“ನಾಚಿಕೆಯಾಗಬೇಕು… ನಾನ್ ಸೆನ್ಸ್”- ಮೊಹಮ್ಮದ್ ಶಮಿ ಶಾಕಿಂಗ್ ಹೇಳಿಕೆ ಕೊಟ್ಟಿದ್ದು ಯಾರಿಗೆ ಗೊತ್ತಾ?

Mohammed Shami Statement About Hasan Raza: ನ್ಯೂಜಿಲೆಂಡ್, ಇಂಗ್ಲೆಂಡ್, ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಆಡಿರುವ ಪಂದ್ಯಗಳಲ್ಲಿ ಮೊಹಮ್ಮದ್ ಶಮಿ ಟೀಂ ಇಂಡಿಯಾದ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಆದರೆ ಶಮಿ ಉತ್ತಮ ಫಾರ್ಮ್’ನ್ನು ಕಂಡು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಹಸನ್ ರಜಾ ಹೊಟ್ಟೆಕಿಚ್ಚು ಪಟ್ಟಂತಿದೆ. ಇದೇ ಕಾರಣಕ್ಕೆ ಈ ಹಿಂದೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು.

Written by - Bhavishya Shetty | Last Updated : Nov 8, 2023, 07:45 PM IST
    • ಆಡಿರುವ 4 ಪಂದ್ಯಗಳಲ್ಲಿ 16 ವಿಕೆಟ್ ಪಡೆದಿರುವ ಶಮಿ
    • ಮೊಹಮ್ಮದ್ ಶಮಿ ಟೀಂ ಇಂಡಿಯಾದ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದಾರೆ
    • ಪಾಕಿಸ್ತಾನದ ವಾಹಿನಿಯೊಂದರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹಸನ್ ರಜಾ
“ನಾಚಿಕೆಯಾಗಬೇಕು… ನಾನ್ ಸೆನ್ಸ್”- ಮೊಹಮ್ಮದ್ ಶಮಿ ಶಾಕಿಂಗ್ ಹೇಳಿಕೆ ಕೊಟ್ಟಿದ್ದು ಯಾರಿಗೆ ಗೊತ್ತಾ? title=
Mohammed Shami

Mohammed Shami Reaction: ಭಾರತ ಕ್ರಿಕೆಟ್ ತಂಡದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ವಿಶ್ವಕಪ್ 2023ರಲ್ಲಿ ಅದ್ಭುತ ಫಾರ್ಮ್ ಕಾಯ್ದುಕೊಂಡಿದ್ದಾರೆ. ಆಡಿರುವ 4 ಪಂದ್ಯಗಳಲ್ಲಿ 16 ವಿಕೆಟ್ ಪಡೆದಿರುವ ಶಮಿ ಟೀಂ ಇಂಡಿಯಾದ ಅಗ್ರ ವಿಕೆಟ್ ಟೇಕರ್ ಎನಿಸಿಕೊಂಡಿದ್ದಾರೆ, ಹಾರ್ದಿಕ್ ಪಾಂಡ್ಯ ಗಾಯದಿಂದ ಹೊರಗುಳಿದ ಬಳಿಕ ಶಮಿ ಟೀಂ ಇಂಟಿಯಾದಲ್ಲಿ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಈ ರಾಶಿಯ ಜನರ ಬಾಳಲ್ಲಿ ದೀಪಾವಳಿ ತರಲಿದೆ ಸಂತೋಷ-ಸಮೃದ್ಧಿ: ಲಕ್ಷ್ಮೀದೇವಿ ಅನುಗ್ರಹದಿಂದ ಸಿರಿಸಂಪತ್ತಿನ ಸುಧೆಯೇ ಹರಿದುಬರಲಿದೆ

ನ್ಯೂಜಿಲೆಂಡ್, ಇಂಗ್ಲೆಂಡ್, ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಆಡಿರುವ ಪಂದ್ಯಗಳಲ್ಲಿ ಮೊಹಮ್ಮದ್ ಶಮಿ ಟೀಂ ಇಂಡಿಯಾದ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಆದರೆ ಶಮಿ ಉತ್ತಮ ಫಾರ್ಮ್’ನ್ನು ಕಂಡು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಹಸನ್ ರಜಾ ಹೊಟ್ಟೆಕಿಚ್ಚು ಪಟ್ಟಂತಿದೆ. ಇದೇ ಕಾರಣಕ್ಕೆ ಈ ಹಿಂದೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು.

ಹಸನ್ ರಜಾ ಹೇಳಿದ್ದೇನು?

ಪಾಕಿಸ್ತಾನದ ವಾಹಿನಿಯೊಂದರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹಸನ್ ರಜಾ, “ಭಾರತಕ್ಕೆ ಬೌಲಿಂಗ್‌ ಮಾಡಲು ಬೇರೆ ಚೆಂಡನ್ನು ನೀಡಲಾಗುತ್ತಿದೆಯೇನೋ ಎಂಬ ಅನುಮಾನ ಇದೆ” ಎಂದು ಹೇಳಿದ್ದರು. ಇದೀಗ ಈ ಹೇಳಿಕೆ ಬಗ್ಗೆ ಆಕ್ರೋಶ ಹೊರಹಾಕಿದ ಬೌಲರ್ ಮೊಹಮ್ಮದ್ ಶಮಿ, ಇನ್‌’ಸ್ಟಾಗ್ರಾಂನಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ದೀಪಾವಳಿ ದಿನ ಮನೆಯಲ್ಲಿ ಹಲ್ಲಿ ಕಂಡರೆ ತಕ್ಷಣ ಈ ಕೆಲಸ ಮಾಡಿ: ಸಾಕ್ಷಾತ್ ಮಹಾಲಕ್ಷ್ಮಿಯೇ ಒಲಿಯುವಳು

“ನಾಚಿಕೆಯಾಗಬೇಕು… ಆಟದ ಕಡೆ ಗಮನ ಹರಿಸಿ ಅನಗತ್ಯ ವಿಚಾರಗಳತ್ತ ಬೇಡ. ಇತರರ ಯಶಸ್ಸನ್ನು ಒಮ್ಮೆ ಆನಂದಿಸಿ. ಇದು ಐಸಿಸಿ ವಿಶ್ವಕಪ್, ನಿಮ್ಮ ಸ್ಥಳೀಯ ಪಂದ್ಯಾವಳಿಯಲ್ಲ. ನೀವು ಒಬ್ಬ ಆಟಗಾರನೇ…!” ಎಂದು ಕಿವಿಹಿಂಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News