wtc final qualification scenarios Of team India: ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನ್ನು ಅನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪುಣೆ ಹಾಗೂ ಮುಂಬೈನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ 8 ವಿಕೆಟ್‌ಗಳಿಂದ ಸೋಲು ಕಂಡಿತ್ತು. ಈ ಮೂರು ಸೋಲಿನೊಂದಿಗೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಣಾಹಣಿಯೂ ತಲೆಕೆಳಗಾಗಿದೆ.
ಏಕೆಂದರೆ, ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳನ್ನು ಗೆದ್ದಿದ್ದರೇ... ಟೀಂ ಇಂಡಿಯಾಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ನೇರವಾಗಿ ಫೈನಲ್ ಪ್ರವೇಶಿಸುವ ಅವಕಾಶವಿತ್ತು. ಆದರೆ, ಭಾರತ ತಂಡ ಡಬ್ಲ್ಯುಟಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಶೇ 15.91 ಅಂಕಗಳನ್ನು ಕಳೆದುಕೊಂಡಿದೆ, ಇದುವರೆಗೆ ಆಡಿದ ಎಲ್ಲಾ ಮೂರು ಪಂದ್ಯಗಳಲ್ಲಿ ಸೋತಿದೆ. ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದೆ.
ಆದರೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ರೇಸ್‌ನಿಂದ ಟೀಂ ಇಂಡಿಯಾ ಹೊರಗುಳಿಯದಿರುವುದು ಗಮನಾರ್ಹ. ಭಾರತ ತಂಡ ಮುಂದಿನ ಐದು ಪಂದ್ಯಗಳ ಪೈಕಿ 4ರಲ್ಲಿ ಗೆದ್ದರೆ ಫೈನಲ್ ಪ್ರವೇಶಿಸುವ ಅವಕಾಶವಿದೆ. ಇದರರ್ಥ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯನ್ನು ಭಾರತ 4-0 ಅಂತರದಿಂದ ಗೆಲ್ಲಬೇಕಾಗಿದೆ. ಈ ಮೂಲಕ ನೇರವಾಗಿ ಫೈನಲ್ ಪ್ರವೇಶಿಸಬಹುದು.
ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 1 ಅಥವಾ 2 ಪಂದ್ಯಗಳನ್ನು ಸೋತರೆ, ಫೈನಲ್ ಪ್ರವೇಶಿಸಲು ಇತರ ತಂಡಗಳ ಫಲಿತಾಂಶಕ್ಕಾಗಿ ಕಾಯಬೇಕಾಗಿದೆ. ಅಂದರೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಶ್ರೀಲಂಕಾ (55.56%), ಮೂರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ (54.550%) ಮತ್ತು ನಾಲ್ಕನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ (54.17%) ಮುಂದಿನ ಪಂದ್ಯಗಳ ಫಲಿತಾಂಶಕ್ಕಾಗಿ ಎದುರು ನೋಡಬೇಕಾಗುತ್ತದೆ..
ಆದ್ದರಿಂದ ಭಾರತ ತಂಡ ನೇರವಾಗಿ ಫೈನಲ್ ಪ್ರವೇಶಿಸಲು ಆಸ್ಟ್ರೇಲಿಯಾ ತಂಡವನ್ನು 4-0 ಅಂತರದಿಂದ ಸೋಲಿಸಬೇಕಾಗಿದೆ. 65.79% ಅಂಕಗಳನ್ನು ಗಳಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಪ್ರವೇಶಿಸಬಹುದು. ಇದರೊಂದಿಗೆ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿ ಟೀಂ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ