ವೆಸ್ಟ್ ಇಂಡಿಸ್ ವಿರುದ್ಧದ ಟಿ20 ಸರಣಿಗೆ ವಿರಾಟ್ ಗಿಲ್ಲ ಸ್ಥಾನ...!

ವೆಸ್ಟ್ ಇಂಡೀಸ್ ವಿರುದ್ಧದ ಮುಂಬರುವ ಐದು ಪಂದ್ಯಗಳ ಟಿ20 ಸರಣಿಗೆ ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿ ಗುರುವಾರ ತಂಡವನ್ನು ಹೆಸರಿಸಿದೆ.ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.ಇದೆ ವೇಳೆ ವಿರಾಟ್ ಕೊಹ್ಲಿ,ಜಸ್ಪ್ರಿತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.ಇನ್ನೊಂದೆಡೆಗೆ ಕೆ.ಎಲ್.ರಾಹುಲ್, ಆರ್.ಆಶ್ವಿನ್ ಅವರು ಮರಳಿ ತಂಡಕ್ಕೆ ವಾಪಸ್ಸಾಗಿದ್ದಾರೆ.

Written by - Zee Kannada News Desk | Last Updated : Jul 14, 2022, 03:40 PM IST
  • ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ T20I ಸರಣಿಯು ಜುಲೈ 29 ರಂದು ಪ್ರಾರಂಭವಾಗಲಿದೆ,
  • ಆದರೆ ಅದಕ್ಕೂ ಮೊದಲು ಜುಲೈ 22 ರಿಂದ ಪ್ರಾರಂಭವಾಗುವ ಮೂರು ಏಕದಿನಗಳನ್ನು ಸಹ ಆಡಲಾಗುತ್ತದೆ.
ವೆಸ್ಟ್ ಇಂಡಿಸ್ ವಿರುದ್ಧದ ಟಿ20 ಸರಣಿಗೆ ವಿರಾಟ್ ಗಿಲ್ಲ ಸ್ಥಾನ...! title=
file photo

ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧದ ಮುಂಬರುವ ಐದು ಪಂದ್ಯಗಳ ಟಿ20 ಸರಣಿಗೆ ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿ ಗುರುವಾರ ತಂಡವನ್ನು ಹೆಸರಿಸಿದೆ.ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.ಇದೆ ವೇಳೆ ವಿರಾಟ್ ಕೊಹ್ಲಿ,ಜಸ್ಪ್ರಿತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.ಇನ್ನೊಂದೆಡೆಗೆ ಕೆ.ಎಲ್.ರಾಹುಲ್, ಆರ್.ಆಶ್ವಿನ್ ಅವರು ಮರಳಿ ತಂಡಕ್ಕೆ ವಾಪಸ್ಸಾಗಿದ್ದಾರೆ.

ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ T20I ತಂಡದ ಭಾಗವಾಗಿದ್ದಾರೆ.ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ T20I ಸರಣಿಯು ಜುಲೈ 29 ರಂದು ಪ್ರಾರಂಭವಾಗಲಿದೆ, ಆದರೆ ಅದಕ್ಕೂ ಮೊದಲು ಜುಲೈ 22 ರಿಂದ ಪ್ರಾರಂಭವಾಗುವ ಮೂರು ಏಕದಿನಗಳನ್ನು ಸಹ ಆಡಲಾಗುತ್ತದೆ.

ಇದನ್ನೂ ಓದಿ : Today Vegetable Price: ಇಂದು ತರಕಾರಿ ಹಾಗೂ ಹಣ್ಣಿನ ಬೆಲೆ ಹೀಗಿದೆ ನೋಡಿ..

ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ತಂಡವನ್ನು ಹೆಸರಿಸಲಾಗಿದ್ದು,ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.ಉಮ್ರಾನ್ ಮಲಿಕ್ ತಂಡದ ಭಾಗವಾಗಿಲ್ಲ ಮತ್ತು ಅರ್ಶ್ದೀಪ್ ಸಿಂಗ್ ತಂಡದ ಭಾಗವಾಗಿದ್ದಾರೆ.

ಇದನ್ನೂ ಓದಿ : ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ವಿರುದ್ದ ಸಿಎಂಗೆ ದೂರು :ವರ್ಗಾವಣೆಗೆ ಮನವಿ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್*, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ರವಿ ಬಿಷ್ಣೋಯ್, ಕುಲದೀಪ್ ಯಾದವ್*, ಭುವನೇಶ್ವರ್ ಕುಮಾರ್ ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

 

Trending News