Virat Kohli: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಇತಿಹಾಸ ಸೃಷ್ಟಿಸಲಿದ್ದಾರೆ ವಿರಾಟ್ ಕೊಹ್ಲಿ, ಬೇಕಿರುವುದು ಕೇವಲ 66 ರನ್

Virat Kohli: ಈ ವರ್ಷಾಂತ್ಯದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ  ಇತಿಹಾಸ ಸೃಷ್ಟಿಸಲು ಸಿದ್ದರಾಗಿದ್ದಾರೆ. ಇದಕ್ಕಾಗಿ ವಿರಾಟ್ ಕೊಹ್ಲಿಗೆ ಬೇಕಾಗಿರುವುದು ಕೇವಲ 66 ರನ್. 

Written by - Yashaswini V | Last Updated : Dec 8, 2023, 08:24 AM IST
  • ಡಿಸೆಂಬರ್ 10 ರಿಂದ ಜನವರಿ 7 ರವರೆಗೆ ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಇರಲಿದೆ
  • ಈ ಬಾರಿಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಂ ಇಂಡಿಯಾ 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಬೇಕಿದೆ.
  • ಈ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಅವರಿಗೆ ಟಿ20, ಮತ್ತು ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಅವರು ಕೇವಲ ಟೆಸ್ಟ್ ಸರಣಿಯನ್ನಷ್ಟೇ ಆಡಲಿದ್ದಾರೆ.
Virat Kohli: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಇತಿಹಾಸ ಸೃಷ್ಟಿಸಲಿದ್ದಾರೆ ವಿರಾಟ್ ಕೊಹ್ಲಿ, ಬೇಕಿರುವುದು ಕೇವಲ 66 ರನ್ title=

Virat Kohli: ಟೀಂ ಇಂಡಿಯಾದ ದಿಗ್ಗಜ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಇತಿಹಾಸ ಸೃಷ್ಟಿಸಲು ಸಜ್ಜಾಗಿದ್ದಾರೆ. ಇದಕ್ಕಾಗಿ ಅವರಿಗೆ ಅಗತ್ಯವಿರುವುದು ಕೇವಲ 66 ರನ್ ಗಳಷ್ಟೆ. ಈ ಸಾಧನೆ ಮೂಲಕ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ದೊಡ್ಡ ಮೈಲಿಗಲ್ಲು ಸಾಧಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. 

ವಾಸ್ತವವಾಗಿ, ಡಿಸೆಂಬರ್ 10 ರಿಂದ ಜನವರಿ 7 ರವರೆಗೆ  ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಇರಲಿದ್ದು, ಈ ಬಾರಿಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಂ ಇಂಡಿಯಾ 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಬೇಕಿದೆ. ಈ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಅವರಿಗೆ ಟಿ20, ಮತ್ತು ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಅವರು ಕೇವಲ ಟೆಸ್ಟ್ ಸರಣಿಯನ್ನಷ್ಟೇ ಆಡಲಿದ್ದಾರೆ. 

ಇದನ್ನೂ ಓದಿ- 'ನೀನು ದುರಹಂಕಾರಿ-ಕ್ಲಾಸ್ಲೆಸ್ ವ್ಯಕ್ತಿ' ಗೌತಮ್ ಗಂಭೀರ್ ಪೋಸ್ಟ್ ಗೆ ಸಿಡಿದೆದ್ದ ಶ್ರೀಶಾಂತ್!

ಇತಿಹಾಸ ಸೃಷ್ಟಿಸಲು ಸಜ್ಜಾಗಿರುವ ವಿರಾಟ್ ಕೊಹ್ಲಿ: 
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಡಿಸೆಂಬರ್ 26 ರಿಂದ ಜನವರಿ 7 ರವರೆಗೆ ನಡೆಯಲಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ ಡಿಸೆಂಬರ್ 30 ರವರೆಗೆ ಸೆಂಚುರಿಯನ್‌ನ ಸೂಪರ್ ಸ್ಪೋರ್ಟ್ಸ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಈ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ 66 ರನ್ ಗಳಿಸಿದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಲಿದ್ದು, ಇಂತಹ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ. 

ಈ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ 66 ರನ್ ಗಳಿಸಿದರೆ, ಈ ವರ್ಷ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 2000 ರನ್ ಪೂರೈಸಲಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಕ್ಯಾಲೆಂಡರ್ ವರ್ಷದಲ್ಲಿ 2000 ಪ್ಲಸ್ ಅಂತರಾಷ್ಟ್ರೀಯ ರನ್‌ಗಳನ್ನು 7 ನೇ ಬಾರಿಗೆ ಪೂರೈಸಲಿದ್ದು, ಇಂತಹ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಆಗಲಿದ್ದಾರೆ. 

ಇದನ್ನೂ ಓದಿ- ಗಂಭೀರ್-ಶ್ರೀಶಾಂತ್ ನಡುವೆ ಭಾರಿ ಜಗಳ, ಗಂಭೀರ್ ಬೆಂಬಲಿಸಿದ ಇರ್ಫಾನ್ ಪಠಾಣ್, ಅಷ್ಟಕ್ಕೂ ನಡೆದಿದ್ದೇನು?

ಪ್ರಸ್ತುತ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಆರು ಬಾರಿ ಒಂದು ಕ್ಯಾಲೆಂಡರ್ ವರ್ಷದಲ್ಲಿ 2000ಕ್ಕೂ ಅಧಿಕ ರನ್ ಗಳಿಸಿ ಶ್ರೀಲಂಕಾದ ಮಾಜಿ ಬ್ಯಾಟ್ಸ್‌ಮನ್ ಕುಮಾರ್ ಸಂಗಕ್ಕಾರ ಅವರೊಂದಿಗೆ ಜಂಟಿಯಾಗಿ ಈ ಸ್ಥಾನವನ್ನು ಹಂಚಿಕೊಂಡಿದ್ದಾರೆ. 

ಕ್ಯಾಲೆಂಡರ್ ವರ್ಷದಲ್ಲಿ ಹೆಚ್ಚು ಬಾರಿ 2000+ ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿ ಕೆಳಕಂಡಂತಿದೆ: 
1. ಕುಮಾರ್ ಸಂಗಕ್ಕಾರ - 6 ಬಾರಿ
2. ವಿರಾಟ್ ಕೊಹ್ಲಿ - 6 ಬಾರಿ
3. ಮಹೇಲಾ ಜಯವರ್ಧನೆ - 5 ಬಾರಿ
4. ಸಚಿನ್ ತೆಂಡೂಲ್ಕರ್ - 5 ಬಾರಿ
5. ಜಾಕ್ವೆಸ್ ಕಾಲಿಸ್ - 4 ಬಾರಿ
6. ಮ್ಯಾಥ್ಯೂ ಹೇಡನ್ - 4 ಬಾರಿ
7. ರಿಕಿ ಪಾಂಟಿಂಗ್ - 4 ಬಾರಿ
8 ಸೌರವ್ ಗಂಗೂಲಿ - 4 ಬಾರಿ ಈ ಸಾಧನೆ ಮಾಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News