Yashasvi Jaiswal Records : ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ನೇಪಾಳ ವಿರುದ್ಧ ಯಶಸ್ವಿ ಜೈಸ್ವಾಲ್ ಹೊಸ ದಾಖಲೆ ಬರೆದಿದ್ದಾರೆ. ಇಲ್ಲಿಯವರೆಗೆ ಯಾವುದೇ ಭಾರತೀಯ ಬ್ಯಾಟ್ಸ್ಮನ್ ಸಾಧಿಸಲು ಸಾಧ್ಯವಾಗದ ಶ್ರೇಷ್ಠ ದಾಖಲೆಯನ್ನು ಈ ಕಿರಿಯ ಆಟಗಾರ ಮಾಡಿದ್ದಾರೆ. ಯಶಸ್ವಿ ಜೈಸ್ವಾಲ್ ಈ ಪಂದ್ಯದಲ್ಲಿ 48 ಎಸೆತಗಳಲ್ಲಿ ಮೊದಲ ಟಿ20 ಅಂತಾರಾಷ್ಟ್ರೀಯ ಶತಕ ಸಿಡಿಸಿದ್ದಾರೆ.
ಯಶಸ್ವಿ ಜೈಸ್ವಾಲ್ ದಾಖಲೆ :
ಏಷ್ಯನ್ ಗೇಮ್ಸ್ (Asian Games Hangzhou) ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ನೇಪಾಳ ವಿರುದ್ಧ ಭರ್ಜರಿ ಶತಕ ಬಾರಿಸುವ ಮೂಲಕ ಯಶಸ್ವಿ ಜೈಸ್ವಾಲ್ ಇತಿಹಾಸ ನಿರ್ಮಿಸಿದ್ದಾರೆ. ಏಷ್ಯನ್ ಗೇಮ್ಸ್ನಲ್ಲಿ ಭಾರತದ ಪರ ಶತಕ ಬಾರಿಸಿದ ಮೊದಲ ಪುರುಷ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಯಶಸ್ವಿ ಜೈಸ್ವಾಲ್. ಏಷ್ಯನ್ ಗೇಮ್ಸ್ ನಲ್ಲಿ ನೇಪಾಳ ವಿರುದ್ಧದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ 7 ಸಿಕ್ಸರ್ ಮತ್ತು 8 ಬೌಂಡರಿಗಳನ್ನು ಬಾರಿಸಿದರು. ಯಶಸ್ವಿ ಜೈಸ್ವಾಲ್ ಅವರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತದ ಪರ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇದನ್ನೂ ಓದಿ :ಭಾರತದ ಈ 6 ಆಟಗಾರರು ವಿಶ್ವಕಪ್ನಲ್ಲಿ ಎದುರಾಳಿ ತಂಡಕ್ಕೆ ದುಸ್ವಪ್ನವಾಗಲಿದ್ದಾರೆ!
ಶುಭಮನ್ ಗಿಲ್ ದಾಖಲೆ ಮುರಿದ ಜೈಸ್ವಾಲ್ :
ಯಶಸ್ವಿ ಜೈಸ್ವಾಲ್ ಅವರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತದ ಪರ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಯಶಸ್ವಿ ಜೈಸ್ವಾಲ್ ಈ ವಿಷಯದಲ್ಲಿ ಶುಭಮನ್ ಗಿಲ್ ಅವರ ದಾಖಲೆಯನ್ನೂ ಮುರಿದಿದ್ದಾರೆ. ಶುಭಮನ್ ಗಿಲ್ ಈ ವರ್ಷ ನ್ಯೂಜಿಲೆಂಡ್ ವಿರುದ್ಧ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ತಮ್ಮ ಮೊದಲ ಶತಕ ದಾಖಲಿಸಿದ್ದರು. ಈ ವೇಳೆ ಶುಭಮನ್ ಗಿಲ್ ವಯಸ್ಸು 23 ವರ್ಷ 146 ದಿನಗಳಾಗಿತ್ತು. ಯಶಸ್ವಿ ಜೈಸ್ವಾಲ್ ಕೂಡಾ ಎಡಗೈ ಬ್ಯಾಟ್ಸ್ಮನ್. ಜೈಸ್ವಾಲ್ ತನ 21 ವರ್ಷ ವಯಸ್ಸಿನಲ್ಲಿಯೇ ಶತನ ಸಿಡಿಸಿ ಶುಭಮನ್ ಗಿಲ್ ದಾಖಲೆ ಬದಿಗಟ್ಟಿದ್ದಾರೆ.
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತದ ಪರ ಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟ್ಸ್ಮನ್ :
21 ವರ್ಷ 279 ದಿನಗಳು - ಯಶಸ್ವಿ ಜೈಸ್ವಾಲ್ ನೇಪಾದ ವಿರುದ್ದ
23 ವರ್ಷ 146 ದಿನಗಳು - ಶುಭಮನ್ ಗಿಲ್ ನ್ಯೂಜಿಲೆಂಡ್ ವಿರುದ್ಧ
23 ವರ್ಷ 156 ದಿನಗಳು - ಸುರೇಶ್ ರೈನಾ ದಕ್ಷಿಣ ಆಫ್ರಿಕಾ ವಿರುದ್ಧ
ಇದನ್ನೂ ಓದಿ : 2023ರ ವಿಶ್ವಕಪ್’ನಲ್ಲಿ ಆಡುತ್ತಿರುವ 5 ಶ್ರೀಮಂತ ಆಟಗಾರರು ಇವರೇ! ಈ ಪಟ್ಟಿಯಲ್ಲಿದ್ದಾರೆ ಇಬ್ಬರು ಭಾರತೀಯರು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ