WTC Final 2023: ಡಬ್ಲ್ಯುಟಿಸಿ ಫೈನಲ್‍ಗೆ ರಾಹುಲ್ ಬದಲಿಗೆ ಈ ಡ್ಯಾಶಿಂಗ್ ಬ್ಯಾಟ್ಸ್‌ಮನ್ ಎಂಟ್ರಿ!  

WTC ಫೈನಲ್ 2023: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತಗಳು ಹೆಚ್ಚುತ್ತಿದೆ. ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಹಾಗೂ ಟೀಂ ಇಂಡಿಯಾ ತಂಡದ ಭಾಗವಾಗಿರುವ ಕೆ.ಎಲ್.ರಾಹುಲ್ ಗಾಯದ ಸಮಸ್ಯೆಯಿಂದ ಎರಡೂ ಟೂರ್ನಿಗಳಿಂದ ಹೊರಗುಳಿದಿದ್ದಾರೆ. ಈಗ ಅವರ ಸ್ಥಾನಕ್ಕೆ ಬದಲಿ ಆಟಗಾರನನ್ನು ತಂಡಕ್ಕೆ ಸೇರಿಸಲು ಭಾರೀ ಬೇಡಿಕೆ ಬಂದಿದೆ.

Written by - Puttaraj K Alur | Last Updated : May 6, 2023, 07:42 PM IST
  • ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಜೂನ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ನಡೆಯಲಿದೆ
  • ಈ ಪಂದ್ಯ ಜೂನ್ 7 ರಿಂದ 11ರವರೆಗೆ ಇಂಗ್ಲೆಂಡ್‌ನ ಓವಲ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ
  • ಕನ್ನಡಿಗ ಕೆ.ಎಲ್.ರಾಹುಲ್ ಬದಲಿ ಇಶಾನ್ ಕಿಶನ್ ತಂಡಕ್ಕೆ ಸೇರಿಸಿಕೊಳ್ಳುವಂತೆ ಒತ್ತಾಯ
WTC Final 2023: ಡಬ್ಲ್ಯುಟಿಸಿ ಫೈನಲ್‍ಗೆ ರಾಹುಲ್ ಬದಲಿಗೆ ಈ ಡ್ಯಾಶಿಂಗ್ ಬ್ಯಾಟ್ಸ್‌ಮನ್ ಎಂಟ್ರಿ!   title=
WTC ಫೈನಲ್ 2023

ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮುಂದಿನ ತಿಂಗಳು ಜೂನ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ನಡೆಯಲಿದೆ. ಈ ಪಂದ್ಯ ಜೂನ್ 7 ರಿಂದ 11ರವರೆಗೆ ಇಂಗ್ಲೆಂಡ್‌ನ ಓವಲ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಹಿನ್ನಡೆಗಳ ಮೇಲೆ ಹಿನ್ನಡೆಯಾಗುತ್ತಿದೆ. ಹಲವು ಆಟಗಾರರ ನಂತರ ಇದೀಗ ಕೆ.ಎಲ್.ರಾಹುಲ್ ಕೂಡ ಗಾಯದ ಸಮಸ್ಯೆಯಿಂದ ಈ ದೊಡ್ಡ ಪಂದ್ಯದಿಂದ ಹೊರಗುಳಿದಿದ್ದಾರೆ. ರಾಹುಲ್ ಹೊರಬಿದ್ದ ನಂತರ ಹಿರಿಯ ಕ್ರಿಕೆಟಿಗರೊಬ್ಬರು ಡ್ಯಾಶಿಂಗ್ ಬ್ಯಾಟ್ಸ್‌ಮನ್‍ ಒಬ್ಬರನ್ನು ತಂಡಕ್ಕೆ ಸೇರಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ.

 ಟೀಂ ಇಂಡಿಯಾಗೆ ಈ ಆಟಗಾರನ ಎಂಟ್ರಿ!  

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ತಂಡದಲ್ಲಿ ಕೆ.ಎಲ್.ರಾಹುಲ್ ಬದಲಿಗೆ ಇಶಾನ್ ಕಿಶನ್ ಅವರನ್ನು ಸೇರಿಸಿಕೊಳ್ಳಬೇಕೆಂದು ಭಾರತದ ಮಾಜಿ ಬ್ಯಾಟ್ಸ್‌ಮನ್ ಅಮೋಲ್ ಮಜುಂದಾರ್ ಒತ್ತಾಯಿಸಿದ್ದಾರೆ. ರಾಹುಲ್ ಬದಲಿಗೆ ಇಶಾನ್ ಕಿಶನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ, ಏಕೆಂದರೆ ಅವರು ಪ್ರಸ್ತುತ ಉತ್ತಮ ಫಾರ್ಮ್‌ನಲ್ಲಿದ್ದಾರೆ. ನಾವು ರಾಹುಲ್ ಮತ್ತು ಭರತ್ ಬಗ್ಗೆಯೂ ಮಾತನಾಡುತ್ತೇವೆ. ಏಕೆಂದರೆ ರಿಷಬ್ ಪಂತ್ ಆಯ್ಕೆಗೆ ಲಭ್ಯವಿಲ್ಲ, ಆದರೆ ಇಶಾನ್ ಕಿಶನ್ ಅತ್ಯುತ್ತಮ ಆಯ್ಕೆಯಾಗಿದೆ. ಹೀಗಾಗಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬೇಕೆಂದು ಹೇಳಿದ್ದಾರೆ.

ಇದನ್ನೂ ಓದಿ: WTC Final: ಮತ್ತೆ ಹೆಚ್ಚಾಯ್ತು ಟೀಂ ಇಂಡಿಯಾದ ಟೆನ್ಷನ್: WTC ಫೈನಲ್’ನಿಂದ ಈ 4 ಆಟಗಾರರು ಔಟ್!

ಐಪಿಎಲ್‌ನಲ್ಲಿ ಅದ್ಭುತ ಬ್ಯಾಟಿಂಗ್!

ಪ್ರಸಕ್ತ ಐಪಿಎಲ್‍ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಇಶಾನ್ ಕಿಶನ್ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ 293 ರನ್ ಗಳಿಸಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ 72 ರನ್ ಗರಿಷ್ಠ ಸ್ಕೋರ್ ಗಳಿಸಿರುವ ಅವರು 2 ಅರ್ಧಶತಕ ಗಳಿಸಿದ್ದಾರೆ. ಕಿಶನ್ ಭಾರತೀಯ ಟೆಸ್ಟ್ ಪಂದ್ಯಕ್ಕೆ ಪಾದಾರ್ಪಣೆ ಮಾಡಿಲ್ಲ. ಹೀಗಿರುವಾಗ ಆಡಳಿತ ಮಂಡಳಿ ಅವರಿಗೆ ಅವಕಾಶ ನೀಡುತ್ತದೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

ರಾಹುಲ್ ದಿಢೀರ್ ಔಟ್!

ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಪ್ರಸ್ತುತ ಐಪಿಎಲ್ ಸೀಸನ್‌ನಿಂದ ಈಗಾಗಲೇ ಔಟ್ ಆಗಿದ್ದರು. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಿಂದಲೂ ಅವರು ಇದೀಗ ಹೊರಗುಳಿದಿದ್ದಾರೆ. ಈ ಮಾಹಿತಿಯನ್ನು ಅವರೇ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈದ್ಯಕೀಯ ತಂಡದೊಂದಿಗೆ ಮಾತನಾಡಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ‘ಶೀಘ್ರವೇ ನಾನು ಗಾಯಗೊಂಡ ನನ್ನ ತೊಡೆಯ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗುತ್ತದೆ. ಆದಷ್ಟು ಬೇಗ ಮೈದಾನಕ್ಕೆ ಮರಳುವತ್ತಲೇ ನನ್ನ ಸಂಪೂರ್ಣ ಗಮನವಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: Team Indiaದ ಸ್ಟಾರ್ ಕ್ರಿಕೆಟಿಗನ ಪತ್ನಿಯ ಕಾರನ್ನು ಫಾಲೋ ಮಾಡಿ ಹಲ್ಲೆ ನಡೆಸಿದ ಕಿಡಿಗೇಡಿಗಳು!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News