IND vs NZ: 2ನೇ ಟೆಸ್ಟ್ ಪಂದ್ಯದಲ್ಲಿ ಹಲವು ದಾಖಲೆ ಬರೆದ Ravichandran Ashwin

IND vs NZ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಅಶ್ವಿನ್ ತಲಾ ನಾಲ್ಕು ವಿಕೆಟ್ ಪಡೆದರೆ, ಮೊದಲ ಟೆಸ್ಟ್ ಪಂದ್ಯದಲ್ಲಿ 6 ವಿಕೆಟ್ ಪಡೆದಿದ್ದರು. ಹೀಗೆ ಅಶ್ವಿನ್ ಒಟ್ಟು 14 ವಿಕೆಟ್ ಕಬಳಿಸುವ ಮೂಲಕ  ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದಾರೆ.

Written by - Nitin Tabib | Last Updated : Dec 6, 2021, 03:20 PM IST
  • ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಅಶ್ವಿನ್ ತಲಾ ನಾಲ್ಕು ವಿಕೆಟ್ ಪಡೆದಿದ್ದಾರೆ.
  • ಮೊದಲ ಟೆಸ್ಟ್ ಪಂದ್ಯದಲ್ಲಿ 6 ವಿಕೆಟ್ ಪಡೆದಿದ್ದರು.
  • ಹೀಗೆ ಅಶ್ವಿನ್ ಒಟ್ಟು 14 ವಿಕೆಟ್ ಕಬಳಿಸುವ ಮೂಲಕ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದಾರೆ.
IND vs NZ: 2ನೇ ಟೆಸ್ಟ್ ಪಂದ್ಯದಲ್ಲಿ ಹಲವು ದಾಖಲೆ ಬರೆದ Ravichandran Ashwin title=
IND vs NZ, 2nd Test (File Photo)

IND vs NZ, 2nd Test: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ರೋಚಕ ಅಂತ್ಯ ಕಂಡಿದೆ. ಈ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ (Team India) 372 ರನ್‌ಗಳ ಐತಿಹಾಸಿಕ ಗೆಲುವು ದಾಖಲಿಸಿದೆ. ಇದರೊಂದಿಗೆ ಭಾರತ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ವಶಪಡಿಸಿಕೊಂಡಿದೆ. ಸರಣಿಯ ಮೊದಲ ಪಂದ್ಯ ಕಾನ್ಪುರದಲ್ಲಿ ನಡೆದಿದ್ದು, ಡ್ರಾದಲ್ಲಿ ಅಂತ್ಯಗೊಂಡಿತ್ತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ (Ravichandran Ashwin) ಮತ್ತೊಮ್ಮೆ ಉತ್ತಮ ಪ್ರದರ್ಶನ ನೀಡಿ ಎರಡೂ ಇನಿಂಗ್ಸ್‌ಗಳಲ್ಲಿ 4-4 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಪ್ರವಾಸಿ ತಂಡದ ಕೈಯಿಂದ ಪಂದ್ಯವನ್ನು ಕಸಿದುಕೊಂಡಿದ್ದಾರೆ. ಅಶ್ವಿನ್ ತಾವು  ಟೀಂ ಇಂಡಿಯಾದ ಪ್ರಮುಖ ಬೌಲರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಅಶ್ವಿನ್ ನ್ಯೂಜಿಲೆಂಡ್‌ನ ಹೆನ್ರಿ ನಿಕೋಲ್ಸ್ ಅವರನ್ನು ಔಟ್ ಮಾಡಿದ  ಸಂದರ್ಭದಲ್ಲಿ ಅವರ ಹೆಸರಿನಲ್ಲಿ ವಿಶಿಷ್ಟ ದಾಖಲೆಯೊಂದು ದಾಖಲಾಗಿದೆ. ಈ ಪಂದ್ಯದಲ್ಲಿ ಅಶ್ವಿನ್ ಒಟ್ಟು ಮೂರು ದಾಖಲೆಗಳನ್ನು ಬರೆದಿದ್ದಾರೆ.

ತವರು ನೆಲದಲ್ಲಿ 300 ವಿಕೆಟ್ ಪಡೆದ ಎರಡನೇ ಭಾರತೀಯ ಆಟಗಾರ
ಟೀಂ ಇಂಡಿಯಾದ ದಿಗ್ಗಜ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ ಗಳಲ್ಲಿ 4-4 ವಿಕೆಟ್ ಕಬಳಿಸಿದ್ದಾರೆ. ನ್ಯೂಜಿಲೆಂಡ್‌ನ ಅವರ ಕೊನೆಯ ವಿಕೆಟ್‌ ಹೆನ್ರಿ ನಿಕೋಲ್ಸ್‌ ಅವರದ್ದಾಗಿದೆ ಮತ್ತು ಅದನ್ನು ಅಶ್ವಿನ್ (Ravichandran Ashwin) ಕಬಳಿಸಿದ್ದಾರೆ. ಈ ವಿಕೆಟ್ ಪಡೆಯುವ ಮೂಲಕ ತವರು ನೆಲದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 300 ವಿಕೆಟ್ ಪಡೆದ ಎರಡನೆಯ ಭಾರತೀಯ ಆಟಗಾರ ಎಂಬ ಹಿರಿಮೆಗೆ ಅವರು ಪಾತ್ರರಾಗಿದ್ದಾರೆ.  ಅಶ್ವಿನ್ ಈ ಸಾಧನೆ ಮಾಡಿದ ಎರಡನೇ ಭಾರತೀಯ ಮತ್ತು ವಿಶ್ವದ ಆರನೇ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಅನಿಲ್ ಕುಂಬ್ಳೆ (Anil Kumble) ಈ ವಿಶಿಷ್ಟ ದಾಖಲೆ ಮಾಡಿದ್ದರು. ಕುಂಬ್ಳೆ ತವರು ನೆಲದಲ್ಲಿ 350 ವಿಕೆಟ್ ಪಡೆದಿದ್ದಾರೆ. ಹರ್ಭಜನ್ ಸಿಂಗ್ 265 ವಿಕೆಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ವಾಂಖೆಡೆ ಸ್ಟೇಡಿಯಂನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಅಶ್ವಿನ್ (Ashwin Test Records)
ರವಿಚಂದ್ರನ್ ಅಶ್ವಿನ್ ವಾಂಖೆಡೆ ಸ್ಟೇಡಿಯಂನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಈ ಮೈದಾನದಲ್ಲಿ 8 ವಿಕೆಟ್ ಪಡೆಯುವ ಮೂಲಕ ಅನಿಲ್ ಕುಂಬ್ಳೆ ದಾಖಲೆಯನ್ನು ಅವರು ಸರಿಗಟ್ಟಿದ್ದಾರೆ. ಈ ಮೈದಾನದಲ್ಲಿ ಅಶ್ವಿನ್ 5 ಪಂದ್ಯಗಳಿಂದ 38 ವಿಕೆಟ್ ಪಡೆದರೆ, ಕುಂಬ್ಳೆ 7 ಪಂದ್ಯಗಳಿಂದ 38 ವಿಕೆಟ್ ಪಡೆದಿದ್ದಾರೆ. ವಾಂಖೆಡೆ ಸ್ಟೇಡಿಯಂನಲ್ಲಿ ಕಪಿಲ್ ದೇವ್ 11 ಪಂದ್ಯಗಳಲ್ಲಿ 28 ವಿಕೆಟ್ ಮತ್ತು ಹರ್ಭಜನ್ ಸಿಂಗ್ 5 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದರು.

ಇದನ್ನೂ ಓದಿ-IND vs NZ 2nd Test: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 372 ರನ್ ಬೃಹತ್ ಗೆಲುವು, ಟೆಸ್ಟ್ ಸರಣಿ ಕೈವಶ

ರಿಚರ್ಡ್ ಹ್ಯಾಡ್ಲಿ ಅವರ ದಾಖಲೆಯನ್ನೂ ಮುರಿದಿದ್ದಾರೆ 
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯಗಳ ಬಗ್ಗೆ ಹೇಳುವುದಾದರೆ, ಅಶ್ವಿನ್ 66 ವಿಕೆಟ್‌ಗಳೊಂದಿಗೆ ಗರಿಷ್ಠ ವಿಕೆಟ್ ಬೌಲರ್ ಆಗಿದ್ದಾರೆ. ಅವರು ನ್ಯೂಜಿಲೆಂಡ್‌ನ ರಿಚರ್ಡ್ ಹ್ಯಾಡ್ಲಿ ಅವರ ದಾಖಲೆಯನ್ನು ಮುರಿದಿದ್ದಾರೆ. ಹೆಡ್ಲಿ 14 ಪಂದ್ಯಗಳಲ್ಲಿ 65 ವಿಕೆಟ್ ಪಡೆದಿದ್ದರೆ, ಅಶ್ವಿನ್ ಕೇವಲ 9 ಪಂದ್ಯಗಳಲ್ಲಿ 66 ವಿಕೆಟ್ ಪಡೆದಿದ್ದಾರೆ. 

ಇದನ್ನೂ ಓದಿ-IND vs NZ 2nd Test: ಕೇವಲ 62 ರನ್ ಗಳಿಗೆ ನ್ಯೂಜಿಲ್ಯಾಂಡ್ ತಂಡ ಉಡೀಸ್

ಪಾಕಿಸ್ತಾನದ ಶಾಹೀನ್ ಅಫ್ರಿದಿ ಹಿಂದೆ ಸರಿದಿದ್ದಾರೆ
ರವಿಚಂದ್ರನ್ ಅಶ್ವಿನ್ 2021 ರಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಈ ವರ್ಷ ಇದುವರೆಗೆ 50 ಟೆಸ್ಟ್ ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ವರ್ಷ ತನ್ನ ಹೆಸರಿಗೆ 44 ಟೆಸ್ಟ್ ವಿಕೆಟ್‌ಗಳನ್ನು ಹೊಂದಿರುವ ಪಾಕಿಸ್ತಾನದ ಶಾಹಿದ್ ಅಫ್ರಿದಿಯನ್ನು ಅವರು ಹಿಂದಿಕ್ಕಿದ್ದಾರೆ.

ಇದನ್ನೂ ಓದಿ -IND vs NZ 2nd Test: ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಎಲ್ಲಾ 10 ಆಟಗಾರರನ್ನು ಪೆವಿಲಿಯನ್ ಕಳುಹಿಸಿ ದಾಖಲೆ ಬರೆದ Ajaz Patel

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News