World Cup 2019: ಟೀಂ ಇಂಡಿಯಾ ಆಟಗಾರರ ಘೋಷಣೆ; ರಿಷಬ್ ಪಂತ್ ಔಟ್, ವಿಜಯ್ ಶಂಕರ್, ಕಾರ್ತಿಕ್‌ಗೆ ಮಣೆ

ಭಾರತೀಯ ತಂಡಕ್ಕೆ ವಿರಾಟ್ ಕೊಹ್ಲಿ ನಾಯಕನಾಗಿ ಮುನ್ನಡೆಸಲಿದ್ದು, ರೋಹಿತ್ ಶರ್ಮಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

Last Updated : Apr 15, 2019, 04:28 PM IST
World Cup 2019: ಟೀಂ ಇಂಡಿಯಾ ಆಟಗಾರರ ಘೋಷಣೆ; ರಿಷಬ್ ಪಂತ್ ಔಟ್, ವಿಜಯ್ ಶಂಕರ್, ಕಾರ್ತಿಕ್‌ಗೆ ಮಣೆ title=
Pic Courtesy: BCCI

ನವದೆಹಲಿ: ಮುಂದಿನ ತಿಂಗಳು ಆರಂಭವಾಗಲಿರುವ ವಿಶ್ವ ಕಪ್ 2019ಗೆ ಭಾರತೀಯ ಕ್ರಿಕೆಟ್ ತಂಡಕ್ಕೆ 15 ಆಟಗಾರರ ಹೆಸರನ್ನು ಸೋಮವಾರ ಅಂತಿಮಗೊಳಿಸಲಾಗಿದೆ. 

ಇಂಗ್ಲೆಂಡ್ ನಲ್ಲಿ ನಡೆಯಲಿರುವ ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಗೆ ತೀವ್ರ ಕುತೂಹಲ ಕೆರಳಿಸಿದ್ದ ಮೀಸಲು ವಿಕೆಟ್ ಕೀಪರ್ ಸ್ಥಾನಕ್ಕೆ ದಿನೇಶ್ ಕಾರ್ತಿಕ್ ಆಯ್ಕೆಯಾಗಿದ್ದು, ರಿಷಬ್ ಪಂತ್ ಅವರನ್ನು ಕೈಬಿಡಲಾಗಿದೆ. ತಂಡದಲ್ಲಿ ಮೂವರು ಸ್ಪಿನ್ನರ್ ಗಳು ಮತ್ತು ಮೂವರು ಬೌಲರ್ ಗಳನ್ನು ಆಯ್ಕೆ ಮಾಡಲಾಗಿದ್ದು, ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ವಿಜಯ್ ಶಂಕರ್ ಗೆ ಅವಕಾಶ ನೀಡಲಾಗಿದೆ. ಆದರೆ  ಅಂಬಾತಿ ರಾಯುಡು ಅವರನ್ನು ತಂಡದಿಂದ ಕೈಬಿಡಲಾಗಿದೆ. 

ಭಾರತೀಯ ತಂಡವನ್ನು ವಿರಾಟ್ ಕೊಹ್ಲಿ ನಾಯಕನಾಗಿ ಮುನ್ನಡೆಸಲಿದ್ದು, ರೋಹಿತ್ ಶರ್ಮಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. 2019ರ ಏಕದಿನ ವಿಶ್ವಕಪ್ ಟೂರ್ನಿಯು ಮೇ 30ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥ್ಯ ವಹಿಸಿರುವ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ಎದುರು ಸೆಣಸಲಿದೆ.  ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ, ಜೂನ್ 16ರಂದು ಪಾಕಿಸ್ತಾನದ ವಿರುದ್ಧ ಭಾರತ ಸೆಣಸಲಿದೆ. 

ಟೀಂ ಇಂಡಿಯಾ ಆಟಗಾರರು: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ಕೆ.ಎಲ್. ರಾಹುಲ್, ವಿಜಯ್ ಶಂಕರ್, ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್), ಕೇದಾರ ಜಾಧವ್, ದಿನೇಶ್ ಕಾರ್ತಿಕ್, ಯುಜವೆಂದ್ರ ಚಹಾಲ್, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮರಾಹ್, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಶಮಿ.

Trending News