ಒಂದೇ ಒಂದು ವರ್ಷದಲ್ಲಿ ಇಷ್ಟೊಂದು ಸಿಕ್ಸರ್ ಬಾರಿಸಿದ ಏಕೈಕ ಕ್ರಿಕೆಟಿಗ ರೋಹಿತ್ ಶರ್ಮಾ! ಡಿವಿಲಿಯರ್ಸ್ ರೆಕಾರ್ಡ್ ಬ್ರೇಕ್

Rohit Sharma World Record: 54 ಎಸೆತಗಳಲ್ಲಿ 61 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದ ಅವರು, 2 ಸಿಕ್ಸರ್ ಮತ್ತು 8 ಬೌಂಡರಿಗಳನ್ನು ಬಾರಿಸಿದ್ದಾರೆ. ಇನ್ನು ಇವರ ಈ ಸ್ಪೋಟಕ ಬ್ಯಾಟಿಂಗ್’ನಿಂದ ಅಂತರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ವಿಶೇಷ ದಾಖಲೆ ನಿರ್ಮಾಣವಾಗಿದೆ.

Written by - Bhavishya Shetty | Last Updated : Nov 12, 2023, 04:52 PM IST
    • ರೋಹಿತ್ ಶರ್ಮಾ ಬಿರುಸಿನ ಬ್ಯಾಟಿಂಗ್ ಮೂಲಕ ವಿಶ್ವದಾಖಲೆಗಳನ್ನೇ ಬರೆದಿದ್ದಾರೆ
    • ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ
    • ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ಆಟಗಾರರು
ಒಂದೇ ಒಂದು ವರ್ಷದಲ್ಲಿ ಇಷ್ಟೊಂದು ಸಿಕ್ಸರ್ ಬಾರಿಸಿದ ಏಕೈಕ ಕ್ರಿಕೆಟಿಗ ರೋಹಿತ್ ಶರ್ಮಾ! ಡಿವಿಲಿಯರ್ಸ್ ರೆಕಾರ್ಡ್ ಬ್ರೇಕ್ title=
Rohit Sharma

Rohit Sharma World Record: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲೆಂಡ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಹಾಗೂ ಸ್ಫೋಟಕ ಆರಂಭಿಕ ಆಟಗಾರ ರೋಹಿತ್ ಶರ್ಮಾ ಬಿರುಸಿನ ಬ್ಯಾಟಿಂಗ್ ಮೂಲಕ ವಿಶ್ವದಾಖಲೆಗಳನ್ನೇ ಬರೆದಿದ್ದಾರೆ.

54 ಎಸೆತಗಳಲ್ಲಿ 61 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದ ಅವರು, 2 ಸಿಕ್ಸರ್ ಮತ್ತು 8 ಬೌಂಡರಿಗಳನ್ನು ಬಾರಿಸಿದ್ದಾರೆ. ಇನ್ನು ಇವರ ಈ ಸ್ಪೋಟಕ ಬ್ಯಾಟಿಂಗ್’ನಿಂದ ಅಂತರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ವಿಶೇಷ ದಾಖಲೆ ನಿರ್ಮಾಣವಾಗಿದೆ.

ಇದನ್ನೂ ಓದಿ: “50 ಓವರ್ ಮಾದರಿಯಲ್ಲಿ ಈ ದೇಶದ ಬೌಲಿಂಗ್ ದಾಳಿ ಅತ್ಯುತ್ತಮವಾಗಿದೆ”- ರವಿಶಾಸ್ತ್ರಿ

ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ದಕ್ಷಿಣ ಆಫ್ರಿಕಾದ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಅವರ ದಾಖಲೆಯನ್ನು ಮುರಿದಿದ್ದಾರೆ.

ನೆದರ್ಲೆಂಡ್ಸ್ ವಿರುದ್ಧ ಭಾರತದ ಇನ್ನಿಂಗ್ಸ್‌’ನ ಏಳನೇ ಓವರ್‌ನಲ್ಲಿ ರೋಹಿತ್ ಶರ್ಮಾ ಈ ದಾಖಲೆ ಮಾಡಿದ್ದಾರೆ. ಅಕರ್‌ಮನ್ ಎಸೆತದಲ್ಲಿ 92 ಮೀಟರ್ ಉದ್ದದ ಸಿಕ್ಸರ್ ಬಾರಿಸಿ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಮಾಡಿದ್ದಾರೆ.

ರೋಹಿತ್ ಶರ್ಮಾ 2023 ರಲ್ಲಿ ಒಟ್ಟು 60 ಏಕದಿನ ಅಂತಾರಾಷ್ಟ್ರೀಯ ಸಿಕ್ಸರ್‌’ಗಳನ್ನು ಬಾರಿಸಿ ವಿಶ್ವದಾಖಲೆ ಮಾಡಿದ್ದಾರೆ.

ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ವಿಷಯದಲ್ಲಿ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾದ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಅವರನ್ನು ಹಿಂದಿಕ್ಕಿದ್ದಾರೆ. ಎಬಿ ಡಿವಿಲಿಯರ್ಸ್ 2015ರಲ್ಲಿ 58 ಅಂತಾರಾಷ್ಟ್ರೀಯ ಏಕದಿನ ಸಿಕ್ಸರ್‌ಗಳನ್ನು ಬಾರಿಸಿದ್ದರು. ಇನ್ನು ವೆಸ್ಟ್ ಇಂಡೀಸ್‌’ನ ಶ್ರೇಷ್ಠ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರು 2019ರಲ್ಲಿ 56 ಏಕದಿನ ಅಂತಾರಾಷ್ಟ್ರೀಯ ಸಿಕ್ಸರ್‌’ಗಳನ್ನು ಬಾರಿಸಿದ್ದರು.

ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ಆಟಗಾರರು (ODI):

1. ರೋಹಿತ್ ಶರ್ಮಾ (ಭಾರತ) - 60 ಸಿಕ್ಸರ್‌ (2023)

2. ಎಬಿ ಡಿವಿಲಿಯರ್ಸ್ (ದಕ್ಷಿಣ ಆಫ್ರಿಕಾ) – 58 ಸಿಕ್ಸರ್‌ (2015)

3. ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್) - 56 ಸಿಕ್ಸರ್‌ (2019)

4. ಶಾಹಿದ್ ಅಫ್ರಿದಿ (ಪಾಕಿಸ್ತಾನ) - 48 ಸಿಕ್ಸರ್‌ (2002)

ಇದನ್ನೂ ಓದಿ: ನೆದರ್ಲ್ಯಾಂಡ್ಸ್ ವಿರುದ್ಧ ಶ್ರೇಷ್ಠ ದಾಖಲೆ ಬರೆದ ರೋಹಿತ್ ಶರ್ಮಾ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News