ನೂ ಓದಿ: ರಾಜ್ಯಾದ್ಯಂತ ಮಾರ್ಚ್ 3ರಿಂದ 6ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಟೀಂ ಇಂಡಿಯಾ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸುತ್ತಿದ್ದಂತೆ, ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ. ಈ ಗೆಲುವನ್ನು ‘ಅದ್ಭುತ’ ಎಂದು ವಿರಾಟ್ ಕೊಹ್ಲಿ ಬಣ್ಣಿಸಿದ್ದಾರೆ. “ನಮ್ಮ ಯುವ ಆಟಗಾರರ ತಂಡಕ್ಕೆ ಇದೊಂದು ಶ್ರೇಷ್ಠ ಸರಣಿ ಗೆಲುವು. ಯುವ ಆಟಗಾರರು ಎಂತಹ ಅದ್ಭುತ ಆಟ ಪ್ರದರ್ಶಿಸಿದ್ದಾರೆ. ಒತ್ತಡವನ್ನು ನಿಭಾಯಿಸಿ ಸರಣಿ ಗೆದ್ದಿದ್ದಾರೆ” ಎಂದಿದ್ದಾರೆ.

ಇದನ್ನೂ ಓದಿ: “ಟೆಸ್ಟ್ ಸರಣಿ ಕೈವಶವಾಗಿದ್ದು ಇವರಿಂದಲೇ, ಇವರೇ ನಿಜವಾದ ಗೆಲುವಿನ ಹೀರೋ” ಎಂದ ಶುಭ್ಮನ್ ಗಿಲ್

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಗೆಲ್ಲುವುದು ಟೀಂ ಇಂಡಿಯಾಗೆ ಅಷ್ಟು ಸುಲಭವಾಗಿರಲಿಲ್ಲ. ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಶಮಿ ಇಲ್ಲದೆ ಭಾರತ ಸರಣಿ ಪ್ರವೇಶಿಸಬೇಕಾಯಿತು. ಗಾಯದ ಕಾರಣ ಮೊಹಮ್ಮದ್ ಶಮಿ ಈ ಸರಣಿಯಿಂದ ಹೊರಗುಳಿದಿದ್ದರು. ಇಷ್ಟು ಮಾತ್ರವಲ್ಲದೆ ಇಂಗ್ಲೆಂಡ್ ಸರಣಿಯಲ್ಲಿ ಅಮೋಘ ಶುಭಾರಂಭ ಮಾಡಿದ್ದು, ಮೊದಲ ಪಂದ್ಯವನ್ನು ಗೆದ್ದುಕೊಂಡಿತ್ತು. ಆದರೆ ಎರಡನೇ ಟೆಸ್ಟ್‌’ನಲ್ಲಿ ಭಾರತ ಬಲಿಷ್ಠ ಪುನರಾಗಮನ ಮಾಡಿ ಸರಣಿಯನ್ನು 1-1ರಲ್ಲಿ ಸಮಬಲಗೊಳಿಸಿತು. ಇದರ ನಂತರ ರಾಜ್‌ಕೋಟ್ ಮತ್ತು ರಾಂಚಿಯಲ್ಲಿ ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ 3-1 ಅಂತರದ ಮುನ್ನಡೆ ಸಾಧಿಸಿದೆ. ಸರಣಿಯ ಕೊನೆಯ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News