1984 ರಲ್ಲಿ ದೆಹಲಿಯಲ್ಲಿ ನಡೆದ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಅವರನ್ನು ಹೆಸರಿಸುವ ಪ್ರಕರಣವನ್ನು ಶೀಘ್ರದಲ್ಲೇ ಪುನಃ ತೆರೆಯಬಹುದು, ಇದಕ್ಕೆ ಪೂರಕವಾಗಿ ಈಗಾಗಲೇ ಅಮಿತ್ ಶಾ ಅವರ ಗೃಹ ಸಚಿವಾಲಯ ಇದಕ್ಕೆ ಗ್ರೀನ್ ಸಿಗ್ನಲ್ ನೀಡಿರುವುದು ಈ ಬೆಳವಣಿಗೆಗಳಿಗೆ ಪುಷ್ಟಿ ನೀಡಿದೆ.
ಯಾವುದೇ ನಾಯಕ ಅಥವಾ ಸರ್ಕಾರದೊಂದಿಗೆ ಯಾರಿಗಾದರೂ ಸಮಸ್ಯೆ ಇದ್ದರೆ ಅದನ್ನು ಅವರು ಪಕ್ಷದೊಳಗಿನ ಸೂಕ್ತ ವೇದಿಕೆಗೆ ಕೊಂಡೊಯ್ಯಬೇಕು, ಅವರ ಸಮಸ್ಯೆಗಳಿಗೆ ಖಂಡಿತವಾಗಿಯೂ ಪರಿಹಾರ ಸಿಗುತ್ತದೆ ಎಂದು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು.
ಇತರ ಹಿಂದುಳಿದ ವರ್ಗಗಳಿಗೆ ರಾಜ್ಯದಲ್ಲಿ 27 ಶೇ ಮೀಸಲಾತಿ ನೀಡುವ ಪ್ರಸ್ತಾವನೆಯನ್ನು ಸರ್ಕಾರ ಅಂಗೀಕರಿಸಿದೆ. ಒಬಿಸಿ ಮೀಸಲಾತಿಯ ಬಗ್ಗೆ ಮಾನ್ಸೂನ್ ಅಧಿವೇಶನದಲ್ಲಿ ಚರ್ಚಿಸಲಾಗುವುದು. ಮುಖ್ಯಮಂತ್ರಿ ಕಮಲ್ ನಾಥ್ ಅವರು ಚುನಾವಣೆಗೆ ಮುಂಚಿತವಾಗಿ ಒಬಿಸಿ ಮೀಸಲಾತಿ ಹೆಚ್ಚಳದ ಭರವಸೆ ನೀಡಿದ್ದರು.
ಲೋಕಸಭಾ ಚುನಾವಣೆಯಲ್ಲಿ ಅತಿ ಕಠಿಣ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಹಾಕಿದ್ದ ಸವಾಲನ್ನು ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಸ್ವೀಕರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.