ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಿಜೆಪಿ ಸಭೆಯಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಈ ವಿಚಾರವನ್ನು ಇಲ್ಲಿಗೆ ಬಿಡುವುದಿಲ್ಲ ಇದನ್ನು ರಾಷ್ಟ್ರಪತಿಯವರ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.ಈ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷದ ನಾಯಕ ಕಿಡಿ ಕಾರಿದ್ದಾರೆ.
ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ. ಆದರೆ, ಈ ಹಿಂದೆ ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾದ ಆಪರೇಶನ್ ಕಮಲದ ಬಗ್ಗೆಯೂ ತನಿಖೆ ನಡೆಯಲಿ ಎಂದು ಖರ್ಗೆ ಆಗ್ರಹಿಸಿದ್ದಾರೆ.
ಇಡೀ ದೇಶದ ಮುಂದೆ ಬಿಜೆಪಿ ಬಣ್ಣ ಬಯಲಾಗಿದೆ. ಸ್ವಚ್ಛ ಬಿಜೆಪಿ ಕರ್ನಾಟಕದ ಸಜ್ಜನರು, ಸಂಘ ಪರಿವಾರದ ಸಂಸ್ಕೃತಿ ರಕ್ಷಕರು ಯಾವ ಬಿಲದಲ್ಲಿ ಅಡಗಿದ್ದಾರೆ? ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.