Watch: ಬುಮ್ರಾ ಶೈಲಿಯಲ್ಲೇ ಅಜ್ಜಿ ಬೌಲಿಂಗ್! ವೀಡಿಯೋ ನೋಡಿ ಜಸ್ಪ್ರೀತ್ ಹೇಳಿದ್ದೇನು?

ವಿಶ್ವ ಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತರೂ ಸಹ ಪ್ರತಿಯೊಂದು ಪಂದ್ಯದಲ್ಲಿಯೂ ಮಾಡಿದ ಸಾಧನೆಯಿಂದಾಗಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಇದೇ ಸಂದರ್ಭದಲ್ಲಿ ಅಜ್ಜಿಯೊಬ್ಬರು ಬುಮ್ರಾ ಬೌಲಿಂಗ್ ಶೈಲಿ ಅನುಕರಣೆ ಮಾಡಿ ಎಲ್ಲರ ಗಮನಸೆಳೆದಿದ್ದಾರೆ.  

Last Updated : Jul 14, 2019, 07:33 AM IST
Watch: ಬುಮ್ರಾ ಶೈಲಿಯಲ್ಲೇ ಅಜ್ಜಿ ಬೌಲಿಂಗ್! ವೀಡಿಯೋ ನೋಡಿ ಜಸ್ಪ್ರೀತ್ ಹೇಳಿದ್ದೇನು? title=

ನವದೆಹಲಿ: ಜಸ್ಪ್ರೀತ್ ಬುಮ್ರಾ ಅವರ ವೇಗ, ನಿಖರತೆ ಮತ್ತು ಡೆತ್ ಓವರ್‌ಗಳಲ್ಲಿ ಅವರ ಬೌಲಿಂಗ್ ಕೌಶಲ್ಯಗಳು ವಿಶ್ವದಾದ್ಯಂತದ ಅಭಿಮಾನಿಗಳು ಮತ್ತು ಕ್ರಿಕೆಟ್ ತಜ್ಞರಿಂದ ಸಾಕಷ್ಟು ಪ್ರಶಂಸೆ ಗಳಿಸಿವೆ. ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತರೂ ಸಹ ಪ್ರತಿಯೊಂದು ಪಂದ್ಯದಲ್ಲಿಯೂ ಮಾಡಿದ ಸಾಧನೆಯಿಂದಾಗಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಇದೇ ಸಂದರ್ಭದಲ್ಲಿ ಅಜ್ಜಿಯೊಬ್ಬರು ಬುಮ್ರಾ ಬೌಲಿಂಗ್ ಶೈಲಿ ಅನುಕರಣೆ ಮಾಡಿ ಎಲ್ಲರ ಗಮನಸೆಳೆದಿದ್ದಾರೆ.

ಬುಮ್ರಾ ಅವರು ಭಾರತೀಯ ಕ್ರಿಕೆಟ್ ತಂಡಕ್ಕೆ ಸೇರ್ಪಡೆಯಾದಾಗಿನಿಂದಲೂ ಕ್ರಿಕೆಟ್ ಪಂದ್ಯಗಳನ್ನು ತಪ್ಪದೇ ನೋಡುವ ಅಭಿಮಾನಿಯ ಅಜ್ಜಿಯೊಬ್ಬರು, ವಿಶ್ವ ಕಪ್ ಪಂದ್ಯಗಳನ್ನೂ ಸಹ ತಪ್ಪದೇ ವೀಕ್ಷಿಸಿದ್ದಾರೆ. ಅಷ್ಟೇ ಅಲ್ಲ, ಬುಮ್ರಾ ಅವರ ಬೌಲಿಂಗ್ ಶೈಲಿಯನ್ನು ಅನುಕರಣೆ ಮಾಡಲು ಪ್ರಯತ್ನಿಸಿದ್ದಾರೆ. ತನ್ನ ಅಜ್ಜಿ ಬುಮ್ರಾ ಶೈಲಿಯಲ್ಲಿ ಬೌಲಿಂಗ್ ಮಾಡುತ್ತಿರುವ ವೀಡಿಯೋವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದು, ಸಾಕಷ್ಟು ವೈರಲ್ ಆಗಿದೆ.

ಬುಮ್ರಾ ಬೌಲಿಂಗ್ ಶೈಲಿ ಅನುಕರಣೆ ಸುದ್ದಿಯಾಗುತ್ತಿದ್ದಂತೆ ವೀಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿ ಸ್ವತಃ ಬುಮ್ರಾ ಟ್ವೀಟ್ ಮಾಡಿದ್ದಾರೆ. ನನ್ನ ಶ್ರಮ ಸಾರ್ಥಕವಾಯಿತು ಎಂದು ಟ್ವೀಟ್ ಮಾಡಿದ್ದಾರೆ. 

Trending News