Virat Kohli News: ಅಕ್ಟೋಬರ್ 18 ರಿಂದ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಆರಂಭವಾಗಲಿದ್ದು, ಈ ಸರಣಿಗಾಗಿ ಟೀಂ ಇಂಡಿಯಾ ಸಜ್ಜಾಗುತ್ತಿದೆ. ಈ ಬೆನ್ನಲ್ಲೇ ಲಂಡನ್‌ನಲ್ಲಿ ನೆಲೆಸಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ, ಭಾರತಕ್ಕೆ ಆಗಮಿಸಿದ್ದಾರೆ.
ವಿರಾಟ್ ಕೊಹ್ಲಿ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ, ಕೆಲ ಪಾಪರಾಜಿಗಳು ಅವರ ಫೋಟೋ ಕ್ಲಿಕ್ಕಿಸಿದರೆ, ಇನ್ನೂ ಕೆಲವರು ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಈ ಬಾರಿ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅಬ್ಬರಿಸಬೇಕೆಂದು ಪಾಪರಾಜಿಗಳು ಕೊಹ್ಲಿಗೆ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ʼಒಕೆʼ ಎನ್ನುತ್ತಾ ತಲೆಯಾಡಿಸಿ ಕಾರಿನೊಳಗೆ ಕುಳಿತಿದ್ದಾರೆ.
ಗಮನಾರ್ಹವೆಂದರೆ, ಈ ವರ್ಷದ ಜನವರಿಯಿಂದ ಮಾರ್ಚ್ʼವರೆಗೆ ಇಂಗ್ಲೆಂಡ್ ವಿರುದ್ಧದ ಭಾರತದ ತವರಿನ ಸರಣಿಯ ಸಮಯದಲ್ಲಿ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟೆಸ್ಟ್ ಪಂದ್ಯವನ್ನು ಮಿಸ್ ಮಾಡಿಕೊಂಡಿದ್ದರು. ಈ ಸಂದರ್ಭದಲ್ಲಿ ಅನುಷ್ಕಾ ಎರಡನೇ ಮಗುವಿಗೆ ಜನ್ಮ ನೀಡಿದ್ದರು. ಆ ಕಾರಣದಿಂದ ವಿರಾಟ್ ಅಲಭ್ಯವಾಗಿದ್ದರು.
ಇನ್ನೊಂದೆಡೆ ವಿರಾಟ್ ಕೊಹ್ಲಿ ಸ್ಟೈಲಿಶ್ ಲುಕ್ ಕಂಡು ಫ್ಯಾನ್ಸ್ ಅಚ್ಚರಿಗೊಂಡಿದ್ದಾರೆ. Brown ಬಣ್ಣದಲ್ಲಿ ಗಡ್ಡ ಮೀಸೆಗೆ ಕಲರಿಂಗ್ ಮಾಡಿಸಿಕೊಂಡಿರುವ ವಿರಾಟ್, ವಿದೇಶದಲ್ಲಿ ನೆಲೆಸಿದ ಮೇಲೆ ವಿದೇಶಿಗನಾಗಿಯೇ ಪರಿವರ್ತನೆಯಾಗುತ್ತಿದ್ದಾರಾ? ಎಂಬ ಪ್ರಶ್ನೆಗಳನ್ನು ಜನರು ಕೇಳುತ್ತಿದ್ದಾರೆ.
ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ 'ಟಾಯ್ಲೆಟ್' ಇದ್ದರೆ ಜೀವನವೇ ಸರ್ವನಾಶ..! ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಸಾಧ್ಯವೇ ಇಲ್ಲ..!
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಸರಣಿಯು ನವೆಂಬರ್ 22 ರಂದು ಪರ್ತ್‌ನಲ್ಲಿ ಮೊದಲ ಟೆಸ್ಟ್‌ನೊಂದಿಗೆ ಪ್ರಾರಂಭವಾಗಲಿದೆ. ಅಡಿಲೇಡ್ ಓವಲ್‌ನಲ್ಲಿ ಡಿಸೆಂಬರ್ 6 ರಿಂದ 10 ರವರೆಗೆ ನಡೆಯಲಿರುವ ಎರಡನೇ ಟೆಸ್ಟ್, ಡೇ ಆಂಡ್ ನೈಟ್ (ಹಗಲು-ರಾತ್ರಿ) ಮಾದರಿಯನ್ನು ಹೊಂದಿರುತ್ತದೆ. ಅದರ ನಂತರ, ಡಿಸೆಂಬರ್ 14 ರಿಂದ 18 ರವರೆಗೆ ನಡೆಯಲಿರುವ ಮೂರನೇ ಟೆಸ್ಟ್ ಬ್ರಿಸ್ಬೇನ್‌ನಲ್ಲಿ ನಡೆಯಲಿದೆ. ಸಾಂಪ್ರದಾಯಿಕ ಬಾಕ್ಸಿಂಗ್ ಡೇ ಟೆಸ್ಟ್, ಡಿಸೆಂಬರ್ 26 ರಿಂದ 30 ರವರೆಗೆ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ