Venkatesh Prasad Post on Hardik Pandya and Rahul Dravid: ಟೀಂ ಇಂಡಿಯಾದ ಸರಣಿ ಸೋಲಿನ ನಂತರ ಭಾರತದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಕೋಪಗೊಂಡಿದ್ದಾರೆ. ವೆಂಕಟೇಶ್ ಪ್ರಸಾದ್ ಮತ್ತೊಮ್ಮೆ ತಮ್ಮ ಕೋಪವನ್ನು ಹೊರಹಾಕಲು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ.
ಇದನ್ನೂ ಓದಿ: Team India ಏಕದಿನ ತಂಡಕ್ಕೆ ಹೊಸ ನಾಯಕ ನೇಮಕ! ಇಶಾನ್ ಕಿಶನ್ 8 ವರ್ಷ ಹಳೆಯ ಸ್ನೇಹಿತನಿಗೆ ಪಟ್ಟ!
ಭಾನುವಾರ ಫ್ಲೋರಿಡಾದಲ್ಲಿ ನಡೆದ ಐದನೇ ಮತ್ತು ನಿರ್ಣಾಯಕ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಟೀಮ್ ಇಂಡಿಯಾವನ್ನು 8 ವಿಕೆಟ್’ಗಳಿಂದ ಸೋಲಿಸಿದೆ. ಇದರೊಂದಿಗೆ ವೆಸ್ಟ್ ಇಂಡೀಸ್ ಐದು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯನ್ನು 3–2ರಿಂದ ವಶಪಡಿಸಿಕೊಂಡಿದೆ. ಈ ಮೂಲಕ ವೆಸ್ಟ್ ಇಂಡೀಸ್ 2017ರ ನಂತರ ಭಾರತದ ವಿರುದ್ಧ ಮೊದಲ ಟಿ20 ಅಂತಾರಾಷ್ಟ್ರೀಯ ಸರಣಿಯನ್ನು ಗೆದ್ದುಕೊಂಡಿತು.
ಬ್ರಾಂಡನ್ ಕಿಂಗ್ ಅಂತಿಮ ಪಂದ್ಯದ ಗೆಲುವಿನಲ್ಲಿ ಸ್ಟಾರ್ ಆಗಿದ್ದರು, ಅವರ ಅಜೇಯ 85 ರನ್ ಇನ್ನಿಂಗ್ಸ್ ಐದು ಬೌಂಡರಿಗಳು ಮತ್ತು ಆರು ಸಿಕ್ಸರ್‌ಗಳಿಂದ ಕೂಡಿತ್ತು. ಇದು ಅಂತಾರಾಷ್ಟ್ರೀಯ ಟಿ20ಯಲ್ಲಿ ಅವರ ಅತ್ಯುತ್ತಮ ಸ್ಕೋರ್ ಕೂಡ ಆಗಿದೆ.
ಭಾರತದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಅವರು ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ ಮತ್ತು ಟೀಮ್ ಇಂಡಿಯಾ ಆಟಗಾರರ ಪ್ರದರ್ಶನದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹೇಳುತ್ತಲೇ ಇರುತ್ತಾರೆ. ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯಲ್ಲಿ ಟೀಂ ಇಂಡಿಯಾ 2-3 ಅಂತರದ ಸೋಲಿನ ಬಳಿಕ ಕೋಚ್ ರಾಹುಲ್ ದ್ರಾವಿಡ್ ಮತ್ತು ಟಿ20 ನಾಯಕ ಹಾರ್ದಿಕ್ ಪಾಂಡ್ಯ ವಿರುದ್ಧ ವೆಂಕಟೇಶ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ವೆಂಕಟೇಶ್ ಪ್ರಸಾದ್, “ಟೀಮ್ ಇಂಡಿಯಾ ಸೀಮಿತ ಓವರ್‌ಗಳ ಸ್ವರೂಪದಲ್ಲಿ ಕೆಲವು ಸಮಯದಿಂದ ತುಂಬಾ ಸಾಮಾನ್ಯ ತಂಡವಾಗಿದೆ. ಕೆಲ ತಿಂಗಳ ಹಿಂದೆ ವಿಶ್ವಕಪ್’ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದ್ದ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಟೀಂ ಇಂಡಿಯಾ ಸೋತಿದೆ. ಏಕದಿನ ಸರಣಿಯಲ್ಲೂ ಬಾಂಗ್ಲಾದೇಶ ವಿರುದ್ಧ ಸೋತಿದ್ದೇವೆ. ಮೂರ್ಖ ಹೇಳಿಕೆಗಳನ್ನು ನೀಡುವ ಬದಲು ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Team India ಏಕದಿನ ತಂಡಕ್ಕೆ ಹೊಸ ನಾಯಕ ನೇಮಕ! ಇಶಾನ್ ಕಿಶನ್ 8 ವರ್ಷ ಹಳೆಯ ಸ್ನೇಹಿತನಿಗೆ ಪಟ್ಟ!
“50 ಓವರ್‌ಗಳು ಮಾತ್ರವಲ್ಲ, ಕಳೆದ ವರ್ಷ ಅಕ್ಟೋಬರ್-ನವೆಂಬರ್’ನಲ್ಲಿ ನಡೆದ ಟಿ20 ವಿಶ್ವಕಪ್’ಗೆ ವೆಸ್ಟ್ ಇಂಡೀಸ್ ಅರ್ಹತೆ ಪಡೆಯುವಲ್ಲಿ ವಿಫಲವಾಗಿತ್ತು. ಭಾರತ ಕಳಪೆ ಪ್ರದರ್ಶನ ನೀಡುತ್ತಿರುವುದು ಮತ್ತು ಈ ಕೊರತೆಯನ್ನು ಪ್ರಕ್ರಿಯೆಯ ನೆಪದಲ್ಲಿ ಮರೆಮಾಚುತ್ತಿರುವುದು ಬೇಸರದ ಸಂಗತಿ. ಆ ಹಸಿವು, ಬೆಂಕಿ ಕಾಣೆಯಾಗಿ ಭ್ರಮೆಯಲ್ಲಿ ಬದುಕುತ್ತಿದ್ದೇವೆ. ಟೀಂ ಇಂಡಿಯಾ ಸೋಲಿಗೆ ಅವರೇ ಕಾರಣವಾಗಿದ್ದು, ಅವರೇ ಉತ್ತರ ನೀಡಬೇಕು” ಎಂದು ಕೋಚ್ ರಾಹುಲ್ ದ್ರಾವಿಡ್ ಹಾಗೂ ಟಿ20 ನಾಯಕ ಹಾರ್ದಿಕ್ ಪಾಂಡ್ಯ ವಿರುದ್ಧ ವೆಂಕಟೇಶ್ ಪ್ರಸಾದ್ ವಾಗ್ದಾಳಿ ನಡೆಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ