India vs New Zealand 2nd T20: ಮೊದಲ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಮಾಡುವಲ್ಲಿ ವಿಫಲರಾಗಿದ್ದರು. ಭಾರತ ತಂಡ ಸರಣಿಯಲ್ಲಿ 0-1 ಹಿನ್ನಡೆಯಲ್ಲಿದೆ. ಇಂದು ಲಕ್ನೋದಲ್ಲಿ ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಪ್ಲೇಯಿಂಗ್ XI ನಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಬಹುದು.
ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡಕ್ಕೆ ವೇಗದ ಆರಂಭ ನೀಡುವ ಜವಾಬ್ದಾರಿಯನ್ನು ಇಶಾನ್ ಕಿಶನ್ ಹೊಂದಿದ್ದರು, ಆದರೆ ಅವರು ಬಹುಬೇಗ ಪೆವಿಲಿಯನ್‌ಗೆ ಮರಳಿದರು. ಕೇವಲ ನಾಲ್ಕು ರನ್ ಗಳಿಸಲಷ್ಟೇ ಶಕ್ತರಾದರು. ಇಂತಹ ಪರಿಸ್ಥಿತಿಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಎರಡನೇ ಟಿ20 ಪಂದ್ಯದಲ್ಲಿ ಸ್ಟಾರ್ ಓಪನರ್ ಪೃಥ್ವಿ ಶಾಗೆ ಅವಕಾಶ ನೀಡಬಹುದು. ಅಲ್ಲದೇ, ಅವರು ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ.
ಇದನ್ನೂ ಓದಿ : IND vs NZ : ಎರಡನೇ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ 11 : ಈ ಇಬ್ಬರು ಆಟಗಾರರು ಟೀಂನಿಂದ ಔಟ್!
ಪೃಥ್ವಿ ಶಾ ದೇಶೀಯ ಕ್ರಿಕೆಟ್‌ನಲ್ಲಿ ಅಸ್ಸಾಂ ವಿರುದ್ಧ ರಣಜಿ ಟ್ರೋಫಿಯಲ್ಲಿ 379 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದರು, ಇದು ರಣಜಿ ಟ್ರೋಫಿಯ ಇತಿಹಾಸದಲ್ಲಿ ಎರಡನೇ ಅತ್ಯುತ್ತಮ ಸ್ಕೋರ್ ಆಗಿದೆ. ಅವರು ಆರಂಭಿಕ ಅನುಭವವನ್ನು ಹೊಂದಿದ್ದಾರೆ, ಇದು ಟೀಮ್ ಇಂಡಿಯಾಕ್ಕೆ ಉಪಯುಕ್ತವಾಗಿದೆ. ಅವರು ಶುಭಮನ್ ಗಿಲ್ ಅವರ ಹೊಸ ಆರಂಭಿಕ ಪಾಲುದಾರರಾಗಬಹುದು.
ಪೃಥ್ವಿ ಶಾ ಭಾರತಕ್ಕಾಗಿ ಎಲ್ಲಾ ಮೂರು ಮಾದರಿಗಳಲ್ಲಿ ಕ್ರಿಕೆಟ್ ಆಡಿದ್ದಾರೆ. ಟೀಂ ಇಂಡಿಯಾ ಪರ 5 ಟೆಸ್ಟ್ ಪಂದ್ಯಗಳಲ್ಲಿ 339 ರನ್, 6 ಏಕದಿನ ಪಂದ್ಯಗಳಲ್ಲಿ 189 ರನ್ ಗಳಿಸಿದ್ದಾರೆ. ಅದೇ ಸಮಯದಲ್ಲಿ, ಅವರು ಭಾರತಕ್ಕಾಗಿ ಟಿ20 ಪಂದ್ಯವನ್ನೂ ಆಡಿದ್ದಾರೆ. 63 ಐಪಿಎಲ್ ಪಂದ್ಯಗಳಲ್ಲಿ 1588 ರನ್ ಗಳಿಸಿದ್ದಾರೆ. ಅವರು ಟೆಸ್ಟ್‌ನಲ್ಲಿ 1 ಶತಕ ಗಳಿಸಿದ್ದಾರೆ.
ಇದನ್ನೂ ಓದಿ : IND vs NZ: ಭಾರತದ ಸೋಲಿಗೆ ಈ ಆಟಗಾರನೇ ಕಾರಣ: ಬಹಿರಂಗವಾಗಿ ಆಘಾತಕಾರಿ ಹೇಳಿಕೆ ಕೊಟ್ಟ ವಾಷಿಂಗ್ಟನ್ ಸುಂದರ್
ಎರಡನೇ T20 ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI:
ಪೃಥ್ವಿ ಶಾ, ಶುಭಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ಉಪನಾಯಕ), ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಶಿವಂ ಮಾವಿ, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.