ICC world cup 2023: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಧೋನಿ ವಿಶ್ವಕಪ್ ದಾಖಲೆ ಮುರಿದ ಕೆಎಲ್ ರಾಹುಲ್!

KL Rahul Break MS Dhoni Record: ಕೆಎಲ್ ರಾಹುಲ್ (97* ರನ್) 12 ವರ್ಷಗಳ ನಂತರ ವಿಶ್ವಕಪ್‌ನಲ್ಲಿ ವಿಕೆಟ್‌ಕೀಪರ್ ಆಗಿ ಎಂಎಸ್ ಧೋನಿ (91* ರನ್) ದಾಖಲೆಯನ್ನು ಮುರಿದಿದ್ದಾರೆ.  

Written by - Savita M B | Last Updated : Oct 9, 2023, 06:59 PM IST
  • ವಿಶ್ವಕಪ್‌ನ 5 ನೇ ಲೀಗ್ ಪಂದ್ಯ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಿತು.
  • ಇದರಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಕೇವಲ 199 ರನ್ ಗಳಿಸಿತು.
  • ಕೆ ಎಲ್‌ ರಾಹುಲ್‌ ಔಟ್‌ ಆಗದೇ ಹೆಚ್ಚು ರನ್‌ ಗಳಿಸಿ ಎಂ ಎಸ್‌ ಧೋನಿ ದಾಖಲೆ ಮುರಿದಿದ್ದಾರೆ
ICC world cup 2023: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಧೋನಿ ವಿಶ್ವಕಪ್ ದಾಖಲೆ ಮುರಿದ ಕೆಎಲ್ ರಾಹುಲ್! title=

KL Rahul: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ವಿಶ್ವಕಪ್‌ನ 5 ನೇ ಲೀಗ್ ಪಂದ್ಯ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಿತು. ಇದರಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಕೇವಲ 199 ರನ್ ಗಳಿಸಿತು. ಡೇವಿಡ್ ವಾರ್ನರ್ 41 ರನ್ ಮತ್ತು ಸ್ಟೀವ್ ಸ್ಮಿತ್ 46 ರನ್ ಗಳಿಸಿದರು.

ಸರಳ ಗುರಿ ಬೆನ್ನಟ್ಟಿದ ಭಾರತ ತಂಡದ ಇಶಾನ್ ಕಿಶನ್, ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಅವರು ಔಟಾದರು. ನಂತರ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಶಾಂತವಾಗಿ ಆಟವಾಡಿ ಹೆಚ್ಚು ರನ್ ಗಳಿಸಿದರು. ಒಂದು ಹಂತದಲ್ಲಿ ವಿರಾಟ್ ಕೊಹ್ಲಿ 67ನೇ ಅರ್ಧಶತಕ ಹಾಗೂ ಕೆಎಲ್ ರಾಹುಲ್ 16ನೇ ಅರ್ಧಶತಕ ಗಳಿಸಿದರು. ವಿರಾಟ್ ಕೊಹ್ಲಿ 85 ರನ್ ಗಳಿಸಿ ಔಟಾದ ಬಳಿಕ ಕೊನೆಯವರೆಗೂ ಆಡಿದ ಕೆಎಲ್ ರಾಹುಲ್ 97 ರನ್ ಗಳಿಸಿ ಭಾರತ ತಂಡಕ್ಕೆ ಗೆಲುವು ತಂದುಕೊಟ್ಟರು.

ಇದನ್ನೂ ಓದಿ-IND VS AUS ಸರಣಿಯ ನಡುವೆ ಶಾಕಿಂಗ್ ನ್ಯೂಸ್, ಈ ಆಟಗಾರನಿಗೆ ಎರಡು ಪಂದ್ಯಗಳಿಗೆ ನಿಷೇಧ

ಭಾರತ 41.2 ಓವರ್‌ಗಳಲ್ಲಿ 4 ವಿಕೆಟ್‌ಗೆ 201 ರನ್ ಗಳಿಸಿ 6 ವಿಕೆಟ್‌ಗಳ ಜಯ ಸಾಧಿಸಿತು. ಕೆಎಲ್ ರಾಹುಲ್ ಔಟಾಗದೆ 97 ರನ್ ಗಳಿಸುವ ಮೂಲಕ ವಿಶ್ವಕಪ್‌ನಲ್ಲಿ ವಿಕೆಟ್ ಕೀಪರ್ ಆಗಿ ಎಂಎಸ್ ಧೋನಿ ಅವರ ದಾಖಲೆಯನ್ನು ಮುರಿದರು. 

ಕಳೆದ 2011ರ ವಿಶ್ವಕಪ್‌ನಲ್ಲಿ ಧೋನಿ ವಿಕೆಟ್‌ಕೀಪರ್ ಆಗಿ ಔಟಾಗದೆ 91 ರನ್ ಗಳಿಸಿದ್ದರು. ಈ ದಾಖಲೆಯನ್ನು ಕೆಎಲ್ ರಾಹುಲ್ ಮುರಿದಿದ್ದಾರೆ. 2015ರಲ್ಲಿ ಜಿಂಬಾಬ್ವೆ ವಿರುದ್ಧ 85* ರನ್ ಹಾಗೂ ಆಸ್ಟ್ರೇಲಿಯಾ ವಿರುದ್ಧ 65 ರನ್ ಗಳಿಸಿರುವುದು ಗಮನಾರ್ಹ. ಆದರೆ ಅದಕ್ಕೂ ಮುನ್ನ ರಾಹುಲ್ ದ್ರಾವಿಡ್ 1999ರ ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ ವಿಕೆಟ್ ಕೀಪರ್ ಆಗಿ 147 ರನ್ ಗಳಿಸಿದ್ದರು.

ಇದನ್ನೂ ಓದಿ-12 ವರ್ಷಗಳ ನಂತರ ವಿಶ್ವಕಪ್ ನಲ್ಲಿ ವಿಜಯ ಪತಾಕೆ ಹಾರಿಸಲಿದೆಯಂತೆ ಭಾರತ ! ಯಾವ ಲೆಕ್ಕಾಚಾರದಲ್ಲಿ ಅನ್ನುವ ಮಾಹಿತಿ ಇಲ್ಲಿದೆ !

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News