ನಾನು ಪಕ್ಷದ ಮುಖಂಡರಾದ ಸುಬ್ಬಣ್ಣ, ವಿ.ಸೋಮಣ್ಣ ಮತ್ತು ಅರವಿಂದ್ ಲಿಂಬಾವಳಿ ಅವರ ಮಾರ್ಗದರ್ಶನದಲ್ಲಿ ಬೆಂಗಳೂರು ಬಿಜೆಪಿಯನ್ನೇ ಮುನ್ನಡೆಸಲು ಇಷ್ಟಪಡುತ್ತೇನೆ ಎಂದು ಆರ್.ಅಶೋಕ್ ಹೇಳಿದ್ದಾರೆ.
ಅನಂತ್ ಕುಮಾರ್ ಅಂತಿಮ ಸಂಸ್ಕಾರ ಇಂದು ನಡೆಯಲಿದೆ. ಬೆಳಗ್ಗೆ 8ಗಂಟೆಯಿಂದ 9-30ರವರೆಗೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯ ನೆಲಮಹಡಿಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ.
ಕೇಂದ್ರ ಸಚಿವ ಹೆಚ್.ಎನ್.ಅನಂತ್ ಕುಮಾರ್ ಬಿಜೆಪಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಕರ್ನಾಟಕದ ನಾಯಕರಲ್ಲಿ ಪ್ರಮುಖರು. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾಗಿದ್ದ ಇವರು, ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದರು. ಆದರೆ ಅನಾರೋಗ್ಯದ ಕಾರಣದಿಂದಾಗಿ ನವೆಂಬರ್ 12, 2018ರಂದು ಕೊನೆಯುಸಿರೆಳೆದರು.
ದೆಹಲಿಯ ಸಂಸತ್ತಿಗೂ ಇತ್ತ ರಾಜ್ಯದ ವಿಧಾನಸಭೆಗೂ ಸೇತುವೆಯಾಗಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಕನ್ನಡ ಮತ್ತು ಕರ್ನಾಟಕದ ವಿಷಯಗಳು ಬಂದಾಗ ಯಾವಾಗಲೂ ರಾಜ್ಯದ ಗಟ್ಟಿ ಧ್ವನಿಯಾಗಿದ್ದರು ಇಂತಹ ವ್ಯಕ್ತಿಯ ಜೊತೆಗಿನ ಒಡನಾಟದ ಬಗ್ಗೆ ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರು ನುಡಿನಮನ ಸಲ್ಲಿಸಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಅನಂತ್ ಕುಮಾರ್, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕನ್ನಡದಲ್ಲಿ ಭಾಷಣ ಆರಂಭಿಸುವ ಮೂಲಕ ಕನ್ನಡ ನಾಡು, ನುಡಿಯ ಹಿರಿಮೆಯನ್ನು ಹೆಚ್ಚಿಸಿದ್ದರು.
"ಕಾಂಗ್ರೇಸ್ ಮುಸ್ಲಿಮ್ ಸಹೋದರಿಯರೊಂದಿಗೆ ನ್ಯಾಯವನ್ನು ಖಾತರಿ ಮಾಡುವ ಬಗ್ಗೆ ಯೋಚಿಸುತ್ತಿಲ್ಲ, ಅವರು ಈ ಪ್ರಕರಣದಲ್ಲಿ ಷಾ ಬಾನೋ ಪ್ರಕರಣದಂತೆ ಅನ್ಯಾಯ ಮಾಡುತ್ತಿದ್ದಾರೆ" ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.