ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿಯ ವಿರುದ್ಧ ಕಾಂಗ್ರೆಸ್ ನವೆಂಬರ್ 5-15 ರಿಂದ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್ ನವೆಂಬರ್ 1-8 ರವರೆಗೆ 35 ಪತ್ರಿಕಾಗೋಷ್ಠಿಗಳನ್ನು ನಡೆಸಲಿದೆ. ಪಕ್ಷದ ಹಿರಿಯ ಮುಖಂಡರು ಈ ಪತ್ರಿಕಾಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ದೇಶದ ಆರ್ಥಿಕ ಕುಸಿತದ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಶಿವಸೇನಾ ತರಾಟೆಗೆ ತೆಗೆದುಕೊಂಡಿದೆ. ಜಿಎಸ್ಟಿ ಹಾಗೂ ನೋಟು ನಿಷೇಧದಂತಹ ಕ್ರಮಗಳಿಂದಾಗಿ ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ ಎಂದು ಶಿವಸೇನಾ ಹೇಳಿದೆ.
ನವೆಂಬರ್ 18 ರಿಂದ ಪ್ರಾರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ದೇಶದ ಆರ್ಥಿಕ ಕುಸಿತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಮುಖ್ಯ ವಿರೋಧ ಪಕ್ಷದ ಕಾಂಗ್ರೆಸ್ ಯೋಜಿಸುತ್ತಿದೆ.
ಸಾರ್ವಜನಿಕ ವಲಯದ ಖಾಸಗೀಕರಣದ ತಡೆ ಮತ್ತು ಕನಿಷ್ಠ ಮಾಸಿಕ ವೃದ್ಧಾಪ್ಯ ಮತ್ತು ವಿಧವಾ ಪಿಂಚಣಿಯನ್ನು 3,000 ರೂ.ಗಳಿಗೆ ಹೆಚ್ಚಿಸುವುದು, ನೌಕರರ ಕನಿಷ್ಠ ವೇತನವನ್ನು ತಿಂಗಳಿಗೆ 21,000 ರೂ. ನಿಗದಿಪಡಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 10 ರಿಂದ 16 ರವರೆಗೆ ಪ್ರತಿಭಟನೆ ನಡೆಸಲು ಎಡಪಕ್ಷಗಳು ನಿರ್ಧರಿಸಿವೆ.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಸೆಪ್ಟಂಬರ್ ತಿಂಗಳ ಅಂಕಿ ಅಂಶಗಳ ಪ್ರಕಾರ ಜಿಎಸ್ಟಿ 91,916 ಕೋಟಿ ರೂ.ಆಗಿದ್ದು, ಆ ಮೂಲಕ ಜಿಎಸ್ಟಿ ಸಂಗ್ರಹವು 19 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಇದರ ಹಿಂದಿನ ತಿಂಗಳಲ್ಲಿ 98,202 ಕೋಟಿ ರೂ ಎನ್ನಲಾಗಿದೆ.
ಆರ್ಥಿಕ ಹಿಂಜರಿತದ ಬಗ್ಗೆ ರಾಜಕೀಯ ಮಾಡಬೇಡಿ ಮತ್ತು ತಜ್ಞರ ಸಹಾಯದಿಂದ ದೇಶಕ್ಕೆ ಸಹಾಯ ಮಾಡಬೇಡಿ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನಮೋಹನ್ ಸಿಂಗ್ ಕರೆ ನೀಡಿದ್ದಾರೆ. ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸುವುದು ರಾಷ್ಟ್ರದ ಹಿತಾಸಕ್ತಿ ಎಂದು ಶಿವಸೇನೆ ಮುಖವಾಣಿ 'ಸಾಮ್ನಾ' ವರದಿ ಮಾಡಿದೆ.
ಇತ್ತೀಚಿಗೆ ಬಿಡುಗಡೆಯಾದ ಕೇಂದ್ರ ಅಂಕಿ ಅಂಶ ಕಚೇರಿಯ (ಸಿಎಸ್ಒ) ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಏಪ್ರಿಲ್-ಜೂನ್ 2019 ರ ಭಾರತದ ಬೆಳವಣಿಗೆಯ ದರವು ಕಳೆದ ವರ್ಷದ ಇದೇ ಅವಧಿಯಲ್ಲಿನ ಶೇಕಡಾ 8 ಕ್ಕೆ ಹೋಲಿಸಿದರೆ 5 ಕ್ಕೆ ಇಳಿದಿದೆ. ಆ ಮೂಲಕ ಭಾರತದ ಆರ್ಥಿಕ ಪರಿಸ್ಥಿತಿ ಈಗ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿರುವುದು ಸ್ಪಷ್ಟವಾಗಿದೆ.
ಯಾವುದೇ ನೂತನ ಆರ್ಥಿಕ ನೀತಿ ಜಾರಿಗೆ ಬರದ ಹೊರತು ದೇಶವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಯನ್ನು ತಲುಪುವುದಿಲ್ಲ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಶನಿವಾರ ಹೇಳಿದ್ದಾರೆ.
2019-20ರ ವಾರ್ಷಿಕ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) 7 ವರ್ಷದಲ್ಲೇ ಕನಿಷ್ಠ ಶೇಕಡಾ 5 ಕ್ಕೆ ಕುಸಿದಿದ್ದರಿಂದಾಗಿ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿ ಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.