ಬೆನೋನಿ: ಇಲ್ಲಿನ ಸಹಾರಾ ಪಾರ್ಕ್ ವಿಲೋಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಂಡರ್ 19 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾದ ವಿರುದ್ಧ 2 ವಿಕೆಟ್ ಗಳ ಗೆಲುವನ್ನು ಟೀಮ್ ಇಂಡಿಯಾ ಸಾಧಿಸುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿದೆ.ಆ ಮೂಲಕ ಸತತ ಐದನೇ ಬಾರಿಗೆ ಫೈನಲ್ ತಲುಪಿದ ಸಾಧನೆಯನ್ನು ಟೀಮ್ ಇಂಡಿಯಾ ಮಾಡಿದೆ.
Uday Saharan and Sachin Dhas starred in a gripping semi-final win for India 👌
Details 👇#U19WorldCup #INDvSAhttps://t.co/IqJ2x1XS7s
— ICC (@ICC) February 6, 2024
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ತಂಡವನ್ನು ಸಾಧಾರಣ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು.ಟೀಮ್ ಇಂಡಿಯಾದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ರಾಜ್ ಲಿಂಬಾನಿ ಮೂರು ಹಾಗೂ ಮುಶಿರ್ ಖಾನ್ ಎರಡು ವಿಕೆಟ್ ಗಳನ್ನು ಕಬಳಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡವನ್ನು 50 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 244 ರನ್ ಗಳಿಗೆ ಕಟ್ಟಿ ಹಾಕಿದರು.
A crucial 96 after walking in to bat at 32/4 🙌
Sachin Dhas' knock was instrumental in India's victory in the semi-final 👏#U19WorldCup pic.twitter.com/SGlP7bLBJ8
— ICC (@ICC) February 6, 2024
ಈ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದ ಬೌಲರ್ ಗಳು ಆರಂಭಿಕ ಆಘಾತವನ್ನು ನೀಡಿದರು. ತಂಡದ ಮೊತ್ತ 32 ಆಗುವಷ್ಟರಲ್ಲಿ ನಾಲ್ಕು ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಸೋಲಿನ ಭೀತಿಯಲ್ಲಿ ಸಿಲುಕಿತ್ತು, ಈ ಹಂತದಲ್ಲಿ ನಾಯಕ ಉದಯ್ ಸಹಾರನ್ 81 ಹಾಗೂ ಸಚಿನ್ ದಾಸ್ 96 ರನ್ ಗಳಿಸುವ ಮೂಲಕ ಪಂದ್ಯದ ಚಿತ್ರಣವನ್ನೇ ಬದಲಿಸಿದರು.ಅಂತಿಮವಾಗಿ ಟೀಮ್ ಇಂಡಿಯಾ 48.5 ಓವರ್ ಗಳಲ್ಲಿ 248 ರನ್ ಗಳಿಸುವ ಮೂಲಕ ಗೆಲುವನ್ನು ಸಾಧಿಸಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.