ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುತ್ತಿದ್ದಂತೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಎಂದ ಕಿಂಗ್

Virat Kohli retirement: ಬಾರ್ಬಡೋಸ್‌’ನಲ್ಲಿ ನಡೆದ ಫೈನಲ್‌’ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್‌’ಗಳಿಂದ ಸೋಲಿಸಿದೆ. ಇದರೊಂದಿಗೆ 17 ವರ್ಷಗಳ ನಂತರ ಟೀಂ ಇಂಡಿಯಾ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ.

Written by - Bhavishya Shetty | Last Updated : Jun 30, 2024, 12:38 AM IST
    • ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದ್ದಾರೆ
    • ಟೀಂ ಇಂಡಿಯಾದ ಗೆಲುವಿನ ನಂತರ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು
    • ಟೀಂ ಇಂಡಿಯಾ ಪರ T20 ಅಂತರಾಷ್ಟ್ರೀಯ ಚೊಚ್ಚಲ ಪಂದ್ಯವನ್ನು ಆಡಿದ್ದರು
ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುತ್ತಿದ್ದಂತೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಎಂದ ಕಿಂಗ್  title=
Virat Kohli Retirement

Virat Kohli retirement: ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್‌’ನಲ್ಲಿ ಟೀಂ ಇಂಡಿಯಾ ಪ್ರಶಸ್ತಿ ಗೆದ್ದ ನಂತರ ಕೊಹ್ಲಿ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.

ಇದನ್ನೂ ಓದಿ: ಟಿ20 ವಿಶ್ವಕಪ್ ಚಾಂಪಿಯನ್: ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಮಣಿಸಿದ ಟೀಂ ಇಂಡಿಯಾ!  

ಬಾರ್ಬಡೋಸ್‌’ನಲ್ಲಿ ನಡೆದ ಫೈನಲ್‌’ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್‌’ಗಳಿಂದ ಸೋಲಿಸಿದೆ. ಇದರೊಂದಿಗೆ 17 ವರ್ಷಗಳ ನಂತರ ಟೀಂ ಇಂಡಿಯಾ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಕೊಹ್ಲಿ ಅತ್ಯಧಿಕ 76 ರನ್ ಗಳಿಸಿದ್ದು, ಈ ಆಧಾರದ ಮೇಲೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಪ್ರದರ್ಶನಕ್ಕಾಗಿ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು.

‘ನನ್ನ ಕೊನೆಯ ಟಿ20, ಈಗ ಯುವಕರ ಸರದಿ’

ಟೀಂ ಇಂಡಿಯಾದ ಗೆಲುವಿನ ನಂತರ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇದು ನನ್ನ ಕೊನೆಯ ಟಿ20 ವಿಶ್ವಕಪ್” ಎಂದು ವಿದಾಯ ಘೋಷಿಸಿದರು. ಇದು ತನ್ನ ಕೊನೆಯ ಟಿ20 ವಿಶ್ವಕಪ್ ಎಂಬುದು ಬಹಿರಂಗ ರಹಸ್ಯ ಎಂದ ಕೊಹ್ಲಿ, “ಇದೀಗ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಯುವ ಪೀಳಿಗೆಯ ಮೇಲಿದೆ” ಎಂದು ಹೇಳುತ್ತಾ, ಈ ಯಶಸ್ಸಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಶ್ರೇಷ್ಠ ದಾಖಲೆ ಟೀಂ ಇಂಡಿಯಾ ಹೆಸರಿಗೆ: ಶ್ವಕಪ್ ಇತಿಹಾಸದಲ್ಲಿ ಯಾವ ತಂಡವೂ ಮಾಡಿರದ ವಿಶೇಷ ದಾಖಲೆ

ಜೂನ್’ನಲ್ಲೇ ಪ್ರಾರಂಭ-ಜೂನ್’ನಲ್ಲೇ ಅಂತ್ಯ:

ಕೊಹ್ಲಿ ಜೂನ್ 12, 2010 ರಂದು ಟೀಂ ಇಂಡಿಯಾ ಪರ T20 ಅಂತರಾಷ್ಟ್ರೀಯ ಚೊಚ್ಚಲ ಪಂದ್ಯವನ್ನು ಆಡಿದ್ದರು. 14 ವರ್ಷಗಳ ನಂತರ ಜೂನ್‌’ನಲ್ಲೇ ತಮ್ಮ ಕೊನೆಯ ಪಂದ್ಯವನ್ನು ಆಡಿ, ಇದೀಗ ವಿದಾಯ ಘೋಷಿಸಿದ್ದಾರೆ. ಭಾರತದ ಪರ 125 T20 ಪಂದ್ಯಗಳನ್ನು ಆಡಿರುವ ಕೊಹ್ಲಿ, 48.69 ಸರಾಸರಿಯೊಂದಿಗೆ 4188 ರನ್ ಗಳಿಸಿದ್ದಾರೆ. ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ 1 ಶತಕ ಮತ್ತು 39 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಇಷ್ಟೇ ಅಲ್ಲ, ಟಿ20 ವಿಶ್ವಕಪ್ ಇತಿಹಾಸದಲ್ಲೇ ಗರಿಷ್ಠ 1292 ರನ್ ಗಳಿಸುವ ಮೂಲಕ ಕೊಹ್ಲಿ ತಮ್ಮ ಪ್ರಯಾಣವನ್ನು ಅಂತ್ಯಗೊಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News