ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನೇತೃತ್ವದ ಹಿಂದಿನ ಟಿಡಿಪಿ ಸರ್ಕಾರವು ಪ್ರಜಾ ವೇದಿಕೆ ಕಟ್ಟಡವನ್ನು ನಿರ್ಮಿಸಿತ್ತು. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕಟ್ಟಡವನ್ನು ಅಕ್ರಮವಾಗಿ ಕಟ್ಟಲಾಗಿದೆ ಎಂದು ಆರೋಪಿಸಿ ಅದನ್ನು ನೆಲಸಮ ಮಾಡಲು ಆದೇಶಿಸಿದ್ದರು.
ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಕುಟುಂಬಕ್ಕೆ ಒದಗಿಸಿದ್ದ ಜೆಡ್ + ಭದ್ರತೆಯನ್ನು ಈಗ ಕಡಿತಗೊಳಿಸಲಾಗಿದೆ. ಈಗ ಜೆಡ್ + ಬದಲಿಗೆ ನಾಲ್ಕು ಸಶಸ್ತ್ರ ಬಂದೂಕುಧಾರಿಗಳನ್ನು ನೀಡಲಾಗಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತುಎನ್.ಚಂದ್ರಬಾಬು ನಾಯ್ಡು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರು ಆಗುವ ಕುರಿತಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರಾಮ್ ದಾಸ್ ಅಥವಾಲೆ ಚುನಾವಣೆ ಫಲಿತಾಂಶದ ನಂತರ ಅವರಿಬ್ಬರಿಗೂ ಈಗ ಮೋದಿ ಎದುರಿಸುವುದು ಕಷ್ಟವಾಗಿರಬಹುದು ಎಂದು ಹೇಳಿದರು.
ಜಗನ್ ಮೋಹನ್ ರೆಡ್ಡಿ ನೇತೃತ್ವದ ಯೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುನ್ನಡೆ ಸಿಕ್ಕಿದ. ಮತ್ತೊಮ್ಮೆ ಅಧಿಕಾರ ಹಿಡಿಯುವ ಭರವಸೆಯಲ್ಲಿದ್ದ ಟಿಡಿಪಿ ಚಂದ್ರಬಾಬು ನಾಯ್ಡುಗೆ ಹಿನ್ನಡೆಯಾಗಿದೆ.
ಬಿಜೆಪಿಯೇತರ ಸರ್ಕಾರ ರಚನೆಗೆ ಪಣತೊಟ್ಟಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈಗ ಹಲವು ರಾಷ್ಟ್ರೀಯ ಪ್ರಾದೇಶಿಕ ಪಕ್ಷಗಳ ನಾಯಕರನ್ನು ಭೇಟಿ ಮಾಡಿದ ನಂತರ ಇಂದು ರಾತ್ರಿ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಹೆಚ್ಡಿಕೆ ಅವರನ್ನು ಭೇಟಿ ಮಾಡಿ ಮಹತ್ವದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರವನ್ನು ರಚನೆ ಮಾಡುವ ನಿಟ್ಟಿನಲ್ಲಿ ಎಲ್ಲ ಪ್ರತಿಪಕ್ಷಗಳನ್ನು ಭೇಟಿ ಮಾಡುತ್ತಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈಗ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಲಿದ್ದಾರೆ ಎಂದು ಸುದ್ದಿಮೂಲಗಳು ತಿಳಿಸಿವೆ.
ಮತಯಂತ್ರ ಬಳಕೆ ವಿಚಾರವಾಗಿ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಚುನಾವಣಾ ಆಯೋಗ ಬಿಜೆಪಿ ಬ್ರ್ಯಾಂಚ್ ಆಫೀಸ್ ಆಗಿ ಪರಿವರ್ತನೆಯಾಗಿದೆ ಎಂದು ಕಿಡಿ ಕಾರಿದ್ದಾರೆ.
ಜಗನ್ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ. ಟಿಡಿಪಿ ನೇತೃತ್ವದ ಸರ್ಕಾರದ ಪ್ರಭಾವ ರಾಜ್ಯ ಪೋಲೀಸರ ಮೇಲೆ ಬೀರುವ ಸಾಧ್ಯತೆ ಇರುವುದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತು ಅವರ ಶಾಸಕರು ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರವು ತೋರುತ್ತಿರುವ ನೀತಿಯ ವಿಚಾರವಾಗಿ ಕಪ್ಪುಶರ್ಟ್ ತೊಟ್ಟು ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯಲ್ಲಿ ಕೇಂದ್ರದ ವಿರುದ್ಧ ಪ್ರತಿಭಟಿಸಿದರು.
ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ದೇಶವನ್ನು ಅರಜಾಕತೆಯಿಂದ ಪಾರು ಮಾಡುವ ನಿಟ್ಟಿನಲ್ಲಿ ಬಿಜೆಪಿ ವಿರುದ್ದ ಎಲ್ಲ ಪಕ್ಷಗಳು ಒಂದಾಗಬೇಕಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದರು.
ಬಾಹುಬಲಿ ಚಿತ್ರದಲ್ಲಿ ಬಲ್ಲಾಳ ದೇವ್ ನಾಗಿ ಖ್ಯಾತಿಗಳಿಸಿದ್ದ ರಾಣಾ ದಗ್ಗುಬಟಿ ಈಗ ಎನ್ ಟಿ ರಾಮರಾವ್ ಅವರ ಜೀವನ ಕುರಿತಾದ ಚಿತ್ರದಲ್ಲಿ ಆಂದ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದನ್ನು ಅವರು ಈಗ ಟ್ವಿಟ್ಟರ್ ನಲ್ಲಿ ಈಗ ಅವರು ಹಂಚಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.