ಟೀಂ ಇಂಡಿಯಾಗೆ ಬಿಗ್ ಶಾಕ್…! ಗಾಯಕ್ಕೆ ತುತ್ತಾದ ಶುಭ್ಮನ್ ಗಿಲ್ ಪಂದ್ಯದಿಂದ ಔಟ್

Shubamn Gill Retired Hurt: ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ತಂಡಕ್ಕೆ ಉತ್ತಮ ಆರಂಭವನ್ನು ನೀಡಿದ್ದಾರೆ. ಇನ್ನು ಸಿಕ್ಸರ್’ಗಳ ಸುರಿಮಳೆ ಸುರಿಸಿದ ನಾಯಕ ರೋಹಿತ್ ಶರ್ಮಾ 29 ಎಸೆತಕ್ಕೆ 4 ಸಿಕ್ಸ್, 4 ಬೌಂಡರಿ ಒಳಗೊಂಡಂತೆ 47 ರನ್ ಗಳಿಸಿದ್ದಾರೆ.

Written by - Bhavishya Shetty | Last Updated : Nov 15, 2023, 04:24 PM IST
    • ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮೊದಲ ಸೆಮಿಫೈನಲ್ ಪಂದ್ಯ
    • ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್
    • ಸಿಕ್ಸರ್’ಗಳ ಸುರಿಮಳೆ ಸುರಿಸಿದ ನಾಯಕ ರೋಹಿತ್ ಶರ್ಮಾ
ಟೀಂ ಇಂಡಿಯಾಗೆ ಬಿಗ್ ಶಾಕ್…! ಗಾಯಕ್ಕೆ ತುತ್ತಾದ ಶುಭ್ಮನ್ ಗಿಲ್ ಪಂದ್ಯದಿಂದ ಔಟ್ title=
Shubman Gill Injury

IND vs NZ, Shubamn Gill Retired Hurt: ಪ್ರಸಕ್ತ ಏಕದಿನ ವಿಶ್ವಕಪ್ 2023ರ ಲೀಗ್ ಪಂದ್ಯಗಳು ಮುಗಿದಿದ್ದು, ಇದೀಗ ಮೊದಲ ಸೆಮಿಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತ್ತು.

ಇದನ್ನೂ ಓದಿ: ವಿಶ್ವದಾಖಲೆ ಬರೆದ ರೋಹಿತ್ ಶರ್ಮಾ: ಯಾವೊಬ್ಬ ಭಾರತೀಯ ನಾಯಕನೂ ಮಾಡಲು ಸಾಧ್ಯವಾಗದ ವಿಶೇಷ ರೆಕಾರ್ಡ್

ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ತಂಡಕ್ಕೆ ಉತ್ತಮ ಆರಂಭವನ್ನು ನೀಡಿದ್ದಾರೆ. ಇನ್ನು ಸಿಕ್ಸರ್’ಗಳ ಸುರಿಮಳೆ ಸುರಿಸಿದ ನಾಯಕ ರೋಹಿತ್ ಶರ್ಮಾ 29 ಎಸೆತಕ್ಕೆ 4 ಸಿಕ್ಸ್, 4 ಬೌಂಡರಿ ಒಳಗೊಂಡಂತೆ 47 ರನ್ ಗಳಿಸಿದ್ದಾರೆ.

ಇನ್ನೊಂದೆಡೆ ಶುಭ್ಮನ್ ಗಿಲ್ ಕೂಡ ಅದ್ಭುತವಾಗಿ ಆಟವಾಡಿದ್ದಾರೆ. 65 ಎಸೆತಗಳಲ್ಲಿ 79 ರನ್‌’ಗಳ ಇನಿಂಗ್ಸ್‌ ಆಡುತ್ತಿದ್ದರು. ಆದರೆ 23ನೇ ಓವರ್‌’ನ ನಾಲ್ಕನೇ ಎಸೆತ ವೇಳೆ ಇದ್ದಕ್ಕಿದ್ದಂತೆ ಮಂಡಿರಜ್ಜು ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕ್ರೀಸ್’ನಿಂದ ಹೊರ ನಡೆದಿದ್ದಾರೆ.

ಇದನ್ನೂ ಓದಿ: ಭಾರತ vs ನ್ಯೂಜಿಲೆಂಡ್ ಪಂದ್ಯಕ್ಕೆ 2019ರ ಅಂಪೈರ್ಸ್! ಇವರಿದ್ದಾಗ 3 ಪಂದ್ಯಗಳಲ್ಲಿ ಸೋತಿದ್ದ ಟೀಂ

ಸದ್ಯ ಹಾರ್ದಿಕ್ ಪಾಂಡ್ಯ ಕೂಡ ಗಾಯದಿಂದಾಗಿ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಇದೀಗ ಟೀಂ ಇಂಡಿಯಾಗೆ ಮತ್ತೊಂದು ಆಘಾತ ಸಂಭವಿಸಿದ್ದು, ಅಭಿಮಾನಿಗಳಲ್ಲಿ ಭಯದ ವಾತಾವರಣ ಮನೆ ಮಾಡಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News