ಮಹಿಳಾ ಏಷ್ಯಾ ಕಪ್ ಟೂರ್ನಿಯ 19ನೇ ಪಂದ್ಯದಲ್ಲಿ ಭಾರತ ತಂಡ ಥಾಯ್ಲೆಂಡ್ ವಿರುದ್ಧ ಗೆಲುವು ಸಾಧಿಸಿದೆ. 15.1 ಓವರ್ ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡ ಥಾಯ್ಲೆಂಡ್ ಕೇವಲ 37 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನತ್ತಿದ ಭಾರತ ಒಂದು ವಿಕೆಟ್ ನಷ್ಟಕ್ಕೆ ಕೇವಲ 6 ಓವರ್ ನಲ್ಲಿ 40 ರನ್ ಬಾರಿಸಿ ಸೆಮಿ ಫೈನಲ್ ಪ್ರವೇಶಿಸಿತು.
ಇದನ್ನೂ ಓದಿ: Team India : ಟಿ20 ವಿಶ್ವಕಪ್ಗೂ ಮುನ್ನ ಟೀಂ ಇಂಡಿಯಾದ ಓಪನರ್ ಬ್ಯಾಟ್ಸ್ಮನ್ ಚೆಂಜ್
ಭಾರತ ತಂಡ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆಲುವು ಸಾಧಿಸಿತ್ತು. ಇದೀಗ ಮತ್ತೊಂದು ಗೆಲುವಿನ ಅಂಕ ಕೂಡ ಸೇರ್ಪಡೆಯಾಗಿದೆ.
ಇನ್ನು ದೀಪ್ತಿ ಶರ್ಮಾ 10 ರನ್ ಗೆ 2 ವಿಕೆಟ್, ಸ್ನೇಹ್ ರಾಣಾ 9 ರನ್ ಗೆ 3 ವಿಕೆಟ್, ಎಡಗೈ ಸ್ಪಿನ್ನರ್ ರಾಜೇಶ್ವರಿ ಗಾಯಕ್ವಾಡ್ 8 ರನ್ ಗೆ 2 ವಿಕೆಟ್, ಮೇಘನಾ ಸಿಂಗ್ ಒಂದು ವಿಕೆಟ್ ಪಡೆಯುವ ಮೂಲಕ ಥಾಯ್ಲೆಂಡ್ ತಂಡವನ್ನು ಆಲೌಟ್ ಮಾಡಿದ್ದಾರೆ.
ಇದನ್ನೂ ಓದಿ: T20 World Cup: T20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು ಇವರೇ ನೋಡಿ
ಇನ್ನೊಂದೆಡೆ ಕನ್ನಡತಿ ಸ್ಮೃತಿ ಮಂಧಾನ ಮಹಿಳಾ ಏಷ್ಯಾಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಇಂದು ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ 100 ಪಂದ್ಯಗಳನ್ನು ಪೂರ್ಣಗೊಳಿಸಿದ ಎರಡನೇ ಭಾರತೀಯ ಆಟಗಾರ್ತಿಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.