ರೋಹಿತ್ ಶರ್ಮಾ ನಂತರ ಟೀಂ ಇಂಡಿಯಾದ ಸೀಮಿತ ಓವರ್‌ಗಳ ನಾಯಕ ಯಾರು? ರೇಸ್‌ನಲ್ಲಿ ಈ 3 ಆಟಗಾರರು!

‘ಹಿಟ್‌ಮ್ಯಾನ್’ ನಂತರ ಭಾರತ ಕ್ರಿಕೆಟ್ ತಂಡದ ಸೀಮಿತ ಓವರ್‌ಗಳ ನಾಯಕರಾಗಬಹುದಾದ 3 ಆಟಗಾರರ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.

Written by - Puttaraj K Alur | Last Updated : Dec 12, 2021, 12:02 PM IST
  • ಹಿಟ್ ಮ್ಯಾನ್ ರೋಹಿತ್ ಶರ್ಮಾ ಬಳಿಕ ಯಾರಾಗಲಿದ್ದಾರೆ ಟೀಂ ಇಂಡಿಯಾದ ಕ್ಯಾಪ್ಟನ್?
  • ನಾಯಕತ್ವದ ರೇಸ್‌ನಲ್ಲಿದ್ದಾರೆ ಕೆ.ಎಲ್.ರಾಹುಲ್, ಶ್ರೇಯಸ್ ಅಯ್ಯರ್ ಮತ್ತು ರಿಷಭ್ ಪಂತ್
  • ರೋಹಿತ್ ನಂತರ ಈ 3 ಆಟಗಾರರೇ ಲಿಮಿಟ್ ಓವರ್ ಕ್ಯಾಪ್ಟನ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ
ರೋಹಿತ್ ಶರ್ಮಾ ನಂತರ ಟೀಂ ಇಂಡಿಯಾದ ಸೀಮಿತ ಓವರ್‌ಗಳ ನಾಯಕ ಯಾರು? ರೇಸ್‌ನಲ್ಲಿ ಈ 3 ಆಟಗಾರರು!   title=
ಹಿಟ್ ಮ್ಯಾನ್ ರೋಹಿತ್ ಶರ್ಮಾ

ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ 2022ರ ಐಸಿಸಿ ಟಿ-20 ವಿಶ್ವಕಪ್ ಮತ್ತು ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಸೀಮಿತ ಓವರ್‌ಗಳ ಕ್ರಿಕೆಟ್ ತಂಡವನ್ನು ಸಿದ್ಧಪಡಿಸಲು ಬಿಸಿಸಿಐ ನಿರ್ಧರಿಸಿದೆ. ಇದಕ್ಕಾಗಿ ರೋಹಿತ್ ಶರ್ಮಾರನ್ನು ಟೀಂ ಇಂಡಿಯಾದ ನಾಯಕರನ್ನಾಗಿ ಮಾಡಲಾಗಿದೆ. ರೋಹಿತ್ ನಂತರ ಈ 3 ಆಟಗಾರರೇ ಲಿಮಿಟ್ ಓವರ್ ಕ್ಯಾಪ್ಟನ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ರೋಹಿತ್ ಶರ್ಮಾ ಅವರಿಗೆ ಪ್ರಸ್ತುತ 33 ವರ್ಷ ವಯಸ್ಸಾಗಿದ್ದು, ಇದರ ಪ್ರಕಾರ ಹೆಚ್ಚು ಕಾಲ ಟೀಂ ಇಂಡಿಯಾದ ನಾಯಕತ್ವ ವಹಿಸಲು ಸಾಧ್ಯವಿಲ್ಲ. ಇನ್ನು ಕೆಲವೇ ವರ್ಷಗಳಲ್ಲಿ ತಂಡಕ್ಕೆ ಹೊಸ ನಾಯಕನ ಅಗತ್ಯ ಬೀಳಲಿದೆ. ‘ಹಿಟ್‌ಮ್ಯಾನ್’ ನಂತರ ಭಾರತ ಕ್ರಿಕೆಟ್ ತಂಡದ ಸೀಮಿತ ಓವರ್‌ಗಳ ನಾಯಕರಾಗಬಹುದಾದ 3 ಆಟಗಾರರ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.

ಇದನ್ನೂ ಓದಿ: ಇಶಾಂತ್ ಶರ್ಮಾಗೆ ದಕ್ಷಿಣ ಆಫ್ರಿಕಾದ ಪ್ರವಾಸವು ಕೊನೆಯ ಸರಣಿಯಾಗಲಿದೆಯೇ?

1. ಕೆ.ಎಲ್.ರಾಹುಲ್

ಕೆ.ಎಲ್.ರಾಹುಲ್ ಉತ್ತಮ ಆರಂಭಿಕ ಬ್ಯಾಟ್ಸ್‌ಮನ್ ಮಾತ್ರವಲ್ಲ, ಅವರು ಶ್ರೇಷ್ಠ ನಾಯಕನೆಂದು ಸಾಬೀತುಪಡಿಸಿದ್ದಾರೆ. ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್‌ ನ ನಾಯಕತ್ವ ವಹಿಸಿಕೊಂಡಿದ್ದ ರಾಹುಲ್ ಸಾಕಷ್ಟು ಅನುಭವ ಹೊಂದಿದ್ದಾರೆ. ಬಿಸಿಸಿಐ ಇತ್ತೀಚೆಗೆ ಅವರನ್ನು ಭಾರತೀಯ ಟಿ-20 ತಂಡದ ಉಪನಾಯಕನನ್ನಾಗಿ ಮಾಡಿದೆ. ರಾಹುಲ್ ಭವಿಷ್ಯದಲ್ಲಿ ‘ಹಿಟ್‌ಮ್ಯಾನ್’ ಸ್ಥಾನ ತುಂಬುವ ಸಾಮರ್ಥ್ಯ ಹೊಂದಿದ್ದಾರೆ.

 2. ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್ ಅವರ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 2020ರ ಐಪಿಎಲ್ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿತ್ತು. ಇದು ಅವರ ನಾಯಕತ್ವದ ಸಾಮರ್ಥ್ಯಕ್ಕೆ ಜೀವಂತ ಪುರಾವೆ. ಕಠಿಣ ಪರಿಸ್ಥಿತಿಯಿಂದ ತಂಡವನ್ನು ಹೊರತರುವ ಶಕ್ತಿ ಅವರಲ್ಲಿದೆ, ಇಂತಹ ಪರಿಸ್ಥಿತಿಯಲ್ಲಿ ಅವರು ಟೀಂ ಇಂಡಿಯಾದ ಉತ್ತಮ ನಾಯಕನಾಗಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ನಾಯಕತ್ವದಿಂದ ಕೆಳಗಿಳಿದ ನಂತರ ವಿರಾಟ್ ಕೊಹ್ಲಿ ಮೊಬೈಲ್ ಸ್ವಿಚ್ ಆಫ್ ಆಗಿದೆ: ಬಾಲ್ಯದ ಕೋಚ್ ಹೇಳಿಕೆ

 3. ರಿಷಭ್ ಪಂತ್

ರಿಷಭ್ ಪಂತ್ ಅವರನ್ನು ‘ಕೂಲ್ ಕ್ಯಾಪ್ಟನ್’ ಖ್ಯಾತಿಯ ಎಂ.ಎಸ್.ಧೋನಿಯ ಉತ್ತರಾಧಿಕಾರಿ ಎಂದು ಪರಿಗಣಿಸಲಾಗುತ್ತದೆ. ಪಂತ್ ಅವರು ಶ್ರೇಷ್ಠ ವಿಕೆಟ್ ಕೀಪರ್-ಬ್ಯಾಟ್ಸ್‌ ಮನ್ ಮಾತ್ರವಲ್ಲದೆ ಸಂವೇದನಾಶೀಲ ನಾಯಕರೂ ಆಗಿ ಗುರುತಿಸಿಕೊಂಡಿದ್ದಾರೆ. ಇವರ ನಾಯಕತ್ವದಲ್ಲಿ 2021ರ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್‌ ಪ್ರವೇಶಿಸಿತ್ತು. ಬಿಸಿಸಿಐ ದೀರ್ಘಾವಧಿಯ ನಾಯಕನನ್ನು ಹುಡುಕುತ್ತಿದ್ದರೆ ಪಂತ್ ಸರಿಯಾದ ಆಯ್ಕೆ ಎಂಬುದು ಕ್ರಿಕೆಟ್ ತಜ್ಞರ ಅಭಿಪ್ರಾಯವಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News