ಮಹಾರಾಷ್ಟ್ರ ಚುನಾವಣೆಯಲ್ಲಿ ಪಕ್ಷದ ಪ್ರದರ್ಶನದಿಂದ ಉತ್ತೇಜಿತರಾಗಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಈ ವರ್ಷದ ಆರಂಭದಲ್ಲಿ ಬಿಜೆಪಿ ಮುಖ್ಯಸ್ಥ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗಿನ ಭೇಟಿಯಲ್ಲಿ ಮಾಡಿ 50:50 ಒಪ್ಪಂದವನ್ನು ಬಿಜೆಪಿ ಗೌರವಿಸಬೇಕೆಂದು ಒತ್ತಾಯಿಸಿದರು.
ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಪರೋಕ್ಷವಾಗಿ ವ್ಯಂಗವಾಡಿರುವ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ದೇಶದಲ್ಲಿ ಉದ್ದ್ಯೋಗಗಳ ಸಂಖ್ಯೆಯಲ್ಲಿ ಕುಸಿತ ಕಾಣುತ್ತಿರುವುದು, ಹಾಗೂ ಉದ್ಯಮಗಳು ಮುಚ್ಚುತ್ತಿರುವುದು ಕಣ್ಣಿಗೆ ಕಾಣುತ್ತಿದೆ ಅದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.
ಒಂದು ತಿಂಗಳಿಗಿಂತಲೂ ಕಡಿಮೆ ಇರುವ ವಿಧಾನಸಭಾ ಚುನಾವಣೆಗೆ ಈಗ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲು ವಿಳಂಬದ ಮಧ್ಯೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಅವರೊಂದಿಗಿನ ಮಾತುಕತೆ ಉತ್ತಮವಾಗಿ ಪ್ರಗತಿಯಲ್ಲಿದೆ ಮತ್ತು ಶೀಘ್ರದಲ್ಲೇ ಅಂತಿಮ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.
ಶಿವಸೇನೆ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ಎರಡು ದಿನಗಳಲ್ಲಿ ಸೀಟು ಹಂಚಿಕೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಿವಸೇನೆ ಮುಖ್ಯಸ್ಥರು ಹೇಳಿದರು.
ಇಂದು ನಮ್ಮ ದೇಶವು ಸಂಪೂರ್ಣವಾಗಿ ಸ್ವತಂತ್ರವಾಗಿದೆ. ಅದಕ್ಕಾಗಿ ನಾನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಅಭಿನಂದಿಸುತ್ತೇನೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದರು.
ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ, ಪಾಕಿಸ್ತಾನದ ಸೇನಾ ಸಿಬ್ಬಂದಿಯ ಕೃತ್ಯವನ್ನು ತೀವ್ರವಾಗಿ ಖಂಡಿಸಿ, ಅಲ್ಲಿನ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ.
ತಮ್ಮ ಪಕ್ಷದ ಅಭ್ಯರ್ಥಿ ಚಂದ್ರಕಾಂತ್ ಖೈರ್ ಅವರ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ ತಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಕಾರಣವನ್ನು ತಿಳಿಸಿದರು.
ದೇಶದ್ರೋಹಿಗಳನ್ನು ಗಲ್ಲಿಗೇರಿಸದೆ, ಅವರನ್ನು ಬೆಂಬಲಿಸಿ ಆ ಕಾನೂನನ್ನೇ ರದ್ದುಪಡಿಸುತ್ತೇವೆ ಎಂದಿರುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅವಕಾಶ ನೀಡಬಾರದು ಎಂದು ಠಾಕ್ರೆ ಕರೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.