ICC World Cup 2023: ಭಾರತದ ಆತಿಥ್ಯದಲ್ಲಿ ಈ ವರ್ಷ ಏಕದಿನ ವಿಶ್ವಕಪ್ ಟೂರ್ನಿ ನಡೆಯಲಿದೆ. ಟ್ರೋಫಿ ಗೆಲ್ಲಲು ಟೀಂ ಇಂಡಿಯಾ ಪ್ರಬಲ ಸ್ಪರ್ಧಿಯಾಗಿದ್ದು, ಡ್ಯಾಶಿಂಗ್ ಓಪನರ್ ರೋಹಿತ್ ಶರ್ಮಾ ನಾಯಕತ್ವ ವಹಿಸಲಿದ್ದಾರೆ. ಈ ಐಸಿಸಿ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿವೆ. ವಿಶ್ವಕಪ್ ಟೂರ್ನಿಗೂ ಮುನ್ನವೇ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ.
ರೋಹಿತ್ ಮೇಲೆ ದೊಡ್ಡ ಜವಾಬ್ದಾರಿ!
ಈ ವರ್ಷ ಅಕ್ಟೋಬರ್-ನವೆಂಬರ್ನಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಭಾರತ ಆತಿಥ್ಯ ವಹಿಸಲಿದೆ. ಕಳೆದ 12 ವರ್ಷಗಳಿಂದ ಈ ಟೂರ್ನಿ ಗೆಲ್ಲಲು ಟೀಂ ಇಂಡಿಯಾಕ್ಕೆ ಸಾಧ್ಯವಾಗಿಲ್ಲ. ಎಂ.ಎಸ್.ಧೋನಿ ನೇತೃತ್ವದಲ್ಲಿ ಟೀಂ ಇಂಡಿಯಾ 2011ರಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ವಿಶ್ವ ಚಾಂಪಿಯನ್ ಆಗಿತ್ತು. ಇದೀಗ ಮತ್ತೊಮ್ಮೆ ಭಾರತದ ಕೋಟ್ಯಂತರ ಅಭಿಮಾನಿಗಳಿಗೆ ಸಂಭ್ರಮಿಸಲು ದೊಡ್ಡ ಅವಕಾಶವಿದೆ. ರೋಹಿತ್ ಶರ್ಮಾ ಅವರು ಈ ಕನಸನ್ನು ನನಸು ಮಾಡುತ್ತಾರಾ ಅನ್ನೋ ಪ್ರಶ್ನೆ ಮೂಡಿದೆ.
ಇದನ್ನೂ ಓದಿ: Sarfaraz Khan: ಆಯ್ಕೆಗಾರರನ್ನು ತರಾಟೆಗೆ ತೆಗೆದುಕೊಂಡ ಸರ್ಫರಾಜ್ ಖಾನ್; ವಿಡಿಯೋ ಹಂಚಿಕೊಂಡು ಆಕ್ರೋಶ!
10 ತಂಡಗಳು ಭಾಗವಹಿಸಲಿವೆ
ಮುಂಬರುವ ಏಕದಿನ ವಿಶ್ವಕಪ್ನಲ್ಲಿ 10 ತಂಡಗಳು ಭಾಗವಹಿಸಲಿವೆ. ಆತಿಥೇಯ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ಪಾಕಿಸ್ತಾನ, ಅಫ್ಘಾನಿಸ್ತಾನ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶವನ್ನು ಒಳಗೊಂಡಿರುವ 8 ತಂಡಗಳು ನೇರ ಅರ್ಹ ಗಳಸಿಸಿದ್ದರೆ, ಉಳಿದ 2 ತಂಡಗಳಿಗೆ ಕ್ವಾಲಿಫೈಯರ್ ಪಂದ್ಯಗಳು ನಡೆಯುತ್ತಿವೆ.
ಇದನ್ನೂ ಓದಿ: Watch: ವಿಮಾನದಲ್ಲಿ ಧೋನಿಗೆ ಚಾಕಲೇಟ್ ನೀಡಿದ ಗಗನ ಸಖಿ...!
ಈ 3 ತಂಡಗಳು ವಿಶ್ವಕಪ್ ಟೂರ್ನಿಯಿಂದ ಹೊರಕ್ಕೆ!
ವಿಶ್ವಕಪ್ ಅರ್ಹತಾ ಪಂದ್ಯಗಳ ಸಂಪೂರ್ಣ ಫಲಿತಾಂಶ ಇನ್ನೂ ಬರಬೇಕಿದೆ. ಆದರೆ 3 ತಂಡಗಳು ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿವೆ. ಇವುಗಳಲ್ಲಿ ಭಾರತದ ನೆರೆಯ ನೇಪಾಳ ಮತ್ತು ಅಮೆರಿಕ (USA) ಸೇರಿವೆ. ಇದರ ಹೊರತಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ತಂಡವು ಐಸಿಸಿ ಪಂದ್ಯಾವಳಿಯ ಮುಖ್ಯ ಗುಂಪಿನ ಅರ್ಹತೆ ಕಳೆದುಕೊಂಡಿದೆ. ನೇಪಾಳ 4 ಪಂದ್ಯಗಳಲ್ಲಿ 3ರಲ್ಲಿ ಸೋತಿದ್ದರೆ, ಅಮೆರಿಕ ತನ್ನ ಎಲ್ಲಾ 3 ಪಂದ್ಯಗಳನ್ನು ಸೋತಿದೆ. ಯುಎಇ ತಂಡ ಕೂಡ ಆಡಿದ ಎಲ್ಲಾ 3 ಪಂದ್ಯಗಳಲ್ಲಿ ಸೋತು ಗ್ರೂಪ್- Bಯಿಂದ ಹೊರಬಿದ್ದಿದೆ. ಅರ್ಹತಾ ಸುತ್ತಿನಲ್ಲಿ 10 ತಂಡಗಳು ಭಾಗವಹಿಸುತ್ತಿವೆ. ಈ ಪೈಕಿ 6 ತಂಡಗಳು ಸೂಪರ್-6ಗೆ ಅರ್ಹತೆ ಪಡೆಯಲಿದ್ದು, ನಂತರ 2 ತಂಡಗಳು ಮುಖ್ಯ ಗುಂಪಿನಲ್ಲಿ ಸ್ಥಾನ ಪಡೆಯಲಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.