ಪೊಲೀಸ್ ಸಿಬ್ಬಂದಿಯಿಂದ ಜಿಲ್ಲಾಧಿಕಾರಿವರೆಗಿನ ಅಧಿಕಾರಿಗಳು ಬೆಳಗ್ಗೆಯಿಂದ ಸಂಜೆವರೆಗೆ ಜನರ ಜೊತೆಗಿದ್ದು ತಾಳ್ಮೆಯಿಂದ ಜನರ ನೋವು ಆಲಿಸುವುದನ್ನು, ಜನರು ಬದಲಾವಣೆ ಆಗುವದನ್ನು ನಾನು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಾಣುತ್ತಿದ್ದೇನೆ- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಹಳ್ಳಿಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜನರ ಭಾವನೆಗಳನ್ನು ಹತ್ತಿಕ್ಕಿ ಸಿಎಂ ಗ್ರಾಮ ವಾಸ್ತವ್ಯ ಮಾಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ಜನ ವಿರೋಧಿ ಕ್ರಮ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಜೂನ್ 21 ರಂದು ನಡೆದ ಜನತಾದರ್ಶನದಲ್ಲಿ ಯುವಕನ ತಾಯಿ ಭಾಗವಹಿಸಿ, ಮಗನ ಚಿಕಿತ್ಸೆಗಾಗಿ ಮನೆ, ಹೊಲ, ಎತ್ತುಗಳನ್ನು ಕಳೆದುಕೊಂಡು ಮೂವತ್ತು ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದರೂ, ಗುಣಮುಖವಾಗಿಲ್ಲ ಎಂದು ದುಃಖ ತೋಡಿಕೊಂಡಿದ್ದರು.
ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು ಮಾಡಿದೆ- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಈ ಹಿಂದೆ 2006 ರಲ್ಲಿ ಗ್ರಾಮವಾಸ್ತವ್ಯ ಮಾಡಿದ್ದು ಫಲಪ್ರದವಾಗಿದೆ. ಈ ಬಾರಿ ಪ್ರತಿ ತಿಂಗಳು ಒಂದು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುವುದು. ಚಂಡ್ರಕಿ ಗ್ರಾಮದಿಂದ ಈ ಕಾರ್ಯಕ್ರಮ ಆರಂಭವಾಗಿದೆ.
ಚಂಡರಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜನತಾ ದರ್ಶನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಗ್ರಾಮದತ್ತ ಜನಸಾಗರವೇ ಹರಿದು ಬರುತ್ತಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸುಮಾರು 15 ಕೌಂಟರುಗಳನ್ನು ಸ್ಥಾಪಿಸಲಾಗಿದೆ. ಮಹಿಳೆಯರು, ವಿಕಲಚೇತನರಿಗೆ ಪ್ರತ್ಯೇಕ ಕೌಂಟರುಗಳಿವೆ.
ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಯಾದಗಿರಿ ರೈಲು ನಿಲ್ದಾಣಕ್ಕೆ ಮುಂಜಾನೆ 4.45 ಕ್ಕೆ ಕರ್ನಾಟಕ ಎಕ್ಸ್ಪ್ರೆಸ್ ನಲ್ಲಿ ಬಂದಿಳಿದರು.
ಗ್ರಾಮದ ಜನರ ಸಮಸ್ಯೆಗಳ ಬಗ್ಗೆ ಗಮನಹರಿಸದ ಸಿಎಂ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಒಂದು ಗಿಮಿಕ್ ಆಗಿದೆ. ಮೊದಲು ಇದನ್ನು ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಲಿ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.