ಸೋಮವಾರ ತಡರಾತ್ರಿ ಮೊಂಡಾಲ್ ಅವರು ತಮ್ಮ ಮಗಳ ಮನೆಯಿಂದ ಹಿಂತಿರುಗುತ್ತಿದ್ದ ಸಮಯದಲ್ಲಿ ದಾಳಿ ನಡೆಸಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರದ ಮತ್ತೊಂದು ಘಟನೆಯಲ್ಲಿ, 55 ವರ್ಷದ ಸ್ಥಳೀಯ ಬಿಜೆಪಿ ನಾಯಕನನ್ನು ರಾಜ್ಯದ ನಾಡಿಯಾ ಜಿಲ್ಲೆಯಲ್ಲಿ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.
ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಪಶ್ಚಿಮ ಬಂಗಾಳದಲ್ಲಿ ಜಂಗಲ್ ರಾಜ್ ಅಸ್ತಿತ್ವದಲ್ಲಿದೆ ಎಂದು ಹೇಳಿದ್ದಕ್ಕೆ ಪ್ರತ್ಯುತ್ತರ ನೀಡಿರುವ ಟಿಎಂಸಿ, ಅವರು ಜಂಗಲ್ ನಿಂದ ಬಂದಿರುವುದರಿಂದ ಎಲ್ಲ ಕಡೆ ಬರಿ ಜಂಗಲ್ ನ್ನೇ ಕಾಣುತ್ತಿದ್ದಾರೆ ಎಂದು ತಿರುಗೇಟು ನೀಡಿದೆ.
ಚುನಾವಣಾ ಚಿಹ್ನೆ (ಮೀಸಲಾತಿ ಮತ್ತು ಹಂಚಿಕೆ) ಆದೇಶ, 1968 ರ ಪ್ರಕಾರ, ರಾಜಕೀಯ ಪಕ್ಷವು ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯುತ್ತದೆ, ಅದರ ಅಭ್ಯರ್ಥಿಗಳು ಲೋಕಸಭೆ ಅಥವಾ ವಿಧಾನಸಭಾ ಚುನಾವಣೆಗಳಲ್ಲಿ ನಾಲ್ಕು ಅಥವಾ ಹೆಚ್ಚಿನ ರಾಜ್ಯಗಳಲ್ಲಿ ಕನಿಷ್ಠ ಆರು ಶೇಕಡಾ ಮತಗಳನ್ನು ಪಡೆದರೆ ಮಾತ್ರ ಈ ಸ್ಥಾನಮಾನ ಸಿಗುತ್ತದೆ.
ಸಿಪಿಎಂ, ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪಶ್ಚಿಮ ಬಂಗಾಳದ 107 ಶಾಸಕರು ಶೀಘ್ರದಲ್ಲೇ ಬಿಜೆಪಿಗೆ ಸೇರಲಿದ್ದಾರೆ ಎಂದು ಬಿಜೆಪಿ ನಾಯಕ ಮುಕುಲ್ ರಾಯ್ ಹೇಳಿದ್ದಾರೆ.
ಇತರ ರಾಜ್ಯಗಳಲ್ಲಿ ಅನೇಕ ಹಿಂಸಾಚಾರಗಳು ನಡೆದಿದ್ದರೂ ಪಶ್ಚಿಮ ಬಂಗಾಳವನ್ನು ಸಂಸತ್ತಿನಲ್ಲಿ ಅನಗತ್ಯವಾಗಿ ಗುರಿಯಾಗಿಸಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಂಗಳವಾರ ಹೇಳಿದೆ.
ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ, ಪೊಲೀಸ್ ಅಧಿಕಾರಿಗಳು ತಮ್ಮ ಮಾತುಗಳನ್ನು ಕೇಳುತ್ತಿಲ್ಲ ಎಂಬ ಇತ್ತೀಚಿನ ಹೇಳಿಕೆಯ ವಿರುದ್ಧ ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ವಾಗ್ಧಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.