ಕೀವೀಸ್ ವಿರುದ್ಧ ಮೊದಲ ಎಸೆತದಲ್ಲೇ ವಿಕೆಟ್ ಕಿತ್ತ ಮೊಹಮ್ಮದ್ ಶಮಿ: ಅನಿಲ್ ಕುಂಬ್ಳೆ ವಿಶ್ವಕಪ್ ದಾಖಲೆ ಬ್ರೇಕ್

Most wickets for India in World Cup: ಮೊಹಮ್ಮದ್ ಶಮಿ ನ್ಯೂಜಿಲೆಂಡ್ ಆರಂಭಿಕ ವಿಲ್ ಯಂಗ್ ಅವರನ್ನು ಔಟ್ ಮಾಡುವ ಮೂಲಕ ವಿಶೇಷ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅಂದಹಾಗೆ ಶಮಿ ವಿಶ್ವಕಪ್ ಪಂದ್ಯಗಳಲ್ಲಿ ಭಾರತದ ಪರ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

Written by - Bhavishya Shetty | Last Updated : Oct 22, 2023, 05:11 PM IST
    • ಶಾರ್ದೂಲ್ ಠಾಕೂರ್ ಬದಲಾಗಿ ಸ್ಥಾನ ಪಡೆದ ಮೊಹಮ್ಮದ್ ಶಮಿ
    • ವಿಶ್ವಕಪ್ ಪಂದ್ಯಗಳಲ್ಲಿ ಭಾರತದ ಪರ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್
    • ಮೊಹಮ್ಮದ್ ಶಮಿ ವಿಶ್ವಕಪ್ ಪಂದ್ಯಗಳಲ್ಲಿ 32 ವಿಕೆಟ್ ಪಡೆದಿದ್ದಾರೆ
ಕೀವೀಸ್ ವಿರುದ್ಧ ಮೊದಲ ಎಸೆತದಲ್ಲೇ ವಿಕೆಟ್ ಕಿತ್ತ ಮೊಹಮ್ಮದ್ ಶಮಿ: ಅನಿಲ್ ಕುಂಬ್ಳೆ ವಿಶ್ವಕಪ್ ದಾಖಲೆ ಬ್ರೇಕ್ title=
Mohammad Shami

Most wickets for India in World Cup: ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ಲೇಯಿಂಗ್ 11ನಲ್ಲಿ ಶಾರ್ದೂಲ್ ಠಾಕೂರ್ ಬದಲಾಗಿ ಸ್ಥಾನ ಪಡೆದ ಮೊಹಮ್ಮದ್ ಶಮಿ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: “ನನಗೆ ನಾಚಿಕೆಯಾಗುತ್ತಿದೆ...!” ಪಾಕಿಸ್ತಾನ ತಂಡದ ಕಳಪೆ ಆಟದ ಬಗ್ಗೆ ಶೋಯೆಬ್ ಅಖ್ತರ್ ಹೇಳಿದ್ದೇನು?

ಮೊಹಮ್ಮದ್ ಶಮಿ ನ್ಯೂಜಿಲೆಂಡ್ ಆರಂಭಿಕ ವಿಲ್ ಯಂಗ್ ಅವರನ್ನು ಔಟ್ ಮಾಡುವ ಮೂಲಕ ವಿಶೇಷ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅಂದಹಾಗೆ ಶಮಿ ವಿಶ್ವಕಪ್ ಪಂದ್ಯಗಳಲ್ಲಿ ಭಾರತದ ಪರ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಶಮಿ ವಿಶ್ವಕಪ್‌’ನಲ್ಲಿ 32 ವಿಕೆಟ್‌ಗಳನ್ನು ಕಬಳಿಸಿದ್ದು, ಈ ಹಿಂದೆ ಅನಿಲ್ ಕುಂಬ್ಳೆ ಮೂರನೇ ಸ್ಥಾನದಲ್ಲಿದ್ದರು, ಆದರೆ ಈಗ ಶಮಿ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದ್ದಾರೆ.

ಇದನ್ನೂ ಓದಿ: ಈ ಶ್ರೇಷ್ಠ ಆಟಗಾರನೇ ಭಾರತಕ್ಕೆ ವಿಶ್ವಕಪ್ ಗೆದ್ದುಕೊಡೋದು: ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್

ಮೊಹಮ್ಮದ್ ಶಮಿ ವಿಶ್ವಕಪ್ ಪಂದ್ಯಗಳಲ್ಲಿ 32 ವಿಕೆಟ್ ಪಡೆದಿದ್ದರೆ, ನಾಲ್ಕನೇ ಸ್ಥಾನದಲ್ಲಿರುವ ಅನಿಲ್ ಕುಂಬ್ಳೆ ಹೆಸರಿನಲ್ಲಿ 31 ವಿಕೆಟ್‌’ಗಳಿವೆ. ಇನ್ನೊಂದೆಡೆ ಜಹೀರ್ ಖಾನ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಜಹೀರ್ ಖಾನ್ ವಿಶ್ವಕಪ್ ಪಂದ್ಯಗಳಲ್ಲಿ ಭಾರತದ ಪರ 44 ವಿಕೆಟ್ ಪಡೆದಿದ್ದಾರೆ. ಜಹೀರ್ ಖಾನ್ ಹೊರತಾಗಿ, ಭಾರತದ ಮಾಜಿ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಕೂಡ ವಿಶ್ವಕಪ್ ಪಂದ್ಯಗಳಲ್ಲಿ 44 ವಿಕೆಟ್ ಕಬಳಿಸಿದ್ದಾರೆ.  

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News