IPLನಲ್ಲಿ ಕಳಪೆ ಪ್ರದರ್ಶನ ನೀಡಿದರೂ ದ. ಆಫ್ರಿಕಾ ಕ್ರಿಕೆಟ್‌ ಟೂರ್ನಿಗೆ ಎಂಟ್ರಿ ಪಡೆದ ಆಟಗಾರ!

ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗೆ 18 ಆಟಗಾರರ ತಂಡವನ್ನು ಭಾರತ ಕ್ರಿಕೆಟ್‌ ಮಂಡಳಿ ಪ್ರಕಟಿಸಿದ್ದು, ಈ ತಂಡದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಆಲ್ ರೌಂಡರ್ ವೆಂಕಟೇಶ್ ಅಯ್ಯರ್ ಅವರ ಹೆಸರೂ ಸೇರಿದೆ. ವೆಂಕಟೇಶ್ ಅಯ್ಯರ್ ಐಪಿಎಲ್ 2022ರಲ್ಲಿ ಸಂಪೂರ್ಣ ವಿಫಲರಾಗಿದ್ದರು.   

Written by - Bhavishya Shetty | Last Updated : May 28, 2022, 12:14 PM IST
  • ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ವೆಂಕಟೇಶ್‌ ಅಯ್ಯರ್‌
  • ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಟೂರ್ನಿಗೆ ಎಂಟ್ರಿ
  • ಎಲ್ಲರಲ್ಲೂ ಅಚ್ಚರಿಯನ್ನು ಮೂಡಿಸಿದ ಆಯ್ಕೆ ಪ್ರಕ್ರಿಯೆ
IPLನಲ್ಲಿ ಕಳಪೆ ಪ್ರದರ್ಶನ ನೀಡಿದರೂ ದ. ಆಫ್ರಿಕಾ ಕ್ರಿಕೆಟ್‌ ಟೂರ್ನಿಗೆ ಎಂಟ್ರಿ ಪಡೆದ ಆಟಗಾರ!  title=
venkatesh iyer

ಸಾಮಾನ್ಯವಾಗಿ ಐಪಿಎಲ್‌ನಲ್ಲಿ ಆಟಗಾರರು ನೀಡುವ ಅದ್ಭುತ ಪ್ರದರ್ಶನದ ಆಧಾರದ ಮೇಲೆ ಟೀಮ್ ಇಂಡಿಯಾದಲ್ಲಿ ಸ್ಥಾನಗಳನ್ನು ಗಳಿಸುತ್ತಾರೆ. ಆದರೆ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ-20 ಸರಣಿಯಲ್ಲಿ ಈ ಬಾರಿಯ ಐಪಿಎಲ್ ಸೀಸನ್ 15ರಲ್ಲಿ ಸಂಪೂರ್ಣವಾಗಿ ಕಳಪೆ ಪ್ರದರ್ಶನ ನೀಡಿದ್ದ ಓರ್ವ ಆಟಗಾರನನ್ನು ಸೇರ್ಪಡೆಗೊಳಿಸಲಾಗಿದೆ. ಈ ಆಯ್ಕೆಯು ಎಲ್ಲರಲ್ಲೂ ಅಚ್ಚರಿಯನ್ನು ಮೂಡಿಸಿದೆ. 

ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗೆ 18 ಆಟಗಾರರ ತಂಡವನ್ನು ಭಾರತ ಕ್ರಿಕೆಟ್‌ ಮಂಡಳಿ ಪ್ರಕಟಿಸಿದ್ದು, ಈ ತಂಡದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಆಲ್ ರೌಂಡರ್ ವೆಂಕಟೇಶ್ ಅಯ್ಯರ್ ಅವರ ಹೆಸರೂ ಸೇರಿದೆ. ವೆಂಕಟೇಶ್ ಅಯ್ಯರ್ ಐಪಿಎಲ್ 2022ರಲ್ಲಿ ಸಂಪೂರ್ಣ ವಿಫಲರಾಗಿದ್ದರು. ಐಪಿಎಲ್ 2022 ರಲ್ಲಿ ಕಳಪೆ ಆಟದಿಂದಾಗಿ ವೆಂಕಟೇಶ್ ಅಯ್ಯರ್ ಅವರನ್ನು ತಂಡದಿಂದ ಕೈಬಿಡಲಾಗಿತ್ತು. 

ಇದನ್ನು ಓದಿ: MS Dhoni: IPL ಬಳಿಕ ಎಲೆಕ್ಷನ್‌ ಡ್ಯೂಟಿ ಮಾಡ್ತಿದ್ದಾರಾ ಕ್ಯಾಪ್ಟನ್‌ ಕೂಲ್‌ ಧೋನಿ?

ವೆಂಕಟೇಶ್ ಅಯ್ಯರ್ ಐಪಿಎಲ್ 2022ರಲ್ಲಿ ಆಡಿದ 12 ಪಂದ್ಯಗಳಲ್ಲಿ 16.55 ಸರಾಸರಿಯಲ್ಲಿ ಕೇವಲ 182 ರನ್ ಗಳಿಸಿದ್ದಾರೆ. ಈ ಸೀಸನ್‌ನಲ್ಲಿ ಕೇವಲ ಒಂದು ಅರ್ಧಶತಕ ಸಿಡಿಸಿದ್ದಾರೆ. ಇನ್ನು ವೆಂಕಟೇಶ್‌ ಜೊತೆಗೆ ವರುಣ್ ಚಕ್ರವರ್ತಿ ಸಹ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದ್ದಾರೆ. ಆದರೂ ಸಹ ವೆಂಕಟೇಶ್ ಅಯ್ಯರ್ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ-20 ಸರಣಿಯಲ್ಲಿ ಆಡಲಿದ್ದಾರೆ. ಈ ಆಯ್ಕೆಯು ಕೆಲವರಲ್ಲಿ ಅಚ್ಚರಿ ಮೂಡಿಸಿದೆ. 

ಇದನ್ನು ಓದಿ: Monkeypox outbreak: ಮಕ್ಕಳಿಗೆ ಅಪಾಯ ಹೆಚ್ಚು, ಈ 5 ರೋಗಲಕ್ಷಣಗಳನ್ನು ನಿರ್ಲಕ್ಷಿಸದಿರಿ- ICMR

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬದಲಿಗೆ ಕಣಕ್ಕಿಳಿಯುತ್ತಿದ್ದ ವೆಂಕಟೇಶ್ ಅಯ್ಯರ್ ಉತ್ತಮವಾಗಿ ಇಲ್ಲಿಯವರೆಗೆ ಆಡಿದ್ದಾರೆ. ಅದೇ ನಂಬಿಕೆಯಲ್ಲಿ ಈ ಬಾರಿ ಅವಕಾಶ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು  ವೆಂಕಟೇಶ್ ಅಯ್ಯರ್ ಅವರು ಇಲ್ಲಿವರೆಗೆ ಎರಡು ಒಡಿಐಗಳನ್ನು ಆಡಿದ್ದು, ಅದರಲ್ಲಿ 12.00 ಸರಾಸರಿಯನ್ನು ಹೊಂದಿದ್ದು, 24 ರನ್ ಗಳಿಸಿದ್ದಾರೆ. ಒಂಬತ್ತು ಟಿ 20 ಪಂದ್ಯಗಳನ್ನಾಡಿದ್ದು, 33.25ರ ಸರಾಸರಿಯಲ್ಲಿ 133 ರನ್ ಗಳಿಸಿ 5 ವಿಕೆಟ್ ಪಡೆದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News