Virat Kohli Harpreet Brar Viral Video: ಮೈದಾನದಲ್ಲಿ ವಿರಾಟ್ ಕೊಹ್ಲಿ ಮತ್ತು ಹರ್‌ಪ್ರೀತ್ ಬ್ರಾರ್ ನಡುವೆ ವಾಗ್ವಾದ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 2024 ರ ಆರನೇ ಪಂದ್ಯದಲ್ಲಿ ಈ ಘಟನೆ ನಡೆದಿದೆ.
ಹರ್‌ಪ್ರೀತ್ ಬ್ರಾರ್ ಮೂರನೇ ಓವರ್ ಅನ್ನು ಪ್ರಾರಂಭಿಸಲು ಆತುರದಲ್ಲಿದ್ದರು. ಆಗ ಆರ್‌ಸಿಬಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರನ್ನು ಅಡ್ಡಿಪಡಿಸಿದರು. ಆರ್‌ಸಿಬಿ ಗೆಲುವಿಗೆ 8 ಓವರ್‌ಗಳಲ್ಲಿ 74 ರನ್‌ಗಳ ಅಗತ್ಯವಿತ್ತು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: ಐಪಿಎಲ್‌ನಲ್ಲಿ ಅರ್ಧಶತಕ ಪೂರೈಸಿ ಹೊಸ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ
ಆರ್‌ಸಿಬಿ ಬ್ಯಾಟಿಂಗ್ ಇನಿಂಗ್ಸ್‌ನ 13ನೇ ಓವರ್ ಆರಂಭಕ್ಕೂ ಮುನ್ನ ನಡೆದ ಘನಟೆಯ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಬ್ರಾರ್ ಅವರು ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ಬೌಲಿಂಗ್ ಮಾಡಲು ತಯಾರಿ ನಡೆಸುತ್ತಿದ್ದರು. ಈ ವೇಳೆ ವಿರಾಟ್ ಕೊಹ್ಲಿ ನಾನ್‌ಸ್ಟ್ರೈಕರ್‌ನ ತುದಿಯಲ್ಲಿದ್ದರು. ಬ್ರಾರ್‌ಗೆ “Ruka jaa B******, saans to lene de” ಎಂದು ಹೇಳಿದ್ದಾರೆ. ಇದರ ಅರ್ಥ "ತಡೆಯೋ B******, ಉಸಿರಾಡೋಕಾದ್ರೂ ಟೈಮ್ ಕೊಡು" ಎಂದು ಬ್ರಾರ್‌ಗೆ ಕೊಹ್ಲಿ ಹೇಳಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಅದ್ಭುತ ಇನ್ನಿಂಗ್ಸ್ ಆಡಿದರು. ಕೊಹ್ಲಿ ಕೇವಲ 49 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 77 ರನ್ ಗಳಿಸಿದ್ದಾರೆ. ಕೊಹ್ಲಿ ಆಟದ ನೆರವಿನಿಂದ ಆರ್‌ಸಿಬಿ 19.2 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್‌ಗಳ ಗುರಿಯನ್ನು ಸಾಧಿಸಿತು. ದಿನೇಶ್ ಕಾರ್ತಿಕ್ ಅಜೇಯ 28 ರನ್ ಗಳಿಸಿ RCB ಗೆ ಸುಲಭ ಜಯ ತಂದುಕೊಟ್ಟರು.
ಇದನ್ನೂ ಓದಿ: RCB ಗೆಲುವಿನ ಬಳಿಕ ಮಡದಿ-ಮಕ್ಕಳೊಂದಿಗೆ ವಿರಾಟ್ ಕೊಹ್ಲಿ ವಿಡಿಯೋ ಕಾಲ್: ವಾಚ್ ಕ್ಯೂಟ್ ವಿಡಿಯೋ
ಪಂಜಾಬ್ ಕಿಂಗ್ಸ್ ಸ್ಪಿನ್ನರ್ ಹರ್ಪ್ರೀತ್ ಬ್ರಾರ್ ಅವರ ಬೌಲಿಂಗ್ ಪ್ರದರ್ಶನವು ಸಾಕಷ್ಟು ಶ್ಲಾಘನೀಯವಾಗಿತ್ತು. ಎಡಗೈ ಸ್ಪಿನ್ನರ್ ತಮ್ಮ 4 ಓವರ್‌ಗಳಲ್ಲಿ ಕೇವಲ 13 ರನ್‌ಗಳನ್ನು ನೀಡಿ, ಎರಡು ವಿಕೆಟ್ ಪಡೆದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.