ಶಮಿಗೆ ವಿಶ್ರಾಂತಿ ನೀಡಿ ಈ ಸ್ವಿಂಗ್ ಮಾಸ್ಟರ್’ನ್ನು ಟೀಂ ಇಂಡಿಯಾಗೆ ಸೇರಿಸಿಕೊಳ್ಳಲಾಗುತ್ತಿದೆ: ಬಿಸಿಸಿಐ ಅಧಿಕಾರಿ ಹೇಳಿಕೆ

Bhuvneshwar Kumar Team India Come Back: ICC ODI ವಿಶ್ವಕಪ್ 2023 ನಿರ್ಣಾಯಕ ಹಂತವನ್ನು ತಲುಪಿದೆ. ಈ ಮಧ್ಯೆ, ಭಾರತೀಯ ಕ್ರಿಕೆಟ್ ತಂಡ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯು 2024ರಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್‌’ಗೆ ಈಗಾಗಲೇ ತಯಾರಿ ನಡೆಸುತ್ತಿದೆ.

Written by - Bhavishya Shetty | Last Updated : Nov 8, 2023, 03:10 PM IST
    • ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೂಲಕ ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್
    • ಸ್ವಿಂಗ್ ಮಾಸ್ಟರ್ ಎಂದೇ ಖ್ಯಾತಿ ಪಡೆದಿರುವ ಭುವನೇಶ್ವರ್ ಕುಮಾರ್
    • ರಿಯಾನ್ ಪರಾಗ್ ಮತ್ತು ಸಂಜು ಸ್ಯಾಮ್ಸನ್ ಕೂಡ ಆಯ್ಕೆಯಾಗಿದ್ದಾರೆ ಎಂದು ವರದಿ
ಶಮಿಗೆ ವಿಶ್ರಾಂತಿ ನೀಡಿ ಈ ಸ್ವಿಂಗ್ ಮಾಸ್ಟರ್’ನ್ನು ಟೀಂ ಇಂಡಿಯಾಗೆ ಸೇರಿಸಿಕೊಳ್ಳಲಾಗುತ್ತಿದೆ: ಬಿಸಿಸಿಐ ಅಧಿಕಾರಿ ಹೇಳಿಕೆ title=
Team India

Bhuvneshwar Kumar Team India Come Back: ಸ್ವಿಂಗ್ ಮಾಸ್ಟರ್ ಎಂದೇ ಖ್ಯಾತಿ ಪಡೆದಿರುವ ಭುವನೇಶ್ವರ್ ಕುಮಾರ್ ಇದೀಗ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೂಲಕ ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆಯಷ್ಟೇ ಕೊನೆಗೊಂಡ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಭುವಿ 16 ವಿಕೆಟ್ ಪಡೆದು ಫಾರ್ಮ್’ಗೆ ಮರಳಿದ್ದರು. ಇವರೊಂದಿಗೆ ರಿಯಾನ್ ಪರಾಗ್ ಮತ್ತು ಸಂಜು ಸ್ಯಾಮ್ಸನ್ ಕೂಡ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ.

ICC ODI ವಿಶ್ವಕಪ್ 2023 ನಿರ್ಣಾಯಕ ಹಂತವನ್ನು ತಲುಪಿದೆ. ಈ ಮಧ್ಯೆ, ಭಾರತೀಯ ಕ್ರಿಕೆಟ್ ತಂಡ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯು 2024ರಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್‌’ಗೆ ಈಗಾಗಲೇ ತಯಾರಿ ನಡೆಸುತ್ತಿದೆ. ಇದರ ಮೊದಲ ಭಾಗವಾಗಿ ಭಾರತ ತಂಡ ವಿಶ್ವಕಪ್ ಬಳಿಕ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡಲಿದೆ.

ಇದನ್ನೂ ಓದಿ: ಈ ಆಟಗಾರನ ಬಗ್ಗೆ ಕ್ರಿಕೆಟ್ ದೇವರ ಬಾಯಲ್ಲಿ ಬಂತು ಈ ಮಾತು ! ತೆಂಡೂಲ್ಕರ್ ಈ ರೀತಿ ಮಾತನಾಡಲು ಕಾರಣ ? 

ಆಸೀಸ್ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಗೆ ಭಾರತ ತಂಡವನ್ನು ಈ ವಾರ ಪ್ರಕಟಿಸುವ ಸಾಧ್ಯತೆ ಇದೆ. ಈ ಸರಣಿಯಲ್ಲಿ ಕೊಹ್ಲಿ, ರೋಹಿತ್, ಜಡೇಜಾ, ಬುಮ್ರಾ ಸೇರಿದಂತೆ ಕೆಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಒಂದು ವರ್ಷ ತಂಡದಿಂದ ದೂರ ಉಳಿದಿದ್ದ ಈ ಸ್ಟಾರ್ ಬೌಲರ್ ಮತ್ತೆ ಮರಳುವುದು ಖಚಿತ.

"ಆಸ್ಟ್ರೇಲಿಯಾ ವಿರುದ್ಧದ T20 ಸರಣಿಗೆ ಆಯ್ಕೆಗಾರರು ಎಲ್ಲಾ ಹಿರಿಯ ಬೌಲರ್‌’ಗಳಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಹೀಗಾಗಿ, ಬೌಲಿಂಗ್ ವಿಭಾಗವನ್ನು ಮುನ್ನಡೆಸಲು ಭುವನೇಶ್ವರ್ ಅವರಂತಹ ಅನುಭವಿ ಸೀಮರ್ ಅಗತ್ಯವಿದೆ. ಅವರನ್ನು ವಾಪಸ್ ಕರೆಸಿಕೊಳ್ಳಬಹುದು" ಎಂದು BCCI ಅಧಿಕಾರಿಗಳು ತಿಳಿಸಿದ್ದಾರೆ.

ಕಳಪೆ ಫಾರ್ಮ್ ನಂತರ ತಂಡದಿಂದ ಕೈಬಿಡಲ್ಪಟ್ಟ ಭುವನೇಶ್ವರ್ ಕುಮಾರ್ ಆ ಬಳಿಕ ಐಪಿಎಲ್ 2023ರಲ್ಲಿ ಆಡಿದ್ದರು. ಆದರೆ, ಅಲ್ಲಿಯೂ ಅದೃಷ್ಟ ಕೈಕೊಟ್ಟಿತ್ತು. 14 ಪಂದ್ಯಗಳಲ್ಲಿ ಅವರು 8.33 ಎಕಾನಮಿ ದರದಲ್ಲಿ 16 ವಿಕೆಟ್ ಪಡೆದಿದ್ದರು. ಇದು ಐಪಿಎಲ್‌’ನಲ್ಲಿ ಅವರ ಅತ್ಯಂತ ಕಳಪೆ ಪ್ರದರ್ಶನವಾಗಿತ್ತು.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ಇರ್ಫಾನ್ ಪಠಾಣ್ ಮಡದಿಯ ಫೇಸ್ ರಿವೀಲ್! ಏನ್ ಚಂದ ಗುರೂ…ಸೌಂದರ್ಯದ ಗಣಿಯೇ

ಅಂದಹಾಗೆ ಇವರೊಂದಿಗೆ ರಿಯಾನ್ ಪರಾಗ್ ಮತ್ತು ಸಂಜು ಸ್ಯಾಮ್ಸನ್ ಕೂಡ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ವಿಶ್ವಕಪ್‌ ತಂಡದಲ್ಲಿ ಇಲ್ಲದಿದ್ದರೂ, ಮುಂಬರುವ ಸರಣಿಯಲ್ಲಿ ಸ್ಯಾಮ್ಸನ್ ವಿಕೆಟ್‌ ಕೀಪರ್ ಆಗಿರುತ್ತಾರೆ. ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಅವರು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News