Virat Kohli 73rd International Century : ಗುವಾಹಟಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 87 ಎಸೆತಗಳಲ್ಲಿ 12 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 113 ರನ್ ಗಳಿಸಿದರು. ಇದರೊಂದಿಗೆ ವಿರಾಟ್ ಕೊಹ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಶ್ರೇಷ್ಠ ದಾಖಲೆಯನ್ನು ಮುರಿದಿದ್ದಾರೆ.
ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿ ದಾಖಲೆ
ಗುವಾಹಟಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ತಕ್ಷಣ ವಿರಾಟ್ ಕೊಹ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಶ್ರೇಷ್ಠ ದಾಖಲೆಯನ್ನು ಮುರಿದಿದ್ದಾರೆ. ಗುವಾಹಟಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ತಕ್ಷಣ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 73 ಶತಕ ಸಿಡಿಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರ ಶ್ರೇಷ್ಠ ದಾಖಲೆಯನ್ನು ಮುರಿದಿದ್ದಾರೆ.
ಇದನ್ನೂ ಓದಿ : Double Century : ದ್ವಿಶತಕ ಸಿಡಿಸಿ ರೋಹಿತ್-ದ್ರಾವಿಡ್‌ಗೆ ತಕ್ಕ ಪ್ರತ್ಯುತ್ತರ ನೀಡಿದ ಈ ಆಟಗಾರ!
ಗುವಾಹಟಿಯಲ್ಲಿ ಈ ಸಾಧನೆ ಮಾಡಿದ ವಿರಾಟ್
ಗುವಾಹಟಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ತಕ್ಷಣ ವಿರಾಟ್ ಕೊಹ್ಲಿ ಭಾರತದ ನೆಲದಲ್ಲಿ 20 ಏಕದಿನ ಶತಕಗಳನ್ನು ಪೂರೈಸಿದ್ದಾರೆ ಮತ್ತು ಈ ಸಂದರ್ಭದಲ್ಲಿ ಅವರು ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಶ್ರೇಷ್ಠ ದಾಖಲೆ ಮುರಿದಿದ್ದಾರೆ. ಸಚಿನ್ ತೆಂಡೂಲ್ಕರ್ ಭಾರತದ ನೆಲದಲ್ಲಿ 164 ಏಕದಿನ ಪಂದ್ಯಗಳಲ್ಲಿ 20 ಶತಕಗಳನ್ನು ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಭಾರತದ ನೆಲದಲ್ಲಿ ಕೇವಲ 102 ಏಕದಿನ ಪಂದ್ಯಗಳಲ್ಲಿ 20 ಶತಕಗಳನ್ನು ಗಳಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಭಾರತದ ನೆಲದಲ್ಲಿ ಅತಿವೇಗದ 20 ಏಕದಿನ ಶತಕಗಳನ್ನು ಗಳಿಸಿದ ವಿಚಾರದಲ್ಲಿ ವಿರಾಟ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೊಹ್ಲಿಯ ಹತ್ತಿರ ಯಾರೂ ಇಲ್ಲ!
ಕೊಹ್ಲಿ ಈಗ ಟೆಸ್ಟ್, ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 73 ಶತಕಗಳನ್ನು ಸಿಡಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ವಿಶ್ವದ ಎರಡನೇ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ. ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 71 ಅಂತಾರಾಷ್ಟ್ರೀಯ ಶತಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ಸಚಿನ್ ತೆಂಡೂಲ್ಕರ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಕಗಳನ್ನು ಗಳಿಸಿದ ವಿಶ್ವದಾಖಲೆ ಹೊಂದಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳು
1. ಸಚಿನ್ ತೆಂಡೂಲ್ಕರ್ (ಭಾರತ) - 100 ಶತಕಗಳು
2. ವಿರಾಟ್ ಕೊಹ್ಲಿ (ಭಾರತ) - 73 ಶತಕಗಳು
3. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 71 ಶತಕಗಳು
4. ಕುಮಾರ್ ಸಂಗಕ್ಕಾರ (ಶ್ರೀಲಂಕಾ) - 63 ಶತಕಗಳು
5. ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) - 62 ಶತಕಗಳು
6. ಹಾಶಿಮ್ ಆಮ್ಲಾ (ದಕ್ಷಿಣ ಆಫ್ರಿಕಾ) - 55 ಶತಕಗಳು
ಇದನ್ನೂ ಓದಿ : IND vs SL : ಈ ಆಟಗಾರನಿಗೆ ಅವಕಾಶ ಕೊಟ್ಟು ತಪ್ಪು ಮಾಡಿದ ಕ್ಯಾಪ್ಟನ್ ರೋಹಿತ್!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.