IPL 2023 ರಲ್ಲಿ ರಿಷಬ್ ಪಂತ್ ಬದಲಿಗೆ ಆಡಲಿದ್ದಾರೆ ಈ ಡ್ಯಾಶಿಂಗ್ ಆಟಗಾರ!

Rishabh Pant Replacement For IPL 2023: ಭೀಕರ ಕಾರು ಅಪಘಾತಕ್ಕೀಡಾಗಿ ಸದ್ಯ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್ ಐಪಿಎಲ್’ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ರಿಷಬ್ ಪಂತ್ ಬದಲಿಗೆ ವಿಕೆಟ್ ಕೀಪಿಂಗ್ ಸ್ಥಾನದಲ್ಲಿ ಸರ್ಫರಾಜ್ ಖಾನ್ ಆಡಲಿದ್ದಾರೆ ಎಂದು ಹೇಳಲಾಗುತ್ತಿದೆ.

Written by - Bhavishya Shetty | Last Updated : Mar 20, 2023, 08:47 PM IST
    • ರಿಷಬ್ ಪಂತ್ 30 ಡಿಸೆಂಬರ್ 2022 ರಂದು ಕಾರು ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದರು.
    • ಈ ಗಾಯದಿಂದಾಗಿ ಸದ್ಯ ಕ್ರಿಕೆಟ್’ನಿಂದ ದೂರ ಉಳಿದಿದ್ದಾರೆ.
    • ಐಪಿಎಲ್ 2023ರಲ್ಲಿ ಯುವ ಆಟಗಾರನೊಬ್ಬ ವಿಕೆಟ್ ಕೀಪರ್ ಆಗಿ ಬರಲು ಸಿದ್ಧತೆ ನಡೆಸಿದ್ದಾರೆ
IPL 2023 ರಲ್ಲಿ ರಿಷಬ್ ಪಂತ್ ಬದಲಿಗೆ ಆಡಲಿದ್ದಾರೆ ಈ ಡ್ಯಾಶಿಂಗ್ ಆಟಗಾರ! title=
rishab pant

Rishabh Pant Replacement For IPL 2023: ಟೀಂ ಇಂಡಿಯಾದ ಸ್ಟಾರ್ ವಿಕೆಟ್-ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ 30 ಡಿಸೆಂಬರ್ 2022 ರಂದು ಕಾರು ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಗಾಯದಿಂದಾಗಿ ಸದ್ಯ ಕ್ರಿಕೆಟ್’ನಿಂದ ದೂರ ಉಳಿದಿದ್ದಾರೆ. ಇನ್ನೇನು ಐಪಿಎಲ್ 2023 ಬರಲಿದ್ದು, ಡ್ಯಾಶಿಂಗ್ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವದ ಜವಾಬ್ದಾರಿಯನ್ನು ಪಡೆದುಕೊಂಡಿದ್ದಾರೆ. ಇದೇ ವೇಳೆ ಅವರ ಸ್ಥಾನಕ್ಕೆ ಯುವ ಆಟಗಾರನೊಬ್ಬ ವಿಕೆಟ್ ಕೀಪರ್ ಆಗಿ ಬರಲು ಸಿದ್ಧತೆ ನಡೆಸಿದ್ದಾರೆ.

ಇದನ್ನೂ ಓದಿ: RCB ಅಲ್ಲ,,, ಐಪಿಎಲ್’ನಲ್ಲಿ ಅತೀ ಹೆಚ್ಚು ಫ್ಯಾನ್ ಫಾಲೋವರ್ಸ್ ಇರೋದು ಈ ತಂಡಕ್ಕೆ ಮಾತ್ರ!

ಇಂಡಿಯನ್ ಪ್ರೀಮಿಯರ್ ಲೀಗ್ 2023 ರ ಆರಂಭಕ್ಕೆ ಸ್ವಲ್ಪ ಸಮಯ ಉಳಿದಿದೆ. ಎಲ್ಲಾ ತಂಡಗಳು ಸಿದ್ಧತೆಗಳನ್ನು ಪ್ರಾರಂಭಿಸಿವೆ. ರಿಷಬ್ ಪಂತ್ ಬದಲಿಗೆ ವಿಕೆಟ್ ಕೀಪಿಂಗ್ ಸ್ಥಾನಕ್ಕಾಗಿ ಸರ್ಫರಾಜ್ ಖಾನ್ ತನ್ನ ತಯಾರಿಯನ್ನು ಪ್ರಾರಂಭಿಸಿದ್ದಾರೆ. ಫಿಲ್ ಸಾಲ್ಟ್ ಕೂಡ ಡೆಲ್ಲಿ ಕ್ಯಾಪಿಟಲ್ಸ್‌ನಲ್ಲಿ ವಿಕೆಟ್ ಕೀಪರ್ ಆಗಿ ಸೇರ್ಪಡೆಗೊಂಡಿದ್ದಾರೆ. ಆದರೆ ಇತ್ತೀಚೆಗಷ್ಟೇ ಸರ್ಫರಾಜ್ ಖಾನ್ ವಿಕೆಟ್ ಕೀಪಿಂಗ್ ಮಾಡುತ್ತಿರುವುದು ಕಂಡು ಬರುತ್ತಿದ್ದು, ಅವರನ್ನು ವಿಕೆಟ್ ಕೀಪರ್ ಆಗಿ ತಂಡಕ್ಕೆ ಸೇರಿಸಿಕೊಳ್ಳಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್‌ನ ಮೊದಲ ಪಂದ್ಯ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಏಪ್ರಿಲ್ 1 ರಂದು ನಡೆಯಲಿದೆ.

ಈ ಸಮಯದಲ್ಲಿ ಸರ್ಫರಾಜ್ ಖಾನ್ ಕೂಡ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಈ ವರ್ಷ ದೇಶೀಯ ಕ್ರಿಕೆಟ್‌ನಲ್ಲಿ ಸಾಕಷ್ಟು ರನ್ ಗಳಿಸಿದ್ದಾರೆ. ಈ ಕಾರಣದಿಂದಾಗಿಯೇ ಪ್ಲೇಯಿಂಗ್ 11 ಗೆ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ. ಸರ್ಫರಾಜ್ ಖಾನ್ ಐಪಿಎಲ್ ನಲ್ಲಿ ಇದುವರೆಗೆ ಒಟ್ಟು 46 ಪಂದ್ಯಗಳನ್ನು ಆಡಿದ್ದಾರೆ. ಈ ಪಂದ್ಯಗಳಲ್ಲಿ ಸರ್ಫರಾಜ್ ಖಾನ್ 24.18ರ ಸರಾಸರಿಯಲ್ಲಿ 532 ರನ್ ಗಳಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ 137.82 ಆಗಿತ್ತು. ಆದರೆ ಕಳೆದ ಋತುವಿನಲ್ಲಿ ಸರ್ಫರಾಜ್ ಖಾನ್ ಕೇವಲ 6 ಪಂದ್ಯಗಳನ್ನು ಆಡುವ ಅವಕಾಶ ಪಡೆದಿದ್ದರು.

ಇದನ್ನೂ ಓದಿ: ಈ ಸಲ ಕಪ್ ನಮ್ದೆ..!! IPL ಟ್ರೋಫಿ ಪಡೆದೇ ತೀರುತ್ತೇವೆ ಅಂತಾ ಪಣತೊಟ್ಟಿದ್ದಾರೆ RCBಯ ಈ 5 ಆಟಗಾರರು

ಐಪಿಎಲ್ 2023ರಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡ:

ಡೇವಿಡ್ ವಾರ್ನರ್ (ಕ್ಯಾ), ಮನೀಶ್ ಪಾಂಡೆ, ಪೃಥ್ವಿ ಶಾ, ರಿಲೆ ರೊಸೊ, ರಿಪ್ಪಲ್ ಪಟೇಲ್, ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಅಮನ್ ಹಕೀಮ್ ಖಾನ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಮಿಚೆಲ್ ಮಾರ್ಷ್, ಫಿಲ್ ಸಾಲ್ಟ್, ಅನ್ರಿಚ್ ನಾರ್ಕಿಯಾ, ಚೇತನ್ ಸಕಾರಿಯಾ, ಇಶಾಂತ್ ಶರ್ಮಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಕುಲದೀಪ್ ಯಾದವ್, ಲುಂಗಿ ಎನ್ಗಿಡಿ, ಮುಖೇಶ್ ಕುಮಾರ್, ಮುಸ್ತಾಫಿಜುರ್ ರೆಹಮಾನ್, ಪ್ರವೀಣ್ ದುಬೆ, ವಿಕ್ಕಿ ಓಸ್ತ್ವಾಲ್.   

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
       

Trending News