ವಿಶ್ವಕಪ್ ಪಂದ್ಯದಲ್ಲಿ ಪಾಂಡ್ಯ ಆಡುತ್ತಾರೋ ಇಲ್ಲವೋ? ನಾಯಕ ರೋಹಿತ್ ಶರ್ಮಾ ಕೊಟ್ಟ ಅಪ್ಡೇಟ್ ಹೀಗಿದೆ

Hardik Pandya Health Update, Cricket News in Kannada: ಈ ಪಂದ್ಯದಿಂದಲೂ ಹಾರ್ದಿಕ್ ಪಾಂಡ್ಯ ಹೊರಬಿದ್ದಿದ್ದಾರೆ. ಈ ಸಂಬಂಧ ಶ್ರೀಲಂಕಾ ವಿರುದ್ಧದ ಪಂದ್ಯಕ್ಕೂ ಒಂದು ದಿನ ಮುನ್ನ ನಡೆದ ಪತ್ರಿಕಾಗೋಷ್ಟಿಯಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಅಪ್ಡೇಟ್ ನೀಡಿದ್ದಾರೆ.

Written by - Bhavishya Shetty | Last Updated : Nov 2, 2023, 03:04 PM IST
    • ಮುಂದಿನ ವಿಶ್ವಕಪ್ ಪಂದ್ಯವನ್ನು ಪಾಂಡ್ಯ ಆಡುತ್ತಾರೆಯೇ ಅಥವಾ ಇಲ್ಲವೇ?
    • ಪತ್ರಿಕಾಗೋಷ್ಟಿಯಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಅಪ್ಡೇಟ್
    • ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ 2023 ಪಂದ್ಯ
ವಿಶ್ವಕಪ್ ಪಂದ್ಯದಲ್ಲಿ ಪಾಂಡ್ಯ ಆಡುತ್ತಾರೋ ಇಲ್ಲವೋ? ನಾಯಕ ರೋಹಿತ್ ಶರ್ಮಾ ಕೊಟ್ಟ ಅಪ್ಡೇಟ್ ಹೀಗಿದೆ title=
Hardik Pandya Health Update

Hardik Pandya Health Update: ವಿಶ್ವಕಪ್ ಟೂರ್ನಿಯ 33ನೇ ಪಂದ್ಯ ಇಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಇದುವರೆಗೆ ಯಾವೊಂದು ಪಂದ್ಯದಲ್ಲೂ ಸೋಲು ಕಾಣದ ಭಾರತ, ಸಿಂಹಳೀಯರಿಗೆ ಏಷ್ಯಕಪ್ ಫೈನಲ್ ಪಂದ್ಯದಂತೇ ಸಿಂಹಸ್ವಪ್ನವಾಗಿ ಕಾಡಲು ತಯಾರಿ ನಡೆಸಿಕೊಂಡಿದ್ದಾರೆ.

ಇದನ್ನೂ ಓದಿ: ಮತ್ತೆ ಹೊಳಪು ಪಡೆದ ಚಿನ್ನ ಮತ್ತು ಬೆಳ್ಳಿ ! ಇಂದು ಎಷ್ಟಿದೆ ನೋಡಿ ಬಂಗಾರದ ಬೆಲೆ 

ಆದರೆ ಈ ಪಂದ್ಯದಿಂದಲೂ ಹಾರ್ದಿಕ್ ಪಾಂಡ್ಯ ಹೊರಬಿದ್ದಿದ್ದಾರೆ. ಈ ಸಂಬಂಧ ಶ್ರೀಲಂಕಾ ವಿರುದ್ಧದ ಪಂದ್ಯಕ್ಕೂ ಒಂದು ದಿನ ಮುನ್ನ ನಡೆದ ಪತ್ರಿಕಾಗೋಷ್ಟಿಯಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಅಪ್ಡೇಟ್ ನೀಡಿದ್ದಾರೆ.

ಮುಂದಿನ ವಿಶ್ವಕಪ್ ಪಂದ್ಯವನ್ನು ಪಾಂಡ್ಯ ಆಡುತ್ತಾರೆಯೇ ಅಥವಾ ಇಲ್ಲವೇ ಎಂದು ಪತ್ರಿಕಾಗೋಷ್ಟಿಯಲ್ಲಿ ಪ್ರಶ್ನೆ ಕೇಳಲಾಗಿತ್ತು. ಈ ಸಂಬಂಧ  ಮಾತನಾಡಿದ ಅವರು, “ಹಾರ್ದಿಕ್ ಪಾಂಡ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದು, ಶೀಘ್ರದಲ್ಲೇ ಹಿಂತಿರುಗುತ್ತಾರೆ ಎಂಬ ನಂಬಿಕೆ ಇದೆ. ಆದಷ್ಟು ಬೇಗ ಹಾರ್ದಿಕ್ ಪಾಂಡ್ಯ ಗುಣಮುಖರಾಗಿ ಮೈದಾನಕ್ಕೆ ಮರಳುವ ಅವಕಾಶ ಪಡೆಯಲಿ ಎಂದು ಹಾರೈಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: SSLC & PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 3 ವಾರ್ಷಿಕ ಪರೀಕ್ಷೆ ಬರೆಯಲು ಅವಕಾಶ!

ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ 2023 ಪಂದ್ಯ ಇಂದು ನವೆಂಬರ್ 2 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಜಯಗಳಿಸಿದರೆ, ವಿಶ್ವಕಪ್‌ 2023ರ ಟೂರ್ನಿಯಲ್ಲಿ ಸೆಮಿಫೈನಲ್‌ ಪ್ರವೇಶಿಸಿದ ಮೊದಲ ತಂಡವಾಗಿ ಹೊರಹೊಮ್ಮಲಿದೆ ಭಾರತ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News