ಟ್ರಿನಿಡಾಡ್ : ಇಲ್ಲಿನ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಟಿ 20 ಪಂದ್ಯದಲ್ಲಿ ಭಾರತ ತಂಡವು 68 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಮೊದಲು ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡವು ಭಾರತಕ್ಕೆ ಮೊದಲು ಬ್ಯಾಟಿಂಗ್ ಅವಕಾಶವನ್ನು ನೀಡಿತು, ಇದನ್ನು ಸರಿಯಾಗಿ ಬಳಸಿಕೊಂಡ ಭಾರತ ತಂಡವು ಆರಂಭಿಕ ಆಟಗಾರ ರೋಹಿತ್ ಶರ್ಮಾ 64, ಹಾಗೂ ಕಾರ್ತಿಕ್ 41 ರನ್ ಗಳ ಬಿರುಸಿನ ಆಟದಿಂದಾಗಿ ಆರು ವಿಕೆಟ್ ಗಳ ನಷ್ಟಕ್ಕೆ 20 ಓವರ್ ಗಳಲ್ಲಿ 190 ರನ್ ಗಳನ್ನು ಗಳಿಸಿತು.
191 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಆರಂಭದಲ್ಲಿಯೇ ಆಘಾತಕ್ಕೆ ಸಿಲುಕಿತು. ತಂಡದ ಮೊತ್ತ 27 ಆಗುವಷ್ಟರಲ್ಲಿ ಎರಡು ವಿಕೆಟ್ ಗಳನ್ನು ಕಳೆದುಕೊಳ್ಳುವ ಮೂಲಕ ಸಂಕಷ್ಟವನ್ನು ಅನುಭವಿಸಿತು, ವೆಸ್ಟ್ ಇಂಡೀಸ್ ತಂಡದ ಪರವಾಗಿ ಶಮ್ರಾ ಬ್ರೂಕ್ಸ್ 20 ರನ್ ಗಳನ್ನು ಗಳಿಸಿದ್ದೆ ಗರಿಷ್ಟ ಮೊತ್ತವಾಯಿತು.
A commanding performance from India in the first T20I 💪
Watch #WIvIND for FREE on https://t.co/CPDKNxoJ9v (in select regions) 📺 | 📝 Scorecard: https://t.co/2MDSoy6W3V pic.twitter.com/mjU8nFoiB1
— ICC (@ICC) July 29, 2022
ಭಾರತ ತಂಡದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಯುವ ಬೌಲರ್ ಗಳಾದ ಆಶ್ರ್ದೀಪ್ ಹಾಗೂ ರವಿ ಬಿಶ್ನೋಯಿ ತಲಾ ಎರಡು ವಿಕೆಟ್ಗಳನ್ನು ಪಡೆದರು, ಜೊತೆಗೆ ಅನುಭವಿ ಸ್ಪಿನ್ನರ್ ಆಶ್ವಿನ್ ಕೂಡ ಎರಡು ವಿಕೆಟ್ ಗಳನ್ನು ಪಡೆಯುವ ಮೂಲಕ ವೆಸ್ಟ್ ಇಂಡೀಸ್ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.
ಅಂತಿಮವಾಗಿ ವೆಸ್ಟ್ ಇಂಡೀಸ್ ತಂಡವು 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 122 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.