ಗುರುನಾನಕ್ ದೇವ್ ಜಿ ಅವರ 550 ನೇ ಜನ್ಮ ದಿನಾಚರಣೆಯ ಆಚರಣೆಗೆ ಸಮಯಕ್ಕೆ ಸರಿಯಾಗಿ ತಯಾರಿ ಮಾಡಿದ್ದಕ್ಕಾಗಿ ನನ್ನ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ.
"ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ' ಮತ್ತು ನಾನು ರಾಜೀನಾಮೆ ನೀಡುವುದಿಲ್ಲ. ಪ್ರತಿಭಟನೆಯು ಕಾರ್ಯಸೂಚಿ ಆಧಾರಿತವಾಗಿದೆ ಮತ್ತು ಇದಕ್ಕೆ ವಿದೇಶಿ ಬೆಂಬಲವಿದೆ" ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ.
ಪಿಪಿಪಿ ಮುಖ್ಯಸ್ಥ ಬಿಲಾವಾಲ್ ಭುಟ್ಟೋ-ಜರ್ದಾರಿ ಶುಕ್ರವಾರ ರಾತ್ರಿ ನಡೆದ ಸಾರ್ವಜನಿಕ ಸಭೆಯಲ್ಲಿ 'ದೇಶದಲ್ಲಿ ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸುವುದು ನಮ್ಮ ಬೇಡಿಕೆ' ಎಂದು ಹೇಳಿದರು.
ಬಿಸಿಸಿಐ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿಗೆ ಬಗ್ಗೆ ಪಾಕ್ ವೇಗಿ ಶೋಯಬ್ ಅಖ್ತರ್ ಮೆಚ್ಚುಗೆ ನುಡಿಗಳನ್ನಾಡಿದ್ದಾರೆ. ನಾಯಕತ್ವದ ವಿಚಾರದಲ್ಲಿ ಗಂಗೂಲಿ ಪಾಕಿಸ್ತಾನದ ಇಮ್ರಾನ್ ಖಾನ್ ಇದ್ದಂತೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಜ್ವಾ ಪ್ರಧಾನಿ ಇಮ್ರಾನ್ ಖಾನ್ ಅನುಪಸ್ಥಿತಿಯಲ್ಲಿ ದೇಶದ ಉನ್ನತ ಉದ್ಯಮಿಗಳನ್ನು ಭೇಟಿ ಮಾಡಿರುವುದು ಪಾಕಿಸ್ತಾನದಲ್ಲಿ ಮತ್ತೊಂದು ಮಿಲಿಟರಿ ಸರ್ವಾಧಿಕಾರದ ಪರ್ವ ಆರಂಭವಾಗಲಿದೆಯೇ ಎನ್ನುವ ಅನುಮಾನಗಳು ಎದುರಾಗಿವೆ.
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭಯೋತ್ಪಾದಕರಿಗೆ ಆದರ್ಶ ಎಂದು ಬಿಜೆಪಿ ನಾಯಕ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ. ಇನ್ನು ಮುಂದುವರೆದು ಕ್ರೀಡಾ ಸಮೂಹ ಅವರನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
ಶನಿವಾರದಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಿಹಾರದ ಮುಜಾಫರ್ಪುರ್ ಜಿಲ್ಲೆ ಕೋರ್ಟ್ ನಲ್ಲಿ ಭಾರತದ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಕ್ಕಾಗಿ ಮತ್ತು ಪರಮಾಣು ಯುದ್ಧದ ಬೆದರಿಕೆ ಹಾಕಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ.
ವಿಮಾನವು ತಕ್ಷಣವೇ ನ್ಯೂಯಾರ್ಕ್ಗೆ ಹಿಂದಿರುಗಿ ಅಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ. ಈ ವಿಮಾನದಲ್ಲಿ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರೊಂದಿಗೆ ನಿಯೋಗವೂ ಇತ್ತು ಎಂದು ಸುದ್ದಿ ಸಂಸ್ಥೆ ಜಿಯೋ ಟಿವಿ ವರದಿ ಮಾಡಿದೆ.
ಯುಎನ್ ಜನರಲ್ ಅಸೆಂಬ್ಲಿ: ಯುಎನ್ನಲ್ಲಿ ಭಾರತದ ಮೊದಲ ಕಾರ್ಯದರ್ಶಿ ವಿದಿಶಾ ಮೈತ್ರಾ ಅವರು ಉತ್ತರಿಸುವ ಹಕ್ಕನ್ನು ಬಳಸಿಕೊಂಡು ಪಾಕಿಸ್ತಾನಕ್ಕೆ ಕನ್ನಡಿ ತೋರಿಸಿದರು. ಯುಎನ್ ನಲ್ಲಿ ಇಮ್ರಾನ್ ಖಾನ್ ಅವರ ಭಾಷಣವು ದ್ವೇಷದಿಂದ ತುಂಬಿದೆ ಎಂದು ಅವರು ಹೇಳಿದರು.
ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕಾಶ್ಮೀರದಲ್ಲಿನ ಮುಸ್ಲಿಮರ ಬಗ್ಗೆ ನಿರಂತರವಾಗಿ ಕಳವಳ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಈಗ ಅಮೇರಿಕಾ ಪಾಕ್ ಪ್ರಧಾನಿಗೆ ಚೀನಾದಲ್ಲಿನ ಮುಸ್ಲಿಮರ ಬಗ್ಗೆ ಯಾಕೆ ಅದು ಚಕಾರವೆತ್ತುತ್ತಿಲ್ಲ ಎಂದು ಪ್ರಶ್ನಿಸಿದೆ.
ವಾಸ್ತವವಾಗಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪಾಕಿಸ್ತಾನಿ ಪ್ರಧಾನಿ ಇಮ್ರಾನ್ ಖಾನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಈ ಸಮಯದಲ್ಲಿ, ಪತ್ರಕರ್ತರು ಉಭಯ ದೇಶಗಳ ನಾಯಕರಿಗೆ ಪ್ರಶ್ನೆಗಳನ್ನು ಕೇಳುತ್ತಿದ್ದರು.
ಭಾರತ ಬಯಸದಿದ್ದರೆ ಕಾಶ್ಮೀರ ವಿಚಾರವಾಗಿ ನಾನು ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದು, ಇದರಿಂದಾಗಿ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ಗೆ ಭಾರೀ ಮುಖಭಂಗವಾಗಿದೆ.
ವಿಶ್ವಸಂಸ್ಥೆ ಸಾಮಾನ್ಯ ಸಭೆ 74 ನೇ ಅಧಿವೇಶನದಲ್ಲಿ ಸೆಪ್ಟೆಂಬರ್ 27 ರಂದು ಭಾಷಣ ಮಾಡಲಿರುವ ಇಮ್ರಾನ್ ಖಾನ್ ಅದಕ್ಕೂ ಮುನ್ನ ಸೋಮವಾರದಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.