ಲೋಕಸಭೆ ಚುನಾವಣೆಯಲ್ಲಿ ಆರ್ಜೆಡಿ ಹೀನಾಯ ಸೋಲಿನಿಂದ ಕಂಗೆಟ್ಟಿದೆ.ಅದರಲ್ಲೂ ಈಗ ತೇಜ್ ಪ್ರತಾಪ್ ಮತ್ತು ತೇಜಸ್ವಿ ಯಾದವ್ ನಡುವಿನ ಶೀತಲ ಸಮರ ನಿಜಕ್ಕೂ ತಲೆ ನೋವಾಗಿ ಪರಿಣಮಿಸಿದೆ.ಈ ಹಿನ್ನಲೆಯಲ್ಲಿ ಈಗ ಮಾಜಿ ಮುಖ್ಯಮಂತ್ರಿ ರಾಬ್ಡಿದೇವಿ ಪಕ್ಷವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ.
ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ಮುಖಂಡ ತೇಜಶ್ವಿ ಯಾದವ್ ಅವರಿಗೆ ತಮ್ಮ ತಂದೆ ಹಾಗೂ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಲು ಬಿಜೆಪಿ ಅನುಮತಿ ನಿರಾಕರಿಸಿದೆ ಎಂದು ಸರಣಿ ಟ್ವೀಟ್ ಗಳ ಮೂಲಕ ಆರೋಪಿಸಿದ್ದಾರೆ.
ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿಗೆ ಉತ್ತಮ ಪ್ರಧಾನಿಯಾಗುವ ಎಲ್ಲ ಗುಣಗಳಿವೆ ಎಂದು ಆರ್ಜೆಡಿ ನಾಯಕ ತೇಜಶ್ವಿ ಯಾದವ್ ಹೇಳಿದ್ದಾರೆ. ಆದರೆ ಬಿಜೆಪಿಯು ರಾಹುಲ್ ಗಾಂಧಿ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ನೂರಾರು ಕೋಟಿಗಳನ್ನು ಖರ್ಚು ಮಾಡಿದೆ ಎಂದರು.ಇದೇ ವೇಳೆ ಅವರು ಪ್ರಧಾನಮಂತ್ರಿ ವಿಚಾರವನ್ನು ಮಹಾಮೈತ್ರಿ ಸದಸ್ಯರು 2019 ರ ಚುನಾವಣೆಯ ನಂತರ ಒಟ್ಟಾಗಿ ನಿರ್ಧರಿಸುತ್ತಾರೆ ಎಂದು ತಿಳಿಸಿದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.