ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯಕ್ಕೂ ಮುನ್ನ ಸ್ಟಾರ್ ಆಲ್’ರೌಂಡರ್ ಸೇರಿ ಟೀಂ ಇಂಡಿಯಾದ ಇಬ್ಬರು ಔಟ್!

World Cup 2023: ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ತವರಿನಲ್ಲಿ ಭಾನುವಾರದಿಂದ ಆರಂಭಿಸಲಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 5 ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

Written by - Bhavishya Shetty | Last Updated : Oct 6, 2023, 07:17 PM IST
    • ಮುನ್ನ ಟೀಂ ಇಂಡಿಯಾ ಬ್ಯಾಕ್‌ ಟು ಬ್ಯಾಕ್ ಬ್ಯಾಡ್ ನ್ಯೂಸ್ ಪಡೆಯುತ್ತಿದೆ
    • ಆರಂಭಿಕ ಮತ್ತು ಸ್ಟಾರ್ ಆಲ್’ರೌಂಡರ್ ತಂಡದಿಂದ ಹೊರ ಬಿದ್ದಿದ್ದಾರೆ ಎನ್ನಲಾಗಿದೆ
    • ಏಕದಿನ ವಿಶ್ವಕಪ್ ಟೂರ್ನಿಯನ್ನು ತವರಿನಲ್ಲಿ ಭಾನುವಾರದಿಂದ ಆರಂಭಿಸಲಿದೆ
ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯಕ್ಕೂ ಮುನ್ನ ಸ್ಟಾರ್ ಆಲ್’ರೌಂಡರ್ ಸೇರಿ ಟೀಂ ಇಂಡಿಯಾದ ಇಬ್ಬರು ಔಟ್!  title=
World Cup 2023

World Cup 2023, IND vs AUS: ಅಕ್ಟೋಬರ್ 8ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಬ್ಯಾಕ್‌ ಟು ಬ್ಯಾಕ್ ಬ್ಯಾಡ್ ನ್ಯೂಸ್ ಪಡೆಯುತ್ತಿದ್ದು, ಆರಂಭಿಕ ಮತ್ತು ಸ್ಟಾರ್ ಆಲ್’ರೌಂಡರ್ ತಂಡದಿಂದ ಹೊರ ಬಿದ್ದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಾಲಿವುಡ್ ನಟಿ ಕಂಗನಾ ರಣಾವತ್ ಮದುವೆ..! ‘ರಾಣಿ’ಯ ವರಿಸುವ ವರನ್ಯಾರು ಗೊತ್ತಾ?

ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ತವರಿನಲ್ಲಿ ಭಾನುವಾರದಿಂದ ಆರಂಭಿಸಲಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 5 ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

ಈ ಪಂದ್ಯಕ್ಕೂ ಮುನ್ನ ಭಾರತದ ಆರಂಭಿಕ ಆಟಗಾರನಾದ ಶುಭ್ಮನ್ ಗಿಲ್ ಡೆಂಗ್ಯೂನಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದೀಗ ಮತ್ತೊಂದು ಸುದ್ದಿ ಹಬ್ಬಿದ್ದು, ಸ್ಟಾರ್ ಆಲ್’ರೌಂಡರ್ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.

ಡೆಂಗ್ಯೂ ಕಾರಣದಿಂದ ಮೊದಲ ಪಂದ್ಯಕ್ಕೆ ಶುಭ್ಮನ್ ಅಲಭ್ಯ ಎನ್ನಲಾಗುತ್ತಿದೆ. ಇದೀಗ ಅಭ್ಯಾಸದ ವೇಳೆ ಹಾರ್ದಿಕ್ ಪಾಂಡ್ಯ ಕೂಡ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಮಾಧ್ಯಮ ಮೂಲದ ಮಾಹಿತಿ ಪ್ರಕಾರ, ಭಾರತ ತಂಡದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನೆಟ್ಸ್ ಅಭ್ಯಾಸದ ವೇಳೆ ಗಾಯಗೊಂಡಿದ್ದಾರೆ.

ಇದನ್ನೂ ಓದಿ: 9 ವರ್ಷಗಳ ಬಳಿಕ ಚಿನ್ನ ಗೆದ್ದ ಭಾರತ ಪುರುಷರ ಹಾಕಿ ತಂಡ: ಪ್ಯಾರಿಸ್ ಒಲಿಂಪಿಕ್ಸ್’ಗೆ ಟಿಕೆಟ್ ಫಿಕ್ಸ್

ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದ ಹಾರ್ದಿಕ್ ಬೆರಳಿಗೆ ಬಾಲ್ ಬಡಿದಿದ್ದು, ಇದಾದ ಬಳಿಕ ಬ್ಯಾಟಿಂಗ್ ಮಾಡಲು ಸಾಧ್ಯವಾಗಿರಲಿಲ್ಲ. ಗಾಯ ಗಂಭೀರವಾಗಿಲ್ಲದಿದ್ದರೂ, ಮುನ್ನೆಚ್ಚರಿಕೆಯಾಗಿ ಅಭ್ಯಾಸ ಮಾಡದಿರಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News