ಕೀವೀಸ್ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ 11 ಪ್ರಕಟ: ಪಾಂಡ್ಯ ಬದಲಿಗೆ ಆಡಲಿದ್ದಾರೆ ಈ ಸ್ಟಾರ್ ವೇಗಿ

India's Probable Playing XI: ಇನ್ನೊಂದೆಡೆ ಟೀಂ ಇಂಡಿಯಾದಂತೆ ನ್ಯೂಜಿಲೆಂಡ್ ಕೂಡ ನಾಲ್ಕು ಪಂದ್ಯಗಳನ್ನು ಗೆದ್ದು ಗೆಲುವಿನ ಓಟ ಮುಂದುವರಿಸಿದೆ. ಈ ಪಂದ್ಯಕ್ಕೂ ಮುನ್ನವೇ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ರೂಪದಲ್ಲಿ ಭಾರತಕ್ಕೆ ದೊಡ್ಡ ಆಘಾತ ಎದುರಾಗಿದ್ದು, ಇದೀಗ ಪ್ಲೇಯಿಂಗ್ ಇಲೆವೆನ್’ನಲ್ಲಿ ಬದಲಾವಣೆಯಾಗುವುದು ಖಚಿತವಾಗಿದೆ.

Written by - Bhavishya Shetty | Last Updated : Oct 21, 2023, 07:04 PM IST
    • ಪ್ಲೇಯಿಂಗ್ 11 ನಲ್ಲಿ ಎರಡು ಬದಲಾವಣೆ ಸೂಚಿಸಿದ ಇರ್ಫಾನ್ ಪಠಾಣ್
    • 20 ವರ್ಷಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿಲ್ಲ ಭಾರತ
    • ಟೀಂ ಇಂಡಿಯಾದಂತೆ 4 ಪಂದ್ಯಗಳನ್ನು ಗೆದ್ದ ನ್ಯೂಜಿಲೆಂಡ್
ಕೀವೀಸ್ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ 11 ಪ್ರಕಟ: ಪಾಂಡ್ಯ ಬದಲಿಗೆ ಆಡಲಿದ್ದಾರೆ ಈ ಸ್ಟಾರ್ ವೇಗಿ title=
team india playing 11

IND VS NZ World Cup 2023 Playing 11: ವಿಶ್ವಕಪ್‌ 2023ರ ಟೂರ್ನಿಯಲ್ಲಿ ಸತತ ನಾಲ್ಕು ಪಂದ್ಯಗಳನ್ನು ಗೆದ್ದ ಭಾರತಕ್ಕೆ ಮುಂಬರುವ ಕೀವೀಸ್ ವಿರುದ್ಧದ ಹಣಾಹಣಿ ಪ್ರತಿಷ್ಠೆಯ ಅಖಾಡವಾಗಲಿದೆ. ಏಕೆಂದರೆ 20 ವರ್ಷಗಳ ಇತಿಹಾಸದಲ್ಲಿ ಇದುವರೆಗೆ ಭಾರತ, ನ್ಯೂಜಿಲೆಂಡ್ ತಂಡದ ವಿರುದ್ಧ ಗೆಲುವು ಸಾಧಿಸಿಲ್ಲ,

ಇದನ್ನೂ ಓದಿ: ಹಾರ್ದಿಕ ಪಾಂಡ್ಯ ಔಟ್: ಉಪನಾಯಕನಾಗಿ 31ರ ಹರೆಯದ ಬಲಗೈ ಬ್ಯಾಟರ್’ಗೆ ಅವಕಾಶ ಕೊಟ್ಟ ರೋಹಿತ್ ಶರ್ಮಾ

ಇನ್ನೊಂದೆಡೆ ಟೀಂ ಇಂಡಿಯಾದಂತೆ ನ್ಯೂಜಿಲೆಂಡ್ ಕೂಡ ನಾಲ್ಕು ಪಂದ್ಯಗಳನ್ನು ಗೆದ್ದು ಗೆಲುವಿನ ಓಟ ಮುಂದುವರಿಸಿದೆ. ಈ ಪಂದ್ಯಕ್ಕೂ ಮುನ್ನವೇ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ರೂಪದಲ್ಲಿ ಭಾರತಕ್ಕೆ ದೊಡ್ಡ ಆಘಾತ ಎದುರಾಗಿದ್ದು, ಇದೀಗ ಪ್ಲೇಯಿಂಗ್ ಇಲೆವೆನ್’ನಲ್ಲಿ ಬದಲಾವಣೆಯಾಗುವುದು ಖಚಿತವಾಗಿದೆ. ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ ಕೂಡ ಎರಡು ಬದಲಾವಣೆಗಳನ್ನು ಸೂಚಿಸಿದ್ದಾರೆ.

ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಅಕ್ಟೋಬರ್ 22 ರಂದು ಅಂದರೆ ಭಾನುವಾರದಂದು ವಿಶ್ವಕಪ್‌ ಪಂದ್ಯವನ್ನಾಡಲಿದೆ. ಈ ಟೂರ್ನಿಯಲ್ಲಿ ಉಭಯ ತಂಡಗಳ ಗೆಲುವಿನ ನಾಗಾಲೋಟ ಮುಂದುವರಿದಿದೆ. ಈ ಪಂದ್ಯದಲ್ಲಿ ಒಂದು ತಂಡದ ಗೆಲುವಿನ ಓಟಕ್ಕೆ ಬ್ರೇಕ್ ಬೀಳಲಿದೆ.

ಅಂದಹಾಗೆ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದು, ಈ ಹಿನ್ನೆಲೆಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಭಾರತದ ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ ಪ್ಲೇಯಿಂಗ್ ಇಲೆವೆನ್ ನಲ್ಲಿ ಎರಡು ಬದಲಾವಣೆಗಳನ್ನು ಸೂಚಿಸಿದ್ದಾರೆ.

ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ ಪ್ರಕಾರ, ನ್ಯೂಜಿಲೆಂಡ್‌’ನಂತಹ ಬಲಿಷ್ಠ ತಂಡದ ವಿರುದ್ಧ ನಾವು ಐವರು ಬೌಲರ್‌ಗಳೊಂದಿಗೆ ಆಡಬೇಕು. ಇಂತಹ ಪರಿಸ್ಥಿತಿಯಲ್ಲಿ ಶಾರ್ದೂಲ್ ಠಾಕೂರ್ ಬದಲಿಗೆ ಮೊಹಮ್ಮದ್ ಶಮಿ ಹಾಗೂ ಗಾಯಾಳು ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್’ಗೆ ಅವಕಾಶ ನೀಡಬೇಕು. ಸೂರ್ಯಕುಮಾರ್ ಆಗಮನದಿಂದ ಭಾರತದ ಬ್ಯಾಟಿಂಗ್ ಇನ್ನಷ್ಟು ಬಲಿಷ್ಠವಾಗಲಿದೆ.

ಭಾರತದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಕೂಡ ಇರ್ಫಾನ್ ಪಠಾಣ್ ಅವರ ಸಲಹೆಯನ್ನು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: “ಕೊಹ್ಲಿಯದ್ದು ಸ್ವಾರ್ಥದ ಸೆಂಚುರಿ..!- ವಿರಾಟ್ ಶತಕದಾಟದ ಬಗ್ಗೆ ಚೇತೇಶ್ವರ ಪೂಜಾರ ಹೇಳಿದ್ದೇನು?

ಭಾರತದ ಸಂಭಾವ್ಯ ಪ್ಲೇಯಿಂಗ್ XI:

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News